ತುಂಗಭದ್ರಾ ಪ್ರವಾಹ ಇಳಿಮುಖ

ಸೇತುವೆ ತ್ಯಾಜ್ಯ ತೆರವು ಕಾರ್ಯ ; ಮೂರು ಅಡಿ ಕ್ಷೀಣಿಸಿದ ನೀರು ಹರಿವು

Team Udayavani, Jul 22, 2022, 4:42 PM IST

24

ಕಂಪ್ಲಿ: ಕಂಪ್ಲಿ-ಕೋಟೆಯ ತುಂಗಭದ್ರಾ ನದಿಗೆ ನಿರ್ಮಿಸಲಾದ ಸೇತುವೆ ಮೇಲೆ ಪ್ರವಾಹದಿಂದ ಸಂಗ್ರಹವಾಗಿದ್ದ ಜಲಸಸ್ಯ, ಮರದ ದಿಮ್ಮಿಗಳು ಸೇರಿದಂತೆ ಭಾರಿ ಪ್ರಮಾಣದ ತ್ಯಾಜ್ಯವನ್ನು ಪುರಸಭೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.

ಕಳೆದೆರಡು ದಿನಗಳಿಂದಲೂ ಭಾರಿ ಪ್ರಮಾಣದ ತ್ಯಾಜ್ಯವನ್ನು ತೆರವುಗೊಳಿಸುವಲ್ಲಿ ಪುರಸಭೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ತುಂಗಭದ್ರಾ ಜಲಾಶಯದಿಂದ ನದಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, ತ್ಯಾಜ್ಯವನ್ನು ತೆರವುಗೊಳಿಸಿದ್ದರಿಂದ ನೀರು ಸರಾಗವಾಗಿ ಹರಿಯುತ್ತಿದೆ. ಸೇತುವೆ ಕೆಳಮಟ್ಟದಲ್ಲಿ ಇರುವುದರಿಂದ ಹಾಗೂ ಸೇತುವೆಯ ಎರಡು ಬದಿಯಲ್ಲಿ ರಕ್ಷಣಾ ಕಂಬಿಗಳನ್ನು ಹಾಕಿರುವುದರಿಂದ ಭಾರಿ ಪ್ರಮಾಣದ ಕಸ ಶೇಖರಣೆ ಆಗುತ್ತಿದೆ.

ನೀರಿನ ರಭಸಕ್ಕೆ ಸೇತುವೆ ಎರಡು ಬದಿಯಲ್ಲಿ ನಿರ್ಮಿಸಲಾದ ರಕ್ಷಣಾ ಕಂಬಿಗಳು ಕಿತ್ತುಹೋಗಿವೆ. ಬುಧವಾರವೂ ಸೇತುವೆಯ ಮೇಲೆ ಸುಮಾರು ಒಂದುವರೆ ಅಡಿಯಷ್ಟು ನೀರು ಹರಿಯುತ್ತಿತ್ತು. ಈ ಭಾಗದ ಜನರು 10 ಕಿ.ಮೀ ದೂರದ ಗಂಗಾವತಿ ನಗರಕ್ಕೆ ತೆರಳಲು 27.ಕಿ.ಮೀ ಕ್ರಮಿಸಬೇಕಿದೆ. ಜೊತೆಗೆ ಬಸ್‌ ದರ ಕೂಡ 17 ರೂ. ಬದಲಿಗೆ 26 ರೂ.ಗಳನ್ನು ನೀಡಬೇಕಾಗಿದೆ ಎಂದು ಪ್ರಯಾಣಿಕರು ತಿಳಿಸಿದರು.

ಸೇತುವೆ ಕೆಳಗೆ ಹರಿಯುತ್ತಿದೆ ನೀರು: ತುಂಗಭದ್ರಾ ಜಲಾಶಯದಿಂದ ನದಿಗೆ ಬಿಡುವ ನೀರಿನ ಪ್ರಮಾಣವು ಗಣನೀಯವಾಗಿ ತಗ್ಗಿದ್ದು, ಇದುವರಡೆಗೂ ಒಂದು ಲಕ್ಷದ ಮೇಲೆ ಬರುತ್ತಿದ್ದ ನೀರಿನ ಪ್ರಮಾಣ ಇಂದು 70 ಸಾವಿರ ಕ್ಯೂಸೆಕ್‌ ಗೆ ಇಳಿದಿದೆ. ಕಂಪ್ಲಿ-ಕೋಟೆಯಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ಸಂಪರ್ಕ ಸೇತುವೆಗಿಂತ ಮೂರು ಅಡಿ ಕೆಳಗೆ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ಬಹುತೇಕ ಕಡಿಮೆಯಾಗಿದೆ. ಸೇತುವೆ ಮೇಲಿನ ಕಸವನ್ನೆಲ್ಲಾ ಪುರಸಭೆಯವರು ತೆರವುಗೊಳಿಸಿದ್ದಾರೆ. ಆದರೆ ಸೇತುವೆಯ ಒಂದು ಭಾಗದ ಬಹುತೇಕ ಕಡೆಗಳಲ್ಲಿ ರಕ್ಷಣಾ ಕಂಬಿಗಳು ಕಿತ್ತುಹೋಗಿವೆ. ಪ್ರವಾಹ ಕಡಿಮೆ ಆಗಿದ್ದರೂ ಸಹಿತ ಇನ್ನು ಸೇತುವೆ ಮೇಲೆ ಸಾರ್ವಜನಿಕರನ್ನಾಗಲಿ, ವಾಹನಗಳನ್ನಾಗಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿಲ್ಲ. ಈ ವರ್ಷ ಸತತವಾಗಿ 9 ದಿನಗಳ ಕಾಲ ಭಾರಿ ಪ್ರಮಾಣದ ನೀರು ಸೇತುವೆ ಮೇಲೆ ಹರಿದಿರುವುದರಿಂದ ಸೇತುವೆಯ ಸಾಮಾರ್ಥ್ಯ ಪರಿಶೀಲಿಸಿದ ನಂತರ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆ ಇದೆ.

ನದಿಯ ಪ್ರವಾಹದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಪುರಸಭೆಯವರು ಸೇತುವೆ ಮೇಲಿನ ತ್ಯಾಜ್ಯ ತೆರವುಗೊಳಿಸಿದ್ದಾರೆ. ಆದರೆ ಸೇತುವೆಯ ಭದ್ರತೆ ಮತ್ತು ಸಾಮಾರ್ಥ್ಯದ ಬಗ್ಗೆ ಪರಿಶೀಲಿಸಲು ಗಂಗಾವತಿ ಭಾಗದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಅವರು ಸೇತುವೆ ಪರಿಶೀಲಿಸಿ ಸಂಚಾರಕ್ಕೆ ಅವಕಾಶಕೊಟ್ಟರೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. -ಗೌಸಿಯಾಬೇಗಂ, ತಹಶೀಲ್ದಾರ್‌.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.