ಬೆಳೆಗೆ ಅಗತ್ಯವಿರುವಷ್ಟೇ ನೀರು ಬಳಸಿ: ನಜೀರ್
ರೈತರೊಂದಿಗೆ ಕೃಷಿ ವಿಜ್ಞಾನಿ, ಅಧಿಕಾರಿಗಳ ಸಂವಾದ
Team Udayavani, Mar 17, 2022, 12:52 PM IST
ಸಿರುಗುಪ್ಪ: ರೈತರು ಭತ್ತದ ಬೆಳೆಯಲ್ಲಿ ಹೆಚ್ಚು ನೀರನ್ನು ನಿಲ್ಲಿಸುವುದರಿಂದ ಭೂಮಿ ಫಲವತ್ತತೆ ಕಡಿಮೆಯಾಗುತ್ತದೆ. ಅಲ್ಲದೆ ಭೂಮಿ ಸವಕಳಿಯಾಗುತ್ತದೆ. ಆದ್ದರಿಂದ ಭತ್ತದ ಬೆಳೆಗೆ ಎಷ್ಟು ನೀರು ಬೇಕೋ ಅಷ್ಟು ನೀರನ್ನು ಮಾತ್ರ ಬಳಕೆ ಮಾಡಬೇಕೆಂದು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದರು.
ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿ ಕ್ರಿಭ್ಕೋ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ರೈತರೊಂದಿಗೆ ಕೃಷಿ ವಿಜ್ಞಾನಿ ಮತ್ತು ಕೃಷಿ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಭತ್ತದ ಗದ್ದೆಯಲ್ಲಿ ಯಥೇಚ್ಚ ನೀರು ನಿಲ್ಲಿಸುವುದರಿಂದ ಗದ್ದೆಗೆ ಹಾಕಿದ ಗೊಬ್ಬರ ನೀರಿನೊಂದಿಗೆ ಹರಿದು ಹೋಗುತ್ತದೆ. ರೋಗರುಜಿನಗಳ ಕಾಟ ಹೆಚ್ಚಾಗುತ್ತದೆ. ಆದ್ದರಿಂದ ಭತ್ತದ ಗದ್ದೆಯಲ್ಲಿ ಕೂದಲೆಳೆಯ ಅಂತರದ ಬಿರುಕು ಬಿಟ್ಟನಂತರ ನೀರನ್ನು ಹರಿಸುವುದರಿಂದ ಉತ್ತಮ ಬೆಳವಣಿಗೆಯಾಗುತ್ತದೆ. ಅಲ್ಲದೆ ರೋಗ ರುಜಿನಗಳು, ಕ್ರಿಮಿಕೀಟಗಳ ಕಾಟ ಕಡಿಮೆಯಾಗುತ್ತದೆ ಎಂದು ಹೇಳಿದರು.
ಕೃಷಿ ವಿಜ್ಞಾನಿ ಡಾ| ಎಂ.ಎ. ಬಸವಣ್ಣೆಪ್ಪ ಮಾತನಾಡಿ, ಪ್ರತಿಯೊಬ್ಬ ರೈತರು ತಮ್ಮ ಜಮೀನಿನಲ್ಲಿ ಹಸಿರೆಲೆ ಗೊಬ್ಬರವನ್ನು ಬೆಳೆಸಿ ಭೂಮಿಗೆ ಬೆರೆಸುವುದರಿಂದ ಭೂಮಿಯಲ್ಲಿ ಫಲವತ್ತತೆ ಹೆಚ್ಚುತ್ತದೆ. ರೈತರು ತಿಪ್ಪೆ ಗೊಬ್ಬರದೊಂದಿಗೆ ಸಾವಯವ ಗೊಬ್ಬರವನ್ನು ಭೂಮಿಗೆ ನೀಡಿದರೆ ಉತ್ತಮ ಇಳುವರಿ ಬರುತ್ತದೆ. ಮಣ್ಣಿನ ಆರೋಗ್ಯ ಉತ್ತಮವಾಗುತ್ತದೆ. ಉತ್ತಮ ಮಣ್ಣಿನಿಂದ ಹೆಚ್ಚಿನ ಇಳುವರಿಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕ್ರಿಭ್ಕೋ ಮಾರುಕಟ್ಟೆ ಅಧಿಕಾರಿ ಬಾಬು, ಪ್ರಗತಿಪರ ರೈತರಾದ ಖಾಸಿಂಸಾಬ್, ಅಶೋಕ್, ಮಲ್ಲನಗೌಡ, ಶಂಭನಗೌಡ, ಗಫೂರ್‌ಸಾಬ್, ಎಸ್.ನಾಗರಾಜ, ಜಿ. ಬಸವನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.