ಕೋವಿಡ್ ದಿಂದ ಮೃತಪಟ್ಟವರಿಗೆ “ಸಂಪ್ರದಾಯದ ಸಂಸ್ಕಾರ’
Team Udayavani, Oct 5, 2020, 7:10 PM IST
ಸಿರುಗುಪ್ಪ: ತಾಲೂಕಿನಲ್ಲಿ ಕೋವಿಡ್ ಸೋಂಕಿತ ಶವಗಳಿಗೆ ಮತ್ತು ಅನಾಥ ಶವಗಳಿಗೆ ಗೌರವದ ಅಂತ್ಯಕ್ರಿಯೆ ಮಾಡುವ ಕಾರ್ಯವನ್ನು ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದಾರೆ.
ಮಹಾಮಾರಿ ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಪ್ರತಿಯೊಬ್ಬ ಕುಟುಂಬದ ಸದಸ್ಯರು ಇಚ್ಛೆಪಡುತ್ತಾರೆ. ಆದರೆ ಕೋವಿಡ್ ಸೋಂಕು ಹರಡುತ್ತದೆ ಎನ್ನುವ ಭಯದಿಂದ ಸರ್ಕಾರವು ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯ ಸಂಸ್ಕಾರ ಮಾಡಲು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸದೇ ತಾವೇ ಬೇಕಾಬಿಟ್ಟಿಯಾಗಿ ಅಂತ್ಯ ಸಂಸ್ಕಾರ ಮಾಡುತ್ತಿದ್ದರು. ಈ ಹಿಂದೆ ಕೋವಿಡ್ ದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ಅತ್ಯಂತ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಇದರಿಂದಾಗಿ ಮೃತರ ಕುಟುಂಬದವರು ತಮ್ಮವರ ಅಂತ್ಯ ಸಂಸ್ಕಾರ ಗೌರವಯುತವಾಗಿ ನಡೆಯುತ್ತಿಲ್ಲ ಎನ್ನುವ ಸಂಕಟ ಅನುಭವಿಸುತ್ತಿದ್ದರು. ಆದರೆ ತಾಲೂಕಿನಲ್ಲಿ ಕೋವಿಡ್ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರವನ್ನು ಪಿಎಫ್‌ಐ ತಂಡದ ಯುವಕರು ಮಾಡಲು ಮುಂದಾಗಿದ್ದು ಇಲ್ಲಿಯವರೆಗೆ 19ಕ್ಕೂ ಹೆಚ್ಚು ಕೋವಿಡ್ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರವನ್ನು ಅವರವರ ಧರ್ಮದ ವಿಧಿಧಾನಗಳೊಂದಿಗೆ ಗೌರವಯುತವಾಗಿ ಮಾಡಿದ್ದಾರೆ.
ಈ ತಂಡದ ಸದಸ್ಯರು ಮಾಡುತ್ತಿರುವ ಕೆಲಸವನ್ನು ನೋಡಿದರೆ ಭಯವು ಆವರಿಸುತ್ತದೆ. ಮನಸ್ಸು ಭಾರವಾಗುತ್ತದೆ. ಕೋವಿಡ್ ದಿಂದ ಸಾವನ್ನಪ್ಪಿದರೆ ಮನೆಯವರೇ ಹತ್ತಿರ ಬಾರದ ಪರಿಸ್ಥಿತಿಯನ್ನು ಅಪರಿಚಿತ ಶವಕ್ಕೆ ಹೆಗಲು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ಸೋಂಕಿತರ ಅಂತ್ಯಕ್ರಿಯೆ ಮಾಡುತ್ತಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೊಂಕಿತರ ಅಂತ್ಯ ಸಂಸ್ಕಾರವನ್ನು ಈ ತಂಡದ ಸದಸ್ಯರು ಆರೋಗ್ಯ ಇಲಾಖೆಯ ಸಮ್ಮುಖದಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಮಾನವೀಯತೆ ಇನ್ನೂ ಇದೆ ಎನ್ನುವುದನ್ನು ಜಗತ್ತಿಗೆ ತೋರಿಸಿದ್ದಾರೆ.
ಪಿಎಫ್‌ಐ ಸಂಘಟನೆಯ 12 ಜನ ಸದಸ್ಯರು ನುರಿತ ವೈದ್ಯರಿಂದ ತರಬೇತಿ ಪಡೆದು ಮೃತಪಟ್ಟ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಿ ಮಾಡಬೇಕೆನ್ನುವುದು ಅರಿತು, ಆಯಾ ಧರ್ಮದ ವಿಧಿಧಾನಗಳಂತೆ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. –ಖಾಜ ಕಿಜರ್, ಸಂಘಟನೆ ಸದಸ್ಯ
ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕೋವಿಡ್ ಸೋಂಕಿತರನ್ನು ಮುಟ್ಟಿ ಅಂತ್ಯ ಸಂಸ್ಕಾರ ಮಾಡುವ ಕಾರ್ಯವನ್ನು ಈ ಸಂಘಟನೆಯ ಕಾರ್ಯಕರ್ತರು ಆಯಾ ಧರ್ಮಕ್ಕೆ ಅನುಗುಣವಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. –ಡಾ| ದೇವರಾಜ್,100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ
-ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.