ಸೃಷ್ಟಿಯ ಕಣ-ಕಣದಲ್ಲೂ ಇದ್ದಾನೆ ಭಗವಂತ

Team Udayavani, Oct 18, 2018, 1:24 PM IST

bell-1.jpg

ಸಿರುಗುಪ್ಪ: ಹೂವಿನಲ್ಲಿನ ವಾಸನೆಯು ನಮ್ಮ ಮೂಗಿನ ಮೂಲಕ ಅನುಭವಕ್ಕೆ ಬರುತ್ತದೆ. ಆದರೆ ನಮಗೆ ಕಾಣುವುದಿಲ್ಲ. ಅದರಂತೆ ಬ್ರಹ್ಮಾಂಡವನ್ನು ಸೃಷ್ಟಿಸಿದವನನ್ನು ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಕಣದಲ್ಲಿಯೂ ಇದ್ದು, ನಡೆಸುತ್ತಿರುವವನು ಕೂಡ ಭಗವಂತನೆ ಆಗಿದ್ದಾನೆ ಎಂದು ಮಂತ್ರಾಲಯದ ವಿದ್ಯಾಪೀಠದ ಅಧ್ಯಾಪಕ ಶ್ರೀಉಡುಪಿ ಕ್ರಿಷ್ಣಚಾರ್‌ ಅಭಿಪ್ರಾಯಪಟ್ಟರು.

ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದ ಸಮಾರೊಪದಲ್ಲಿ ಪ್ರವಚನ ನೀಡಿದ ಅವರು, ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆ ಎನ್ನುವುದನ್ನು ನಂಬುವುದಾದರೂ ಹೇಗೆ ಎನ್ನುವ ಪ್ರಶ್ನೆಯನ್ನು ಹಾಕಿಕೊಂಡು ಗುರುಗಳು, ದಾಸಶ್ರೇಷ್ಠರು, ಯತಿವರ್ಯರು, ಪಂಡಿತರು, ಪಾಮರರು ಹೊರಟಿದ್ದು, ಈ ಪ್ರಶ್ನೆಯು ಎಲ್ಲರನ್ನೂ ಕಾಡುತ್ತಿದೆ ಎಂದರು.

ಆದರೆ ನಮಗೆ ಕಾಣದೇ ಅನುಭವಕ್ಕೆ ಬರುವ ಮೂಲಕ ಅವನ ಇರುವಿಕೆ ಸತ್ಯವೆಂದು ಗೋಚರವಾಗುತ್ತಿದೆ. ನಮ್ಮ ದೇಹದ ಮೇಲೆ ನಮ್ಮ ಮನಸ್ಸಿನ ಮೇಲೆ ನಮಗೆ ನಿಯಂತ್ರಣವಿಲ್ಲ. ಕಣ್ಣುಗಳಲ್ಲಿ ಸೂರ್ಯಚಂದ್ರರು, ಕಿವಿಗಳಲ್ಲಿ ವಿದ್ಯಾ ದೇವತೆಗಳು, ನಾಲಿಗೆಯಲ್ಲಿ ವರುಣಾ ದೇವರು, ಉಸಿರಾಟದಲ್ಲಿ ವಾಯುದೇವರು ಸೇರಿದಂತೆ ಮಾನವನ ಎಲ್ಲ ಅಂಗಳಲ್ಲಿಯು ದೇವತೆಗಳು ನೆಲೆಸಿದ್ದಾರೆ ಎಂದು ತಿಳಿಸಿದರು.

ಭಗವಂತನು ಅತಿ ದೊಡ್ಡವನು, ಅತಿಸೂಕ್ಷ್ಮನು, ಅತ್ಯಂತ ತೇಜೋಮಯನು ಆಗಿರುವುದರಿಂದ ನಮಗೆ ಭಗವಂತನನ್ನು ನೋಡಲು ತೇಜೋಮಯವಾದ ಕಣ್ಣುಗಳ ಅವಶ್ಯಕತೆ ಇದ್ದು, ಇವುಗಳನ್ನು ಅತ್ಯಂತ ಕಠಿಣ ಸಾಧನೆಯಿಂದ ಮಾತ್ರ ಪಡೆಯಬಹುದಾಗಿದೆ. ಆಗ ಮಾತ್ರ ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಎಲ್ಲರಲ್ಲಿಯೂ ಅಂತರ್ಗತನಾಗಿ, ಸರ್ವವ್ಯಾಪಿಯಾಗಿ ಭಗವಂತನು ನೆಲೆಸಿದ್ದು, ಎಲ್ಲರಲ್ಲಿಯೂ ಭಗವಂತನ ಸ್ವರೂಪ ಎಂದು ಕಾಣಬೇಕು ಎಂದು ತಿಳಿಸಿದರು. ಅರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ ಎಚ್‌. ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಇದ್ದರು.  

ಚಂಡಿಕಾ ಹೋಮ
ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಬುಧವಾರ ರಾಜಪುರೋಹಿತ ಶ್ರೀನಿವಾಸಚಾರ್ಯ ನೇತೃತ್ವದ ಪುರೋಹಿತರಿಂದ ಹಾಗೂ ಆರ್ಯವೈಶ್ಯ ಮಂಡಳಿ ವತಿಯಿಂದ ಚಂಡಿಕಾ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀವಾಸವಿ ಮಾತೆಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ 
 ಚ್‌.ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.