ನದಿ ಪ್ರವಾಹದ ನಡುವೆಯೂ ಹಂಪಿಯತ್ತ ಪ್ರವಾಸಿಗರ ದಂಡು
Team Udayavani, Jul 16, 2022, 6:26 PM IST
ಹೊಸಪೇಟೆ:ನದಿ ಪ್ರವಾಹದ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಹಂಪಿಯತ್ತ ಪ್ರವಾಸಿಗರು ಮುಖ ಮಾಡುವ ಮೂಲಕ ಪ್ರಸಿದ್ಧ ಸ್ಮಾರಕಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ವೀಕೆಂಡ್ ಹಿನ್ನೆಲೆಯಲಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿ, ವಿರೂಪಾಕ್ಷೇಶ್ವರ ದೇವರ ದರ್ಶನ ಜೊತೆಯಲ್ಲಿ ವಿವಿಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು.
ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆಯ ಆರ್ಭಟ ಜೋರಾಗಿದೆ. ಕೆಲ ಜಿಲ್ಲೆಯಲ್ಲಿ ಅಂತು ಸಾರ್ವಜನಿಕರು ಮನೆಬಿಟ್ಟು ಹೊರ ಬರದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಗತೆ ಬೇಸತ್ತು ವಿಕೇಂಡ್‌ನಲ್ಲಿ ಪ್ರವಾಸಿಗರು ಹಂಪಿ ಪ್ರವಾಸ ಕೈಗೊಂಡಿದ್ದಾರೆ.
ಹಂಪಿಯಲ್ಲಿ ತಂಪಾದ ವಾತವರಣ, ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿ, ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟ-ಗುಡ್ಡಗಳ ನಡುವೆ ಸ್ಮಾರಕಗಳ ವೀಕ್ಷಣೆ ಮಾಡುವುದೇ ಕಣ್ಣಿಗೆ ಹಬ್ಬ ಎನ್ನುವಂತಾಗಿದೆ.
ಮೊದಲು ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡುವ ಪ್ರವಾಸಿಗರು, ಹೇಮಕೂಟ, ಸಾಸವೆಕಾಳು ಗಣಪತಿ, ಕಡಲೆಕಾಳು ಗಣಪತಿ, ಕೃಷ್ಣ ದೇವಾಲಯ, ಉಗ್ರನರಸಿಂಹ, ಬಡವಿಲಿಂಗ, ಉದ್ದಾನವೀರಭದ್ರ, ಭೂಮಿಮಟ್ಟದ ದೇವಾಲಯ, ಹಜಾರರಾಮ ದೇಗುಲ, ರಾಣಿಸ್ನಾನ ಗೃಹ, ಮಹಾನವಮಿ ದಿಬ್ಬ, ಕಮಲ ಮಹಲ್, ಗಜಶಾಲೆ ಹಾಗೂ ವಿಜಯವಿಠಲ ದೇವಾಲಯಗಳಲ್ಲಿ ಹೆಚ್ಚಾಗಿ ಪ್ರವಾಸಿಗರು ಕಂಡು ಬಂದರು.
ಶನಿವಾರದ ಪೂಜೆಗೆ ಕೊಪ್ಪಳ ಜಿಲ್ಲೆಯ ಆನೆಗುಂದಿಯ ಆಂಜನಾದ್ರಿ ಪರ್ವತಕ್ಕೆ ಭೇಟಿ ನೀಡುವ ಭಕ್ತರು, ಹಂಪಿಗೆ ಭೇಟಿ ನೀಡುತ್ತಿದ್ದಾರೆ.
ನದಿಯ ಪ್ರವಾಹದ ಹಿನ್ನೆಲೆಯಲ್ಲಿ ವಿರೂಪಾಕ್ಷ ದೇವಾಲಯದ ಸ್ನಾನಘಟ್ಟ, ಪುರಂದರ ದಾಸರ ಮಂಟಪ ಪ್ರದೇಶದ ಕಡೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ರಾಮಲಕ್ಷö್ಮಣ ಹಾಗೂ ಯಂತ್ರೋದ್ಧಾರ ಆಂಜನೇಯ ದೇವಾಲಯಕ್ಕೆ ತೆರಳುವ (ಓನಕೆ ಕಿಂಡಿ) ಮಾರ್ಗ ಜಲಾವೃತವಾಗಿರುವುದರಿಂದ ಬದಲಿ ಮಾರ್ಗದ ಮೂಲಕ ಪ್ರವಾಸಿಗರು ತೆರಳುತ್ತಿದ್ದಾರೆ. ಆಗಾಗ ಸುರಿಯುವ ಜಡಿ ಮಳೆ ನಡುವೆಯೂ ಪ್ರವಾಸಿಗರು ತಣ್ಣನೆ ಅನುಭೂತಿ ಪಡೆಯುತ್ತಿದ್ದಾರೆ.
ಟಿ.ಬಿ,ಡ್ಯಾಂಗೆ ಜನಸಾಗರ:
ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಸಾಗರೋಪಾದಿಯಲ್ಲಿ ಪ್ರವಾಸಿಗರು ಟಿ.ಬಿ.ಡ್ಯಾಂಗೆ ಆಗಮಿಸುತ್ತಿದ್ದಾರೆ. ಜಲಾಶಯದ ಗೇಟ್‌ಗಳಿಂದ ಬೋರ್ಗರೆದು ದುಮುಕುವ ನೀರಿನ ನರ್ತನ ಕಂಡು ಪುಳಕೀತರಾಗುತ್ತಿದ್ದಾರೆ.
ಕೆಳಭಾಗದ ಉದ್ಯಾನವನದಲ್ಲಿ ಸಂಗೀತ ಕಾರಂಜಿ ವೀಕ್ಷಿಸಿ, ಸಂಭ್ರಮಿಸುತ್ತಿದ್ದಾರೆ. ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಅಲೆಯ ಕಲರವಕ್ಕೆ ಮನಸೋಲುತ್ತಿದ್ದಾರೆ. ಟಿ.ಬಿ.ಡ್ಯಾಂ, ಸುರಂಗ ಮಾರ್ಗದ ರಸ್ತೆ ಹಾಗೂ ಮುನಿರಾಬಾದ್ ಸೇತುವೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಜಲಾಶಯದ ವಿಹಂಗಮ ದೃಶ್ಯವನ್ನು ಸವಿಯುತ್ತಿದ್ದಾರೆ. ಹುಬ್ಬಳ್ಳಿ, ಧಾರವಾಡ, ಗದಗ, ಕೊಪ್ಪಳ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಹಂಪಿ ಮತ್ತು ಟಿ.ಬಿ.ಡ್ಯಾಂಯತ್ತ ದಾವಿಸಿ ಬರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.