ಹಂಪಿ ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಕ್ಕೆ ಆಗಮಿಸಿದ್ದ ಇಬ್ಬರು ಯುವಕರು
ಗೆಳೆಯನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಮಿಸಿದ್ದರು
Team Udayavani, Dec 28, 2022, 6:57 PM IST
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ನದಿಯಲ್ಲಿ ಈಜುಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಬುಧವಾರ ನಡೆದಿದೆ.
ಬೆಂಗಳೂರು ಮೂಲದ ಹರೀಶ್ (18) ಮತ್ತು ಜೀವನ್ (18) ನದಿಯಲ್ಲಿ ಕೊಚ್ಚಿ ಹೋದ ಯುವಕರು. ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರು, ಪುರಂದರ ದಾಸರ ಮಂಟಪದ ಬಳಿ ಹರಿಯುತ್ತಿರುವ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ.
ಗೆಳೆಯನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಮಂಗಳವಾರ ಆಗಮಿಸಿದ್ದ ಯುವಕರು ಎಂಟು ಜನ ಗೆಳೆಯರೊಂದಿಗೆ ಹಂಪಿಗೆ ಭೇಟಿ ನೀಡಿದ್ದರು. ಈ ವೇಳೆ ಪುರಂದರ ಮಂಟಪದ ಹತ್ತಿರ ಹಾದು ಹೋಗಿರುವ ನದಿಯಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಹೊರ ಬರಲಾರದೇ ಜಲ ಸಮಾಧಿಯಾಗಿದ್ದಾರೆ. ಹಂಪಿ ಪೊಲೀಸರು, ಅಗ್ನಿಶಾಮಕದ ದಳದ ಸಿಬಂದಿಗಳು ಹಾಗೂ ನುರಿತ ಈಜುಗಾರರು, ನಾಪತ್ತೆಯಾದ ಯುವಕರ ಶೋಧ ನಡೆಸಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.