ಬಳ್ಳಾರಿ: ಲಾಕ್ ಡೌನ್ ಭಯದಲ್ಲಿ ಊರಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವು
Team Udayavani, Apr 28, 2021, 11:33 AM IST
ಬಳ್ಳಾರಿ : ಲಾಕ್ ಡೌನ್ ಭಯದಲ್ಲಿ ಊರಿಗೆ ಹೊರಟಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ನಡೆದಿದೆ.
ಲಾರಿ- ಕಾರು ಮುಖಾಮುಖಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ನಸುಕಿನ ಜಾವ 1.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮೃತರು ಚಿಂಚೋಳಿ ತಾಲೂಕಿನ ಚಿಮ್ಮಾ ಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದವರು.
ಇದನ್ನೂ ಓದಿ : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇನ್ಸ್ ಪೆಕ್ಟರ್ ಗಂಭೀರ ಗಾಯ
ಕೋವಿಡ್ ಕರ್ಫ್ಯೂ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿಗೆ ಕಾರ್ ಡಿಕ್ಕಿಯಾಗಿ ಈ ಅವಘಡ ನಡೆದಿದ್ದು,ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ (52),ಭೀಮರಾವ (30), ಸುನೀಲ ಶಿವರಾಜ ಪಾಟೀಲ(30), ಕಾರಿನ ಚಾಲಕ ರೇವಣಸಿದ್ದ (30 ) ಸಾವನ್ನಪ್ಪಿದ್ದಾರೆ.
ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.