ದೇಶದ ಅತೀದೊಡ್ಡ ಧ್ವಜಸ್ತಂಭ ನಿರ್ಮಾಣ ಅಂತಿಮ ಹಂತದಲ್ಲಿ
ಜಗತ್ತಿನ 9ನೇ ಅತಿ ಎತ್ತರದ ಧ್ವಜಸ್ತಂಭ
Team Udayavani, Aug 10, 2022, 6:50 AM IST
ಬಳ್ಳಾರಿ: ರಾಜ್ಯದ 31ನೇ ಜಿಲ್ಲೆಯಾಗಿ ಉದಯಿಸಿರುವ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆ ನಗರದಲ್ಲಿ ದೇಶದಲ್ಲೇ ಮೊದಲ ಬಾರಿಗೆ 405 ಅಡಿ ಎತ್ತರದ ರಾಷ್ಟ್ರ ಧ್ವಜಸ್ತಂಭ ತಲೆಯೆತ್ತಲಿದ್ದು, ಈ ಕುರಿತ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಜಗತ್ತಿನ ಜನಮನ ಸೆಳೆದ ಹಂಪಿ ಸ್ಮಾರಕಗಳನ್ನು ಹೊಂದಿದ್ದ ಹೊಸಪೇಟೆ ಇದೀಗ ದೇಶದಲ್ಲಿ ಮೊದಲ, ವಿಶ್ವದಲ್ಲಿ 9ನೇ ಅತಿ ಎತ್ತರದ ರಾಷ್ಟ್ರಧ್ವಜ ಸ್ತಂಭದ ಹೆಗ್ಗಳಿಕೆ ಪಾತ್ರವಾಗಲಿದೆ.
ಹಾಲಿ ಬೆಳಗಾವಿಯ ಕೋಟೆಕೆರೆ ಪ್ರದೇಶದಲ್ಲಿರುವ 110 ಮೀಟರ್ ಎತ್ತರದ ಧ್ವಜಸ್ತಂಭ ದೇಶದ ಅತಿದೊಡ್ಡ ಧ್ವಜಸ್ತಂಭ ಎಂಬ ದಾಖಲೆಗೆ ಪಾತ್ರವಾಗಿತ್ತು. ಇದೀಗ ಹೊಸಪೇಟೆಯಲ್ಲಿ ನಿರ್ಮಿಸಲಾಗುತ್ತಿರುವ ಧ್ವಜಸ್ತಂಭ ಅದಕ್ಕಿಂತಲೂ 13 ಮೀಟರ್ ಹೆಚ್ಚು ಎತ್ತರವಿರಲಿದೆ.
ದೇಶದ ಅತೀ ಎತ್ತರದ ಧ್ವಜಸ್ತಂಭ ನಿರ್ಮಿಸುವ ಸಲುವಾಗಿ ಹೊಸಪೇಟೆ ನಗರದ ಹೃದಯಭಾಗದಲ್ಲಿನ ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಳೆದ 2-3 ತಿಂಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಧ್ವಜಸ್ತಂಭದ ಕಟ್ಟೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಕಳೆದ ಮೂರು ದಿನಗಳಿಂದ ಧ್ವಜಸ್ತಂಭ ಅಳವಡಿಸುವಕಾರ್ಯ ಭರದಿಂದ ಸಾಗಿದ್ದು, ಆ. 15ರಂದು ತ್ರಿವರ್ಣ ಧ್ವಜ ಹಾರಲಿದೆ.
ಈ ಅತೀ ಎತ್ತರದ ಧ್ವಜಸ್ತಂಭ ನಿರ್ಮಿಸುವ ರೂವಾರಿ ವಿಜಯನಗರ ಶಾಸಕ, ಪ್ರವಾಸೋದ್ಯಮ ಸಚಿವ ಬಿ.ಎಸ್. ಆನಂದ್‌ಸಿಂಗ್ ಅವರು. ಈ ಧ್ವಜಸ್ಥಂಭ 6 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.