ಗಾಂಧಿ ಸಂಡೂರು ಭೇಟಿ ಐತಿಹಾಸಿಕ


Team Udayavani, Oct 2, 2019, 3:35 PM IST

ballary-tdy-2

ಸಂಡೂರು: ದೇಶಕ್ಕೆ ಸ್ವಾತಂತ್ರ್ಯತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೂ ಸಂಡೂರಿಗೂ ಅವಿನಾಭಾವ ಸಂಬಂಧವಿದೆ. ಘೋರ್ಪಡೆ ವಂಶಸ್ಥರಾದ ಎಂ.ವೈ. ಘೋರ್ಪಡೆಯವರು ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಬೃಹತ್‌ ಕಂಚಿನ ಮೂರ್ತಿ ಸ್ಥಾಪಿಸುವ ಮೂಲಕ ಆ ನೆನಪನ್ನು ಜೀವಂತವಾಗಿಟ್ಟಿದ್ದಾರೆ.

ಇಲ್ಲಿಯ ಘೋರ್ಪಡೆ ರಾಜ ವಂಶಸ್ಥರು 1932ರಲ್ಲಿ ರಾಜ ಯಶವಂತರಾವ್‌ ಹಿಂದೂರಾವ್‌ ಘೋರ್ಪಡೆ ಒಂದು ಪ್ರೊಕ್ಲಾಮೇಷನ್‌ (ಆದೇಶ) ಹೊರಡಿಸಿದ್ದರು. ಅದರ ಪ್ರಕಾರ ಹರಿಜನರಿಗೆ ಸಮಾನವಾಗಿ ದೇವಸ್ಥಾನಗಳಲ್ಲಿ ಮುಕ್ತ ಪ್ರವೇಶ ಅವಕಾಶ ಮಾಡಿಕೊಡಲಾಯಿತು. ಆದ್ದರಿಂದ ಈ ಪ್ರದೇಶದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲಾಯಿತು. ಇದರಿಂದ ಆಕರ್ಷಿತರಾದ ಮಹಾತ್ಮ ಗಾಂಧಿಜಿಯವರು 1934ರಲ್ಲಿ ಸಂಡೂರಿಗೆ ಭೇಟಿ ನೀಡಿ ತಮ್ಮ “ಹರಿಜನ’ ಪತ್ರಿಕೆಯಲ್ಲಿ ಈ ರೀತಿ ವಿವರಿಸುತ್ತಾರೆ.

“ದಕ್ಷಿಣ ಭಾರತದ ಚಿಕ್ಕ ಸಂಸ್ಥಾನವಾದ ಸಂಡೂರು ಸಂಸ್ಥಾನ ಹರಿಜನರಿಗೆ ಗುಡಿಗಳ ಬಾಗಿಲು ತೆರೆದಿದೆ. ಇದರಿಂದ ಸ್ವರ್ಗವೇನು ಕೆಳಗಿ ಬೀಳಲಿಲ್ಲ’ ಎಂದು ಬರೆದರು. ಗಾಂಧೀಜಿಯವರ ಕನಸನ್ನು ಸಂಡೂರು ಸಂಸ್ಥಾನ ಸ್ವಾತಂತ್ರ್ಯ ಪೂರ್ವದಲ್ಲೇ ಜಾರಿಗೆ ತಂದಿತ್ತು. 1932ರಲ್ಲಿ ಸಂಡೂರು ಸಂಸ್ಥಾನದಲ್ಲಿ ನ್ಯಾಯಾಂಗ ವ್ಯವಸ್ಥೆ ಜಾರಿಗೆ ತಂದರು. ಬಳ್ಳಾರಿ ಜಿಲ್ಲಾ ನ್ಯಾಯಾಧಿಧೀಶರನ್ನು

ಸಂಡೂರು ಚೀಫ್‌ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದರೆಂಬುದು ಸಂಡೂರಿನ ಐತಿಹಾಸಿಕ ಅಂಶವಾಗಿದೆ. ಗಾಂಧಿಧೀಜಿಯವರ ಸ್ಮರಣೆಯ ನಿಮಿತ್ತ ಅಂದಿನ ಕರ್ನಾಟಕದ ರಾಜ್ಯಪಾಲರಾದ ಖುರ್ಷಿದ್‌ ಅಲಂಖಾನ್‌ ಅವರನ್ನು ಆಹ್ವಾನಿಸಿ ಪದ್ಮಭೂಷಣ ಪ್ರಶಸ್ತಿ ಪಡೆದ ಶಿಲ್ಪಿ ರಾಮಸುತಾರ್‌ ಅವರಿಂದ ತಯಾರಿಸಿದ ಬೃಹತ್‌ ಗಾಂಧೀಜಿಯವರ ಕಂಚಿನ ಮೂರ್ತಿಯನ್ನು ಗಾಂಧಿಧೀಜಿಯವರ 125ನೇ ಜನ್ಮದಿನ ಅಂಗವಾಗಿ 11ನೇ ಅಕ್ಟೋಬರ್‌ 1995ರಲ್ಲಿ ಪಟ್ಟಣದ ಆದರ್ಶ ಸಮುದಾಯ ಭವನದಲ್ಲಿ ಸ್ಥಾಪಿಸಲಾಯಿತು.

 

-ಬಸವರಾಜ ಬಣಕಾರ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.