farmers ಪಂಪ್ ಸೆಟ್ ಗಳ ಕಳ್ಳತನ : ಆರೋಪಿಗಳ ಬಂಧನ
Team Udayavani, Aug 19, 2023, 6:01 PM IST
ಕುರುಗೋಡು: ರೈತರು ತಮ್ಮ ಜಮೀನುಗಳಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅಳವಡಿಸಿದ್ದ 5 ಎಚ್. ಪಿಪಂಪ್ ಸೆಟ್ ಮೋಟರ್ ಗಳನ್ನು ಇಬ್ಬರು ಕಳ್ಳರು ಕಳ್ಳತನ ಮಾಡಿದ್ದು, ಆರೋಪಿಗಳನ್ನು ಸಿರಿಗೇರಿ ಪೊಲೀಸರು ಬಂಧಿಸಿದ್ದಾರೆ.
ಸಿರಿಗೇರಿ ಗ್ರಾಮದ ಜಡೆಪ್ಪ ಎಂಬ ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಲೂಬಿ ಕಂಪನಿಯ 5 ಎಚ್. ಪಿ ನೀರೇತ್ತುವ ಮನೋ ಬ್ಲಾಕ್ ಪಂಪ್ ಸೆಟ್ ಕಳುವಾದ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರಿನ ಅನ್ವಯ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ನಟರಾಜ್, ಡಿವೈಎಸ್ಪಿ ವೆಂಕಟೇಶ್, ತೆಕ್ಕಲಕೋಟೆ ಸಿಪಿಐ ಸುಂದರೇಶ್ ಅವರ ಮಾರ್ಗದರ್ಶನದಲ್ಲಿ ಸಿರಿಗೇರಿ ಪಿಎಸ್ ಐ ಸದ್ದಾಂ ಹುಸೇನ್ ಹೆಚ್. ಅವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಸದರಿ ತಂಡವು ಈ ಪ್ರಕರಣವನ್ನು ಭೇದಿಸಿ ಸಿರಿಗೇರಿ ಗ್ರಾಮದ ಕೆ. ಮಾರುತಿ (20). ಕರಿಬಸವ (25) ಈ ಆರೋಪಿಗಳನ್ನು ಬಂಧಿಸಿ ಬಂದಿತರಿಂದ ವಿವಿಧ ಕಂಪನಿಗಳ 5 ಪಂಪ್ ಸೆಟ್ ಗಳ ಮೋಟರನ್ನು ಜಪ್ತಿ ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿರಿಗೇರಿ ಪೊಲೀಸರು ತಿಳಿಸಿದ್ದಾರೆ.
ಈ ತಂಡದಲ್ಲಿ ಸಿರಿಗೇರಿ ಠಾಣೆಯ ಎಎಸ್ ಐ ಹೆಚ್. ಗಂಗಣ್ಣ, ಸಿಬ್ಬಂದಿಯಾದ ಉಮಾಶಂಕರ್, ಶಿವರಾಯಪ್ಪ, ಹುಲಿಕುಂಟೆಪ್ಪ, ಮಂಜುನಾಥ್, ರಮೇಶ್, ಚಂದ್ರಶೇಖರ, ರಾಮಕೃಷ್ಣ, ಪ್ರಭಾಕರ್, ವಿನೋದ್ ಗೌಡ, ರಂಗಣ್ಣ, ದಿವಾಕರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.