ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂರರ ಬಾಲಕಿ ಮೃತ್ಯು
Team Udayavani, Sep 26, 2019, 12:06 PM IST
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣದ ಯಲ್ಲಾಲಿಂಗ ನಗರದಲ್ಲಿ ಮಳೆಯಿಂದ ಮತ್ತೊಂದು ಅವಾಂತರ ಸೃಷ್ಟಿಯಾಗಿದೆ. ಮನೆ ಕಟ್ಟಲು ಅಗೆಯಲಾಗಿದ್ದ ಗುಂಡಿಯಲ್ಲಿ ಸಂಗ್ರಹವಾಗಿದ್ದ ಮಳೆ ನೀರಲ್ಲಿ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ಗಂಗಾಧರ್ ಎನ್ನುವವರ ಮಗಳು ರಂಜಿತಾ (3) ಮೃತ ಬಾಲಕಿ. ಯಲ್ಲಾಲಿಂಗ ನಗರದಲ್ಲಿ ಮನೆ ನಿರ್ಮಿಸಲು ಗುಂಡಿಗಳನ್ನು ಅಗೆಯಲಾಗಿದ್ದು, ಕಳೆ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ನೀರಿನಿಂದ ಗುಂಡಿ ತುಂಬಿಕೊಂಡಿದೆ. ಬುಧವಾರ ರಾತ್ರಿ ತಿಂಡಿ ತರಲೆಂದು ಮನೆಯಿಂದ ಹೊರಬಂದ ಬಾಲಕಿ ರಂಜಿತಾ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ.
ಗುಂಡಿ ಅಗೆಯಲಾಗಿದ್ದ ಜಾಗ ಪೊಲೀಸ್ ಇಲಾಖೆಯ ಎಎಸ್ಐ ನಾರಾಯಣ ಸ್ವಾಮಿ ಎನ್ನುವವರಿಗೆ ಸೇರಿದೆ ಎನ್ನಲಾಗುತ್ತಿದ್ದು, ಸ್ಥಳೀಯ ಸಂಸ್ಥೆಯಿಂದ ಪರವಾನಿಗೆ ರಹಿತವಾಗಿ ಮನೆ ನಿರ್ಮಿಸಲು ಗುಂಡಿಗಳನ್ನು ಅಗೆದು ಬಿಡಲಾಗಿತ್ತು ಎಂದು ತಿಳಿದು ಬಂದಿದೆ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.