ಬಗೆಹರಿಯದ ಮೇಯರ್‌ ಆಯ್ಕೆ ವಿವಾದ

ಬೂದಿಮುಚ್ಚಿದ ಕೆಂಡದಂತಿರುವ ಅಸಮಾಧಾನ

Team Udayavani, May 18, 2022, 2:19 PM IST

un-resolve

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ ದಿನಕ್ಕೊಂದು ವಿವಾದಕ್ಕೀಡಾಗುತ್ತಿದ್ದು, ಇದರಿಂದ ಬೂದಿಮುಚ್ಚಿದ ಕೆಂಡದಂತಿರುವ ಸದಸ್ಯರಲ್ಲಿನ ಅಸಮಾಧಾನ ಮೇ 18ರಂದು ನಡೆಯಲಿರುವ ಮೊದಲ ಸಾಮಾನ್ಯ ಸಭೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಅತೃಪ್ತ ಸದಸ್ಯರು ಷರತ್ತಿನ ಮೇರೆಗೆ ಸಭೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸತತ ಎರಡನೇ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿರುವ ಜಿಲ್ಲಾ ಕಾಂಗ್ರೆಸ್‌, ಮೇಯರ್‌ ಆಯ್ಕೆಯಿಂದ ಸದಸ್ಯರಲ್ಲಿ ಮೂಡಿರುವ ಅಸಮಾ ಧಾನವನ್ನು ಶಮನ ಮಾಡುವಲ್ಲಿ ವಿಫಲವಾಗಿದೆ. ಹಿಂದೆ ಸಾಮಾನ್ಯಕ್ಕೆ ಮೀಸಲಾಗಿದ್ದ ಮೇಯರ್‌ ಸ್ಥಾನದ ಆಕಾಂಕ್ಷಿಗಳಿಗೆ ಮೀಸಲಾತಿ ಬದಲಾವಣೆಯಿಂದ ಕೈತಪ್ಪಿದ್ದರೂ, ಹಾಲಿ ಮೇಯರ್‌ ಆಯ್ಕೆ ಮಾಡುವಾಗ ಅತೃಪ್ತ ಸದಸ್ಯರು ಸೂಚಿಸಿದ ಮೂವರು ಸದಸ್ಯರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ.

ಇದರಿಂದ ಬೇಸತ್ತಿದ್ದ 6ನೇ ವಾರ್ಡ್‌ ಸದಸ್ಯೆ ಪದ್ಮರೋಜಾ ಮತ್ತವರ ಪತಿ ಎಂ. ವಿವೇಕಾನಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಅತೃಪ್ತ ಸದಸ್ಯರು ಪಕ್ಷದ ಹಿರಿಯ ಮುಖಂಡ ಕೆ.ಸಿ.ಕೊಂಡಯ್ಯ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದು ಅತೃಪ್ತ ಸದಸ್ಯರ ಅಸಮಾಧಾನ ಶಮನಗೊಳ್ಳದಿರಲು ಕಾರಣವಾಗಿದೆ. ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರಿಗೆ ಸಾಮಾನ್ಯ ಸಭೆ ಸುಗಮವಾಗಿ ನಡೆಯಬೇಕಿದೆ.

ಸ್ಥಾಯಿ ಸಮಿತಿ ಅಧ್ಯಕ್ಷಗಿರಿಗೆ ಪಟ್ಟು

ಮೇಯರ್‌ಗಿರಿ ಕಳೆದುಕೊಂಡಿರುವ ಅತೃಪ್ತಿಯಲ್ಲಿರುವ ಬಳ್ಳಾರಿ ನಗರ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ಸದಸ್ಯರು ಇದೀಗ ಮೂರೂ ಸ್ಥಾಯಿ ಸಮಿತಿ ಅಧ್ಯಕ್ಷಗಿರಿ ತಮ್ಮವರಿಗೆ ನೀಡಬೇಕು ಎಂಬ ಷರತ್ತು ವಿಧಿ ಸಿದ್ದಾರೆ. ಸಾಮಾನ್ಯ ಸಭೆಯ ಅಜೆಂಡಾಗಳು ಚರ್ಚೆಗೆ ಬರುವ ಮುನ್ನವೇ ಈ ಸ್ಥಾಯಿ ಸಮಿತಿ ಅಧ್ಯಕ್ಷಗಿರಿ ವಿಚಾರ ನಿರ್ಧಾರ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪಾಲಿಕೆ ಕಚೇರಿಯಲ್ಲಿಯೇ ರಾತ್ರಿ ಸಭೆ ನಡೆಸಿರುವ ಅತೃಪ್ತ ಸದಸ್ಯರು ನಗರ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 26ನೇ ವಾರ್ಡ್‌ನ ಡಿ. ಸುಕುಮ್‌, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 8ನೇ ವಾರ್ಡ್‌ನ ರಾಮಾಂಜಿನೇಯಲು, ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 5ನೇ ವಾರ್ಡ್‌ನ ರಾಜಶೇಖರ್‌ ಅವರನ್ನು ಆಯ್ಕೆಮಾಡಬೇಕು ಎಂಬ ಬೇಡಿಕೆಯನ್ನು ಮೇಯರ್‌, ಶಾಸಕ ಬಿ. ನಾಗೇಂದ್ರ ಅವರಿಗೆ ನೀಡಲಾಗಿದೆ. ಅದರಂತೆ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದರಷ್ಟೇ ಅತೃಪ್ತ ಸದಸ್ಯರು ಪಾಲಿಕೆ ಸಭಾಂಗಣದಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲವಾದರೆ ಸಾಮಾನ್ಯ ಸಭೆಯಿಂದ ದೂರ ಉಳಿಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇತ್ತ ಮೇಯರ್‌, ಶಾಸಕ ಸಹಿತ ಈ ಪಟ್ಟಿಗೆ ಬಹುತೇಕ ಒಪ್ಪಿಗೆ ಸೂಚಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಿಳಿದು ಬಂದಿದೆ.

ಆಸೀಫ್‌ ನಡೆ ನಿಗೂಢ

ಮೇಯರ್‌ ಸ್ಥಾನಕ್ಕಾಗಿ ಕಾಂಗ್ರೆಸ್‌ ಮುಖಂಡ ಟಿ.ಜಿ. ಎರ್ರಿಸ್ವಾಮಿ ಎನ್ನುವವರಿಗೆ 3.5 ಕೋಟಿ ರೂ. ನೀಡಿರುವುದಾಗಿ ಆರೋಪಿಸಿ ದೂರು ನೀಡಿರುವ 30ನೇ ವಾರ್ಡ್‌ ಸದಸ್ಯ ಎನ್‌.ಎಂ.ಡಿ.ಆಸೀಫ್‌ ಅವರು ಮೇ 18ರ ಮೊದಲ ಸಾಮಾನ್ಯ ಸಭೆಗೆ ಬರುತ್ತಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಅಲ್ಲದೆ ಪೊಲೀಸ್‌ ಇಲಾಖೆ ನೀಡಿರುವ ನೋಟಿಸ್‌ನ ಗಡುವು ಸಹ ಮುಗಿದಿದೆ. ಹಣ ಪಡೆದ ಆರೋಪ ಹೊತ್ತ ಟಿ.ಜಿ. ಎರ್ರಿಸ್ವಾಮಿ ಮತ್ತು ಆಸೀಫ್‌ ನಡುವೆ ಮಾತುಕತೆಗಳು ನಡೆದಿದ್ದು, ಎಲ್ಲವೂ ಶೀಘ್ರದಲ್ಲೇ ಸುಖಾಂತ್ಯ ಕಾಣಲಿದೆ ಎಂಬ ಮಾತುಗಳು ಸಹ ಪಕ್ಷದ ವಲಯದಲ್ಲಿ ಕೇಳಿಬರುತ್ತಿದ್ದು, ಸದ್ಯ ಆಸೀಫ್‌ ನಡೆ ಕುತೂಹಲ ಮೂಡಿಸಿದೆ.

ನಾವು (ಅತೃಪ್ತ ಸದಸ್ಯರು) ಸೂಚಿಸುವ ಮೂವರು ಸದಸ್ಯರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಮೇಯರ್‌, ಶಾಸಕರು ಭರವಸೆ ನೀಡಿದ್ದಾರೆ. ಮೇ 18ರಂದು ಮೊದಲು ಬೇಡಿಕೆ ಈಡೇರಿದ ಬಳಿಕವೇ ಸಾಮಾನ್ಯ ಸಭೆ ನಡೆಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಎಲ್ಲ ಅಸಮಾಧಾನವೂ ಶಮನವಾಗಿದೆ. ಪ್ರಭಂಜನ್‌ ಕುಮಾರ್‌ 3ನೇ ವಾರ್ಡ್‌ ಸದಸ್ಯರು ಬಳ್ಳಾರಿ

ಟಾಪ್ ನ್ಯೂಸ್

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.