ತುಂಗಭದ್ರೆ ರೌದ್ರಾವತಾರ; ಬದುಕು ತತ್ತರ

Team Udayavani, Aug 18, 2018, 5:21 PM IST

dvg-1.jpg

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 2.30 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವುದರಿಂದ ಶುಕ್ರವಾರವೂ ಪ್ರವಾಹ ಮುಂದುವರಿದಿದೆ. ಕಂಪ್ಲಿ-ಕೋಟೆ ಪ್ರದೇಶದ 26 ಮನೆಗಳಿಗೆ ನೀರು ನುಗ್ಗಿದ್ದು, 32 ಕುಟುಂಬಗಳನ್ನು ಸಮೀಪದ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದ್ದು, 130ಕ್ಕೂ ಅಧಿಕ ಸಂತ್ರಸ್ತರಿಗೆ ಗಂಜಿಕೇಂದ್ರದ ವ್ಯವಸ್ಥೆ ಕಲ್ಪಿಸಲಾಗಿದೆ.

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಸಾರ್ವಜನಿಕರು ಪರದಾಡುತ್ತಿದ್ದಾರೆ. ದೇವಸ್ಥಾನಗಳು, ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ. ನದಿ ತೀರದಲ್ಲಿ ಕಂದಾಯ ಅಧಿಕಾರಿಗಳು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನದಿಯಲ್ಲಿ ನೀರಿನ ಪ್ರವಾಹ ಅಧಿಕವಾಗಿರುವ ಹಿನ್ನೆಲೆಯಲ್ಲಿ ಬೇರೆ ಬೇರೆ ಊರುಗಳ ಸಂಪರ್ಕ ಕಳೆದುಕೊಂಡಿವೆ. ಜೊತೆಗೆ ನದಿ ತೀರದ ಬಹುತೇಕ ಪಂಪ್‌ಸೆಟ್‌ಗಳು ಜಲಾವೃತಗೊಂಡಿದೆ. ಕೋಟೆಯ ಬಹುತೇಕ ದೇವಸ್ಥಾನಗಳಿಗೆ ಜಲಕಂಟಕ ಎದುರಾಗಿದ್ದು, ಇದುವರೆಗೂ ಕೇವಲ ಅರ್ಧಮಟ್ಟಕ್ಕೆ ಮುಳುಗಿದ್ದ ದೇವಸ್ಥಾನಗಳು ಇಂದು ಮುಕ್ಕಾಲು ಭಾಗ ಮುಳುಗಿವೆ. ನದಿ ತೀರದ ಬಹುತೇಕ ಭತ್ತ, ಬಾಳೆ ಹಾಗೂ ಕಬ್ಬಿನ ಗದ್ದೆಗಳು ಜಲಾವೃತಗೊಂಡಿದ್ದು, ಬಹುತೇಕ ಬೆಳೆಗಳು ಕೊಳೆತು ಹೋಗುವ ಸ್ಥಿತಿಯಲ್ಲಿವೆ. 

ನೀರಿನ ಮಟ್ಟ ಹೆಚ್ಚಳ: ಮುಂಜಾಗ್ರತಾ ಕ್ರಮ 
ಬಳ್ಳಾರಿ: ತುಂಗಾಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಹೊಸಪೇಟೆ,ಸಿರಗುಪ್ಪ ಮತ್ತು ಹೂವಿನಹಡಗಲಿ ತಾಲೂಕುಗಳಲ್ಲಿನ ನದಿಪಾತ್ರದಲ್ಲಿರುವ ಎಲ್ಲ ಗ್ರಾಮಗಳಲ್ಲಿ ಜಿಲ್ಲಾಡಳಿತ ವತಿಯಿಂದ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ. ಹಡಗಲಿ ತಾಲೂಕಿನ ಹಿರೇಹಡಗಲಿ ಹೋಬಳಿ ಕುರವತ್ತಿ ಗ್ರಾಮದಲ್ಲಿ 38 ಜನರನ್ನು ಸ್ಥಳಾಂತರ ಮಾಡಲಾಗಿದ್ದು,  ಅವರಿಗೆ ಗ್ರಾಮ ಮಟ್ಟದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹಡಗಲಿ ಹೋಬಳಿಯ ಅಂಗೂರು ಗ್ರಾಮದಲ್ಲಿ 11ಜನರನ್ನು ಸ್ಥಳಾಂತರಿಸಲಾಗಿದ್ದು, ಸಂತ್ರಸ್ಥರು ತಮ್ಮ ಇಚ್ಚೆಯಂತೆ ಸಂಬಂಧಿಕರ ಮನೆಗಳಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹಡಗಲಿ,ಹೊಸಪೇಟೆ ಮತ್ತು ಸಿರಗುಪ್ಪ ತಾಲೂಕುಗಳಲ್ಲಿ ನದಿ ನೀರಿನ ಮಟ್ಟ ಹೆಚ್ಚಳದ ಪರಿಣಾಮ 883 ಹೆಕ್ಟೇರ್‌ ಭತ್ತದ ಬೆಳೆ ನೀರಿನಲ್ಲಿ ಮುಳುಗಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಎರಡೂಮೂರು ದಿನಗಳಲ್ಲಿ ನದಿ ನೀರಿನ ಮಟ್ಟ ಕಡಿಮೆಯಾದರೇ ಬೆಳೆ ಮತ್ತೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ನಾ| ವಿ.ಎಸ್‌.ಹಂದ್ರಾಳ್‌ ಭೇಟಿ
ಕಂಪ್ಲಿ: ಕಳೆದ ಹಲವು ದಿನಗಳಿಂದ ಪ್ರವಾಹಕ್ಕೆ ತುತ್ತಾಗಿರುವ ಕಂಪ್ಲಿ-ಕೋಟೆ ಪ್ರದೇಶ ಸೇರಿದಂತೆ ತಾಲೂಕಿನಲ್ಲಿ ಜಲಾವೃತಗೊಂಡ ವಿವಿಧ ಗ್ರಾಮಗಳಿಗೆ ಜಿಲ್ಲಾ ನ್ಯಾಯಾಧೀಶರಾದ ವಿ.ಎಸ್‌.ಹಂದ್ರಾಳ್‌, ಶಾಸಕ ಜೆ.ಎನ್‌.ಗಣೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಜನರಿಗೆ ತೊಂದರೆಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿದರು. ಕೋಟೆ ನದಿ ತೀರದ ವಿವಿಧ ಪ್ರದೇಶ ಹಾಗೂ ಮನೆಗಳಿಗೆ ನೀರು ನುಗ್ಗಿ ಸಂತ್ರಸ್ತರಾದ ಕುಟುಂಬಗಳೊಂದಿಗೆ ಚರ್ಚಿಸಿದರು. ಸಂತ್ರಸ್ತರು ತಾಲೂಕು ಆಡಳಿತ ಆರಂಭಿಸಿರುವ ಗಂಜಿಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಹಾಗೂ ನೀರಿನ ಪ್ರವಾಹ ಅಧಿಕವಾದರೆ ಸುರಕ್ಷಿತ ಸ್ಥಳಗಳಿಗೆ
ತೆರಳುವಂತೆ ಸೂಚಿಸಿದರು. ನಂತರ ಗಂಜಕೇಂದ್ರಕ್ಕೆ ಭೇಟಿ ನೀಡಿದ ನ್ಯಾ|ವಿ.ಎಸ್‌. ಹಂದ್ರಾಳ್‌, ಸಂತ್ರಸ್ತರಿಗೆ ಕೈಗೊಂಡ ವಸತಿ ಹಾಗೂ ಊಟದ ವ್ಯವಸ್ಥೆ ಪರಿಶೀಲಿಸಿ ಸೇತುವೆ ಮೇಲೆ ಹರಿಯುತ್ತಿರುವ ಪ್ರವಾಹ ವೀಕ್ಷಿಸಿದರು. ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ನದಿಗೆ ಇನ್ನು ಹೆಚ್ಚಿನ ಪ್ರಮಾಣದ ನೀರು ಬಿಡುವ ನಿರೀಕ್ಷೆ ಇದ್ದು, ನದಿ ತೀರದ ಕುಟುಂಬಗಳನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಮತ್ತು ಸಂತ್ರಸ್ತರಿಗೆ ಗಂಜಿಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸೂಚಿಸಿದರು. ಈ ವೇಳೆ ತಹಶೀಲ್ದಾರ್‌ ಎಂ.ರೇಣುಕಾ,
ಉಪ ತಹಶೀಲ್ದಾರ್‌ ಬಿ.ರವೀಂದ್ರಕುಮಾರ್‌, ಪಿಎಸ್‌ಐ ನಿರಂಜನ ಇದ್ದರು.

ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಕೋಟೆಯಲ್ಲಿ ಪ್ರವಾಹ ಪರಿಸ್ಥಿತಿ ಅಧಿಕವಾಗಿದೆ. ಇಂದು 26 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಅಲ್ಲಿ ಗಂಜಿಕೇಂದ್ರ ತೆರೆಯಲಾಗಿದೆ. ಪ್ರವಾಹ ಅಧಿಕವಾದರೆ ಪಟ್ಟಣದ 8ನೇ ವಾರ್ಡ್‌ ಸರ್ಕಾರಿ ಶಾಲೆಯನ್ನು ವಸತಿಗಾಗಿ ಕಾಯ್ದಿರಿಸಲಾಗಿದೆ.

ಗಂಜಿಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ನದಿ ತೀರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ನದಿ ತೀರದಲ್ಲಿ ಕಂದಾಯ ಅಧಿಕಾರಿಗಳು, ಉಪ ತಹಶೀಲ್ದಾರ್‌ ಬಿ.ರವೀಂದ್ರಕುಮಾರ್‌, ಆಹಾರ ನಿರೀಕ್ಷಕರಾದ ರವಿ ರಾಠೊಡ್‌, ಎಸ್‌.ಎಸ್‌.ತಂಗಡಗಿ, ಗ್ರಾಮ ಲೆಕ್ಕಾಧಿಕಾರಿಗಳು, ಪುರಸಭೆ ಸಿಬ್ಬಂದಿ, ಪೊಲೀಸರು ಬೀಡು ಬಿಟ್ಟಿದ್ದು ತೀವ್ರ ನಿಗಾವಹಿಸಿದ್ದಾರೆ.
 ಎಂ.ರೇಣುಕಾ, ತಹಶೀಲ್ದಾರ್‌ ಕಂಪ್ಲಿ.

ಟಾಪ್ ನ್ಯೂಸ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.