ಅಂತೂ ಬೋನಿಗೆ ಬಿತ್ತು ನರಭಕ್ಷಕ ಚಿರತೆ!
Team Udayavani, Dec 22, 2018, 4:53 PM IST
ಕಂಪ್ಲಿ: ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಹೊತ್ತೂಯ್ದು ಕೊಂದು ಹಾಕಿ ನಂತರ ನಾಪತ್ತೆಯಾಗಿದ್ದ ನರಭಕ್ಷಕ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಸತತ ಹನ್ನೊಂದು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸೋಮಲಾಪುರ ಗ್ರಾಮಸ್ಥರಿಗೆ ಚಳ್ಳೆ ಹಣ್ಣು ತಿನಿಸುತ್ತಿದ್ದ ಚಿರತೆ ಶುಕ್ರವಾರ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಮನೆ ಅಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಬಾಲಕನನ್ನು ಹೊತ್ತೂಯ್ದ ನಂತರ ಸೋಮಲಾಪುರ ಗ್ರಾಮದ ಜನ ತಲ್ಲಣಗೊಂಡಿದ್ದರು. ಗುಡ್ಡದ ಬುಡದಲ್ಲೇ ಇದ್ದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಚಿರತೆ ಸೆರೆಹಿಡಿಯದಿದ್ದಲ್ಲಿ ಮತ್ತಷ್ಟು
ಸಾವು ನೋವು ಸಂಭವಿಸುವ ಸಾಧ್ಯತೆ ಇತ್ತು. ಹೀಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡು ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.
ಅರಣ್ಯ ಇಲಾಖೆ ಮೊದಲ ಹಂತದಲ್ಲಿ ಮೂರು, ಎರಡನೇ ಹಂತದಲ್ಲಿ ನಾಲ್ಕು ಹಾಗೂ ನಂತರ ಒಟ್ಟು ಏಳು ಬೋನ್‌ಗಳನ್ನು ಅಳವಡಿಸಿತ್ತು. ಆದರೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಮಾತ್ರ ಬೀಳುತ್ತಿರಲಿಲ್ಲ. ಇದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ತಲೆನೋವಿಗೆ ಕಾರಣವಾಗಿತ್ತು.
ಪ್ರತಿದಿನ ಈ ಭಾಗದ ಮೆಟ್ರಿ, ದೇವಲಾಪುರ, ಸೋಮಲಾಪುರ, ಹಳೇದರೋಜಿ, ಮಾದಾಪುರಗಳಲ್ಲಿ ಕಾಣಿಸಿಕೊಳ್ಳುವ ಚಿರತೆ ಕುರಿ ಮತ್ತು ನಾಯಿಗಳನ್ನು ಹೊತ್ತೂಯ್ದು ಗುಡ್ಡದಲ್ಲಿ ಮರೆಯಾಗುತ್ತಿತ್ತು. ಚಿರತೆ ಪತ್ತೆಗಾಗಿ ಡಿಜಿಟಲ್ ಕ್ಯಾಮೆರಾ ಮತ್ತು ಟ್ರ್ಯಾಪ್ ಕ್ಯಾಮೆರಾ ಅಳವಡಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಚಿರತೆಯ ಚಲನವಲನ ಹಾಗೂ ಹೆಜ್ಜೆ ಗುರುತು ಪತ್ತೆ ಹಚ್ಚಲು ಡ್ರೋಣ್ ಕ್ಯಾಮೆರಾ ಬಳಸುವ ಜೊತೆಗೆ ಸ್ಥಳೀಯರೊಂದಿಗೆ ಕೂಂಬಿಂಗ್ ನಡೆಸಲಾಯಿತು. ಆದರೂ ನರಭಕ್ಷಕ ಚಿರತೆ ಮಾತ್ರ ಯಾರ ಕಣ್ಣಿಗೂ ಬಿದ್ದಿರಲಿಲ್ಲ.
ಆದರೆ ಕೊನೆಗೂ ಶುಕ್ರವಾರ ಬೆಳಗಿನ ಜಾವ ಸೋಮಲಾಪುರ ಗ್ರಾಮದ ಎರದಮಟ್ಟಿಯ ಚೆಕ್ ಡ್ಯಾಮ್ ಹತ್ತಿರ ಇಡಲಾಗಿದ್ದ ಬೋನ್‌ನಲ್ಲಿ ಚಿರತೆ ಸೆರೆಯಾಗಿದೆ. ಸೆರೆಯಾದ ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನ
ಜಮಾಯಿಸಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರು.
ಈ ಸಂದರ್ಭದಲ್ಲಿ ಹೊಸಪೇಟೆ ವಲಯ ಅರಣ್ಯಾಧಿಕಾರಿ ಟಿ.ಭಾಸ್ಕರ್, ಉಪವಲಯ ಅರಣ್ಯಾಧಿಕಾರಿ ಎಸ್.ದೇವರಾಜ, ಸಿಪಿಐ ಡಿ.ಹುಲುಗಪ್ಪ, ಪಿಎಸ್‌ಐ ಕೆಬಿ ವಾಸುಕುಮಾರ್ ಮತ್ತು ಸಿಬ್ಬಂದಿ ಹಾಜರಿದ್ದರು.
ಸ್ಥಳೀಯರು ಮತ್ತು ಇಲಾಖೆ ಸಿಬ್ಬಂದಿ ನಿರಂತರ ಶ್ರಮದಿಂದ ನರಭಕ್ಷಕ ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿದಿದ್ದು,
ಇದು ಈಗಾಗಲೇ ಮನುಷ್ಯನ ಮೇಲೆ ದಾಳಿ ಮಾಡಿರುವುದರಿಂದ ಇದನ್ನು ಕಾಡಿನಲ್ಲಿ ಬಿಡದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಸ್ಥಳಾಂತರಿಸಲಾಗುವುದು. ಇನ್ಮುಂದೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೂ ಜನತೆ ಎಚ್ಚರಿಕೆಯಿಂದ ಇರುವುದು ಉತ್ತಮ.
ಡಾ| ಪಿ.ರಮೇಶಕುಮಾರ್, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.