45 ಕೋಟಿ ವೆಚ್ಚದಲ್ಲಿ ಪಟ್ಟಣ ಅಭಿವೃದ್ಧಿ: ನಾಯ್ಕ
Team Udayavani, Feb 6, 2018, 5:28 PM IST
ಮರಿಯಮ್ಮನಹಳ್ಳಿ: ಪಟ್ಟಣ ಅಭಿವೃದ್ಧಿಗಾಗಿ ಈಗಾಗಲೇ 45 ಕೋಟಿ ರೂ. ಅನುದಾನ ತರುವುದರೊಂದಿಗೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಎಸ್.ಭೀಮಾನಾಯ್ಕ ತಿಳಿಸಿದರು.
ಪಟ್ಟಣದ ಆರಾಧ್ಯ ದೇವತೆ ಶ್ರೀರಾಂಪುರ ದುರ್ಗಮ್ಮದೇವಿ ಜೀರ್ಣೋದ್ಧಾರಗೊಂಡ ದೇವಸ್ಥಾನ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಆಗಿರದಿದ್ದ ಅಭಿವೃದ್ಧಿ ಕಾರ್ಯಗಳು ಈಗ ಪಟ್ಟಣದಲ್ಲಿ ಆಗಿದ್ದು, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲೆಡೆ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು. ನಗರೋತ್ಥಾನದಲ್ಲಿ ಬಂದಿರುವ ಅನುದಾನದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಲ್ಲದೇ ಸವಿತಾ ಸಮಾಜಕ್ಕೆ 5 ಲಕ್ಷ ರೂ. ಅನುದಾನ, ಬ್ರಾಹ್ಮಣ ಸಮಾಜಕ್ಕೆ 3 ಲಕ್ಷ ರೂ. ಅನುದಾನ, ಈಗ ಈಡಿಗರ ಸಮಾಜಕ್ಕೆ
ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಪಂನಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ಪಟ್ಟಣಕ್ಕೆ ಎಸ್ ಸಿ-ಎಸ್ಟಿಗೆ ಈವರೆಗೆ 1070 ಮನೆಗಳು ಮಂಜೂರಾಗಿದ್ದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ 500 ಮನೆಗಳು ಸಾಮಾನ್ಯ ವರ್ಗದವರಿಗೆ ಬಂದಿದ್ದು, ಅದರಲ್ಲಿ ಮರಿಯಮ್ಮನಹಳ್ಳಿ ಹಾಗೂ ಕೊಟ್ಟೂರು ಪಟ್ಟಣಕ್ಕೆ 150 ಮತ್ತು ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಗೆ 200 ಮನೆಗಳಿಗೆ ಅತೀ ಶೀಘ್ರದಲ್ಲಿ
ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಅವಧಿಯಲ್ಲಿನ ಶಾಸಕರು ತಮ್ಮ ಸ್ವಗ್ರಾಮಕ್ಕೆ ಏನನ್ನೂ ಮಾಡಿಲ್ಲ. ಆದರೆ ನನ್ನ ಅವಧಿಯಲ್ಲಿ ಮರಿಯಮ್ಮನಹಳ್ಳಿ ತಾಂಡಕ್ಕೆ ಸಿಸಿ ರಸ್ತೆ, 200 ಮನೆಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದರು. ನೀರಾವರಿ ಯೋಜನೆ ಸೇರಿದಂತೆ ಕ್ಷೇತ್ರದ ವಿವಿಧ ಕಾಮಗಾರಿಗಳಿಗಾಗಿ ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ್ದಾರೆ ಎಂದು ತಿಳಿಸಿದರು.
ಪಪ ಉಪಾಧ್ಯಕ್ಷ ಬಂಗಾರು ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಅಧಿಕಾರಿ ಮಹೇಶ, ಸದಸ್ಯ ವಿಷ್ಣುನಾಯ್ಕ, ಎಸ್.ನವೀನ್ಕುಮಾರ್, ಲಕ್ಷ್ಮಿ
ನಾರಾಯಣಸ್ವಾಮಿ, ಎನ್.ಸತ್ಯನಾರಾಯಣ, ಎಪಿಎಂಸಿ ಸದಸ್ಯ ಕುರಿ ಶಿವಮೂರ್ತಿ, ಗೋವಿಂದರ ಪರಶುರಾಮ್, ನಸ್ರಿನ್ ಸುಭಾನ್, ಎ.ರೇಷ್ಮಾ ಸುಭಾನ್, ಆದಿಮನಿ ಹುಸೇನ್ ಬಾಷಾ, ಎನ್.ಬುಡೇನ್ ಸಾಬ್, ರೇಖ್ಯಾನಾಯ್ಕ, ಬಿ.ವಿಜಯಕುಮಾರ್, ವಸ್ತ್ರದ ಆನಂದ, ಡಣಾಪುರ ಗ್ರಾಪಂ ಅಧ್ಯಕ್ಷ ಗಾಂಜಿ ಭೀಮಪ್ಪ, ಸದಸ್ಯೆ ಸುನಂದಮ್ಮ, ಬಿ.ತಾಯಪ್ಪ, ತಳವಾರ ಹುಲುಪ್ಪ, ಬಿ.ಎಂ.ಎಸ್. ಕೊಟ್ರೇಶ್, ಕೆ.ಎಚ್.ಸುಬ್ರಮಣಿ, ಕೆ.ಮಾರುತೇಶ್, ಬಿ.ಎಂ. ಎಸ್. ರಾಜೀವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.