ಮತ್ತೂಮ್ಮೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಂಕಲ್ಪ
Team Udayavani, Feb 11, 2018, 6:30 AM IST
ಹೊಸಪೇಟೆ: ಜಾರಿಗೊಳಿಸಿದ ಯೋಜನೆ, ಕೈಗೊಂಡ ಅಭಿವೃದ್ಧಿ ಕಾರ್ಯ ಹಾಗೂ ಭರವಸೆ ಈಡೇರಿಸಿದ್ದನ್ನು ಮುಂದಿಟ್ಟುಕೊಂಡು ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್, ವಿಜಯನಗರ ಸಾಮ್ರಾಜ್ಯದ ಹೆಬ್ಟಾಗಿಲು ಐತಿಹಾಸಿಕ ಹೊಸಪೇಟೆಯಲ್ಲಿ ರಣಕಹಳೆ ಊದಿದೆ.
ನಗರದಲ್ಲಿ ಶನಿವಾರ ನಡೆದ ಪಕ್ಷದ “ಜನಾಶೀರ್ವಾದ ಯಾತ್ರೆ’ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್ ಸೇರಿ ಹಲವು ಮುಖಂಡರು, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ರಲ್ಲದೆ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದರು.
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಟೀಕಾ ಪ್ರಹಾರ ನಡೆಸಿದ ಈ ಮುಖಂಡರು, ರಾಜ್ಯದಲ್ಲಿ ಈ ಹಿಂದೆ ಹಗರಣ, ಭ್ರಷ್ಟಾಚಾರ ನಡೆಸಿರುವ ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರ ಟೀಕಿಸುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಪ್ರತಿಪಾದಿಸಿದರು.
ಪ್ರಾಸ್ತಾವಿಕ ಮಾತನಾಡಿದ ಡಾ|ಜಿ. ಪರಮೇಶ್ವರ್, ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡ ಲಾಗಿದೆ. ಈ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದ ಯಾತ್ರೆ ನಡೆಸಿ, ಜನಾಶೀರ್ವಾದ ಕೋರಿದ್ದೆವು ಎಂದರು.
ಮೂವರಿಗೆ ರಾಹುಲ್ ಸ್ವಾಗತ: ಇದೇ ವೇಳೆ ಹೊಸಪೇಟೆ ಮಾಜಿ ಶಾಸಕ ಆನಂದ ಸಿಂಗ್, ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಹಾಗೂ ಹಗರಿ ಬೊಮ್ಮನಹಳ್ಳಿ ಜೆಡಿಎಸ್ ಶಾಸಕ ಭೀಮನಾಯ್ಕ ಅವರನ್ನು ರಾಹುಲ್ ಗಾಂಧಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಈ ಸಂದರ್ಭ ಆನಂದ ಸಿಂಗ್ ಹಾಗೂ ನಾಗೇಂದ್ರ ಅವರು ರಾಹುಲ್‌ಗೆ ಮಹಿರ್ಷಿ ವಾಲ್ಮೀಕಿ ವಿಗ್ರಹ ಹಾಗೂ ಬೆಳ್ಳಿ ಗದೆ ನೀಡಿ ಗೌರವಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್, ಎಸ್.ಆರ್.ಪಾಟೀಲ್,ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿ ಪ್ರಸಾದ್, ಸಚಿವ ಎಚ್.ಆಂಜನೇಯ, ಮಾಜಿ ಸಚಿವ ಅಂಬರೀಶ್ ಇತರರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್, ಎಐಸಿಸಿ ಕಾರ್ಯದರ್ಶಿಗಳಾದ ಸಾಕೇತ್ ಶೈಲೇಶ್‌ನಾಥ್, ಸತೀಶ್ ಜಾರಕಿಹೊಳಿ,ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್,ಸಂತೋಷ್ ಲಾಡ್ ಇನ್ನಿತರರು ಉಪಸ್ಥಿತರಿದ್ದರು.
ಮಹದಾಯಿ ವಿವಾದಕ್ಕೆ ಸಂಬಂಧಿಸಿ ಸೌಹಾರ್ದ ಇತ್ಯರ್ಥಕ್ಕೆ ಒತ್ತಾಯಿಸಿ ಸರ್ವಪಕ್ಷದ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರೂ ಮಧ್ಯ ಸ್ಥಿ ಕೆಗೆ ಒಪ್ಪಲಿಲ್ಲ. ರೈತರು ಸಂಕಷ್ಟ ಪಡುತ್ತಿದ್ದರೂ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತುಟಿ ಬಿಚ್ಚಲಿಲ್ಲ.
– ಸಿದ್ದರಾಮಯ್ಯ,ಮುಖ್ಯಮಂತ್ರಿ.
ಹುಲಿಗೆಮ್ಮ, ಗವಿಮಠಕ್ಕೆ ರಾಹುಲ್ ಭೇಟಿ
ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಸ್ಥಾನ ಸೇರಿ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ವಿಶೇಷ ಭದ್ರತಾ ಪಡೆಯೊಂದಿಗೆ ಭಾರಿ ಬಂದೋಬಸ್ತ್ನಲ್ಲಿ ಆಗಮಿಸಿದ ರಾಹುಲ್, ನೇರ ಗರ್ಭಗುಡಿಗೆ ತೆರಳಿ ದರ್ಶನ ಪಡೆದರು.
ರಾಹುಲ್ ಸ್ವಾಗತಕ್ಕೆ ಡೊಳ್ಳಿನ ಸ್ವಾಗತ ಕೋರಲಾಯಿತು. ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿ ಇತರರು ಡೊಳ್ಳು ಭಾರಿಸುವ ಮೂಲಕ ಹೆಜ್ಜೆ ಹಾಕಿದರು.
ರಾಹುಲ್ ದೇವಸ್ಥಾನದಿಂದ ಹಿಂದಿರುಗುವ ವೇಳೆ ಚಪ್ಪಲಿ ಕಳೆದವು ಎನ್ನುವ ಮಾತು ಹರಿದಾಡಿತು. ನಂತರ, ಕೊಪ್ಪಳದ ಗವಿಮಠಕ್ಕೆ ತೆರಳಿದ ರಾಹುಲ್ ಗದ್ದುಗೆಯಲ್ಲಿ ದರ್ಶನ ಪಡೆದು ನಂತರ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಈ ವೇಳೆ, ಗವಿಸಿದ್ದೇಶ್ವರ ಸ್ವಾಮೀಜಿ ಅವರು ಗವಿಮಠದ ಇತಿಹಾಸ, ಪರಂಪರೆ ಸೇರಿ ಜಾತ್ರೆಯ ಕುರಿತು ಫೋಟೋ ಅಲ್ಬಂಗಳನ್ನೂ ತೋರಿಸಿ ಸಂಕ್ಷಿಪ್ತ ಮಾಹಿತಿ ನೀಡಿದರು. ನಂತರ ಮಠದ ವಿದ್ಯಾರ್ಥಿಗಳ ಕುಶಲೋಪರಿ ನಡೆಸಿ, ರಾಹುಲ್ ಜನಾಶೀರ್ವಾದ ಸಮಾವೇಶದಲ್ಲಿ ಪಾಲ್ಗೊಂಡರು. ಈ ವೇಳೆ ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ, ಡಿ ಕೆ ಶಿವಕುಮಾರ್, ಬಸವರಾಜ ರಾಯರಡ್ಡಿ ಸೇರಿದಂತೆ ಇತರರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.