ತುಂಗಭದ್ರಾ ಜಲಾಶಯದ ಹೂಳೆತ್ತಿ: ಸುಲೋಚನಮ್ಮ
Team Udayavani, Jul 25, 2017, 12:36 PM IST
ಸಿರುಗುಪ್ಪ: ಕಳೆದ ಮೂರು ವರ್ಷಗಳಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ಸಮರ್ಪಕ
ಮಳೆಯಿಲ್ಲದೇ ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಜಲಾಶಯದಲ್ಲಿ
ತುಂಬಿರುವ ಹೂಳೆತ್ತಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ರಾಜ್ಯ ಉಪಾಧ್ಯಕ್ಷೆ ಸುಲೋಚನಮ್ಮ ಹೇಳಿದರು.
ತಾಲೂಕಿನ ಕರೂರು ಗ್ರಾಮದ ಸ.ಮಾ.ಹಿ.ಪ್ರಾ.ಶಾಲೆ ಆವರಣದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಜಿಲ್ಲಾ
ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾವಂತರಾಗೋಣ, ಪ್ರಗತಿ ಹಾದಿಯಲ್ಲಿ ಸಾಗೋಣ ಎನ್ನುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೈಸರ್ಗಿಕವಾಗಿ ಸಿಗುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಪ್ರಜ್ಞೆ ರೈತರಲ್ಲಿ ಮೂಡಬೇಕಾಗಿದೆ. ನೀರಿಲ್ಲದೇ ಹೋದರೆ ಬದುಕುವುದು ಕಷ್ಟವಾಗುತ್ತದೆ. ಕೃಷಿ ಕುಂಠಿತವಾಗುತ್ತದೆ. ನೀರನ್ನು ಹಿತ-ಮಿತವಾಗಿ ಬಳಕೆ ಮಾಡುವುದರಿಂದ ನೀರು ಉಳಿಸುವುದರೊಂದಿಗೆ ಉತ್ತಮ ಬೆಳೆ ಬೆಳೆಯಬಹುದು. ತುಂಗಭದ್ರಾ ಅಚ್ಚುಕಟ್ಟು ರೈತರು ನೀರಿನ ಸದ್ಬಳಕೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಕೇವಲ ಭತ್ತ ಬೆಳೆಯದೇ ಬಹುಬೆಳೆ ಅಳವಡಿಸಿಕೊಳ್ಳಬೇಕು ಎಂದರು.
ರೈತ ಆರ್. ನಾಗರೆಡ್ಡಿ ಮಾತನಾಡಿ, ಕೃಷಿಕರ ಮಕ್ಕಳು ತಮ್ಮ ಓದಿನೊಂದಿಗೆ ಕೃಷಿ ಅಳವಡಿಸಿಕೊಳ್ಳಬೇಕು. ರೈತ ಬಿತ್ತಿ ಬೆಳೆಯದಿದ್ದರೆ ಜಗತ್ತಿಗೆ ಅನ್ನ ಸಿಗುವುದಿಲ್ಲ. ಇಂದಿನ ಯುವಕರು ಕೃಷಿಯ ಬಗ್ಗೆ ನಿರ್ಲಕ್ಷ ವಹಿಸಿರುವುದು ಒಕ್ಕಲುತನದ ಮೂಲಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು. ಭಾರತ ಸೇವಾದಳ ಜಿಲ್ಲಾ ಸಂಚಾಲಕ ಟಿ.ಜಿ. ವಿಠಲ, ಸಿರವಾರ ಚಾಗನೂರು ರೈತ ಹೋರಾಟ ಸಮಿತಿಯ ಸಂಚಾಲಕ ಮಲ್ಲಿಕಾರ್ಜುನರೆಡ್ಡಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಆರ್.ಮಾಧವರೆಡ್ಡಿ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಗಡ್ಡಿ, ತಾಲೂಕು ಕಾರ್ಯಾಧ್ಯಕ್ಷ ಅಬ್ದುಲ್ ರೌಫ್, ಕಾರ್ಯದರ್ಶಿ ಮಂಜುನಾಥ
ಆಚಾರಿ, ಜಡೆಪ್ಪ, ಕೆ. ಪ್ರಹ್ಲಾದಾಚಾರಿ, ಡಾ| ಬಸವರಾಜರೆಡ್ಡಿ, ಮುಖ್ಯಗುರು ಭಾಗ್ಯಲಕ್ಷ್ಮೀ, ಶಿಕ್ಷಕ ನಾಗರಾಜ, ಕೃಷಿ ವಿಜ್ಞಾನಿ ವಿಜಯಕುಮಾರಗೌಡ ಮಾತನಾಡಿದರು.
ನಿವೃತ್ತ ಶಿಕ್ಷಕ ನರಸಿಂಗರಾವ್, ಗ್ರಾಪಂ ಸದಸ್ಯ ಡಿ. ಪಾಲಾಕ್ಷರೆಡ್ಡಿ, ಮುಖಂಡ ಕೆಂಚಪ್ಪ, ಸಲ್ಲಾ ತಿಮ್ಮಾರೆಡ್ಡಿ, ಕೆ.ರಾಘವೇಂದ್ರರೆಡ್ಡಿ, ವೀರಾರೆಡ್ಡಿ, ವಿಶ್ವನಾಥರೆಡ್ಡಿ, ಕಣೇಕಲ್ಲಪ್ಪ ಇದ್ದರು. ಗ್ರಾಮದ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ 140 ವಿದ್ಯಾರ್ಥಿಗಳು ಮತ್ತು ಗ್ರಾಮದಲ್ಲಿ ಓದಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 180 ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.