ಶಾಲಾವರಣಕ್ಕೆ ವಠಾರ ಶಾಲೆ ಶಿಫ್ಟ್
Team Udayavani, Aug 3, 2020, 2:13 PM IST
ಕಂಪ್ಲಿ: ಪಟ್ಟಣದ ಎಂ.ಡಿ.ಕ್ಯಾಂಪ್‌ನ ಸರ್ಕಾರಿ ಕಿ.ಪ್ರಾ.ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವಠಾರ ಶಾಲೆ ಆರಂಭಿಸಿದ್ದು, ಕೋವಿಡ್ ಭೀತಿಯಿಂದ ವಠಾರ ಶಾಲೆಯನ್ನು ವಠಾರದಿಂದ ಶಾಲೆಯ ಆವರಣಕ್ಕೆ ಸ್ಥಳಾಂತರಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯವೂ ಸೇರಿದಂತೆ ಅಲೆಮಾರಿಗಳೇ ಅಧಿಕ ಸಂಖ್ಯೆಯಲ್ಲಿ ವಾಸಿಸುವ ಕ್ಯಾಂಪ್‌ನಲ್ಲಿ ಶಾಲೆ ಆರಂಭದಿಂದ ಮಕ್ಕಳು ಪಾಲಕರಿಗೆ ಸಂತಸ ತಂದಿತ್ತು. ಆದರೆ ಪಕ್ಕದ ಓಣಿಯಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದರಿಂದ ಸೀಲ್‌ಡೌನ್ ಮಾಡಿರುವುದರಿಂದ ಶಾಲೆಯನ್ನು ಶುಕ್ರವಾರ ಶಾಲಾವರಣಕ್ಕೆ ಸ್ಥಳಾಂತರ ಮಾಡಲಾಗಿದೆ. ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ 15ರಿಂದ 20 ವಿದ್ಯಾರ್ಥಿಗಳಿದ್ದು, ಮಾಸ್ಕ್, ದೈಹಿಕ ಅಂತರ ಪಾಲಿಸಿ ಪ್ರತಿದಿನ ಒಂದೂವರೆ ಗಂಟೆ ಪಾಠ ಪ್ರವಚನ ಮಾಡಲಾಗುತ್ತಿದೆ. ಹೀಗಾಗಿ ಶಾಲೆಯ ಸ್ಥಳಾಂತರಕ್ಕೆ ಪಾಲಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕ್ಯಾಂಪ್‌ನಲ್ಲಿ ಸ್ವತ್ಛತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಶಾಲೆಯಲ್ಲಿ ಬೋರ್ಡ್, ಪ್ಲಾಕ್‌ಕಾರ್ಡ್ ಇತರೆ ಕಲಿಕಾ ಸಾಧನಗಳನ್ನು ತೋರಿಸಿ ಪರಿಣಾಮಕಾರಿಯಾಗಿ ಬೋಧಿಸಬಹುದು. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಪಾಲಕರು ಸಭೆ ನಡೆಸಿ ಶಿಕ್ಷಣ ಇಲಾಖೆ ಗಮನಕ್ಕೆ ತಂದಲ್ಲಿ ಶಾಲೆಯಲ್ಲಿಯೇ ಪಾಠ ಹೇಳಬಹುದು ಎನ್ನುತ್ತಾರೆ ಮುಖ್ಯ ಶಿಕ್ಷಕರಾದ ಎ.ನಾಗರಾಜ ಮತ್ತು ಸಹ ಶಿಕ್ಷಕಿ ಎಸ್.ಸರಸ್ವತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.