ವಿವಾದಕ್ಕೀಡಾದ ಡಾ| ಘಂಟಿ “ಸೂಟ್‌ಕೇಸ್’ ಮಾತು
Team Udayavani, Sep 15, 2017, 6:30 AM IST
ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಮಲ್ಲಿಕಾ ಘಂಟಿ ಅವರು “ಸೂಟ್‌ಕೇಸ್’ ಕುರಿತು ಆಡಿದ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಅವರು ಲಿಖೀತ ಸ್ಪಷ್ಟೀಕರಣ ನೀಡಿ ವಿವಾದಕ್ಕೆ ತೆರೆ ಎಳೆಯುವ ಯತ್ನವನ್ನೂ ಮಾಡಿದ್ದಾರೆ.
ಕನ್ನಡ ವಿವಿಯಲ್ಲಿ ಬುಧವಾರ ಬೆಳ್ಳಿಹಬ್ಬದ ನಿಮಿತ್ತ “ಭವಿಷ್ಯದ ಕನ್ನಡ ವಿಶ್ವವಿದ್ಯಾಲಯ’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ವಿಶ್ರಾಂತ ಕುಲಪತಿಗಳು ತಮ್ಮ ಕಾಲಾವಧಿಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ಹೇಗೆ ಎಂಬುದನ್ನು ಮೆಲುಕು ಹಾಕಿದ್ದರು. ಇದನ್ನು ಡಾ|ಘಂಟಿಯವರು ಅಧ್ಯಕ್ಷೀಯ ಭಾಷಣದಲ್ಲಿ ಪ್ರಸ್ತಾಪಿಸಿ ಮಾತನಾಡುವಾಗ ಈ ಅಚಾತುರ್ಯ ನಡೆದಿದೆ.
“ವಿವಿಯನ್ನು ಆಕ್ಸ್‌ಫರ್ಡ್ ವಿವಿ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕೆಂದು ಹೇಳುತ್ತಾರೆ. ಆದರೆ, ಇಲ್ಲಿ ಬೇಕಾದಷ್ಟು ಉಪನ್ಯಾಸಕರೇ ಇಲ್ಲ. ಖಾಲಿ ಹುದ್ದೆಗಳ ಪೈಕಿ ತಕ್ಷಣಕ್ಕೆ ಎಷ್ಟು ಅಗತ್ಯವೋ ಅಷ್ಟನ್ನು ನೇಮಕ ಮಾಡಿ ಕೊಡಲು ಹಾಗೂ ಅನುದಾನ ನೀಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡುತ್ತಾರೆ. ಆದರೆ, ಇದೆಲ್ಲ ನಂಬುವಂಥದ್ದಲ್ಲ ಎನ್ನುವುದು ಗೊತ್ತು. ಹಿಂದೆಲ್ಲ ಕುಲಪತಿಗಳು ಮಂತ್ರಿಗಳನ್ನು ಭೇಟಿ ಮಾಡಲು ಹೋದಾಗ ಸೂಟ್‌ಕೇಸ್ ತುಂಬಾ ಕಡತಗಳನ್ನು ತೆಗೆದುಕೊಂಡು ಹೋಗಿ ಎಲ್ಲವನ್ನೂ ಕ್ಲೀಯರ್ ಮಾಡಿಸಿಕೊಂಡು ಬರುವಾಗ ಸೂಟ್‌ಕೇಸ್ ತುಂಬ ರೊಕ್ಕ (ಅನುದಾನ) ತರುತ್ತಿದ್ದರಂತೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ನಾನೇ ಸೂಟ್‌ಕೇಸ್ ತುಂಬ ದುಡ್ಡು ತೆಗೆದುಕೊಂಡು ಹೋಗಿ ಎಲ್ಲರಿಗೂ ಕೊಟ್ಟು ಕೊಟ್ಟು ಈ ಕೆಲಸ ನಂದು ಮಾಡ್ರಿ ಮಾಡ್ರಿ ಅನ್ನೋ ಹಂಗಾಗಿದೆ’ ಎಂದಿದ್ದರು ಡಾ|ಘಂಟಿ.
ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿ ವಿವಾದದ ಸ್ವರೂಪ ಪಡೆಯುತ್ತಲೇ ಎಚ್ಚೆತ್ತ ಅವರು, “ನಾನು ಹಾಗೆ ಹೇಳಿಯೇ ಇಲ್ಲ. ವಿಧಾನಸೌಧಕ್ಕೆ ಸೂಟ್‌ಕೇಸ್ ತೆಗೆದುಕೊಂಡು ಹಣ ತರಬೇಕಾಗಿದೆ’ ಎಂಬರ್ಥ ಬರುವಂತೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ತಿಳಿಸಿ ವಿವಾದಕ್ಕೆ ತೇಪೆ ಹಚ್ಚುವ ಯತ್ನ ಮಾಡಿದರು.
ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಬಗ್ಗೆ ಅತ್ಯಂತ ಗೌರವವಿದೆ. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿರುವುದು ಆತಂಕದ ಸಂಗತಿ. ಇಡೀ ಭಾಷಣದಲ್ಲಿ ಎಲ್ಲಿಯೂ “ವಿಧಾನಸೌಧ’ ಪದ ಬಳಕೆ ಮಾಡಿಲ್ಲ. ಹಾಗೆಯೇ ಹಾಲಿ ಸರ್ಕಾರ ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚು ಅನುದಾನ ನೀಡಿರುವುದನ್ನು ನೆನೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಘಂಟಿ ಹೇಳಿಕೆ ಅಲ್ಲಗಳೆಯುವಂತಿಲ್ಲ
ಹುಬ್ಬಳ್ಳಿ: ವಿಧಾನಸಭೆಯಲ್ಲಿ ಯಾವುದೇ ಕೆಲಸವಾಗಬೇಕಿದ್ದರೆ ಸೂಟ್‌ಕೇಸ್ ಒಯ್ಯಬೇಕೆಂಬ ಹಂಪಿ ಕನ್ನಡ ವಿವಿ ಕುಲಪತಿ ಮಲ್ಲಿಕಾ ಘಂಟಿಯವರ ಹೇಳಿಕೆ ಅಲ್ಲಗಳೆಯುವಂತಿಲ್ಲ ಎಂದು ಆರೋಗ್ಯ ಸಚಿವ ರಮೇಶಕುಮಾರ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಲ್ಲಿಕಾ ಘಂಟಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅವರ ಹೇಳಿಕೆ ಕಡೆಗಣಿಸುವಂತಿಲ್ಲ. ವಿಧಾನಸೌಧವೇನು ಗಂಗೋತ್ರಿಯಲ್ಲ. ಭ್ರಷ್ಟಾಚಾರ ಎಲ್ಲ ಕ್ಷೇತ್ರಗಳಲ್ಲೂ ಇದೆ. ಮಲ್ಲಿಕಾ ಅವರು ಕೇವಲ ಆರೋಪ ಮಾಡಿದರೆ ಸಾಲದು, ಅವರು ನಗದು ರೂಪದಲ್ಲಿ ಹಣ ಕೊಟ್ಟಿದ್ದಾರೋ, ಬಂಗಾರ ರೂಪದಲ್ಲಿ ಕೊಟ್ಟಿದ್ದಾರೋ ಎಂಬ ಕುರಿತು ಸಾಕ್ಷ್ಯಾಧಾರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.