ನೆಲಕ್ಕೆ ಮುತ್ತಿಟ್ಟು, ವಿಜಯನಗರ ಬಾವುಟ ಪ್ರದರ್ಶಿಸಿದ ಆನಂದ
Team Udayavani, Feb 9, 2021, 4:17 PM IST
ಹೊಸಪೇಟೆ: ವಿಜಯನಗರ ಜಿಲ್ಲೆಗೆ ಸರ್ಕಾರ ಅಂತಿಮ ಅ ಧಿಸೂಚನೆ ಹೊರಡಿಸುತ್ತಿದ್ದಂತೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ನಗರದ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದ ಸಚಿವ ಆನಂದ ಸಿಂಗ್ ಹೆಲಿಕಾಪ್ಟರ್‌ನಿಂದ ಕೆಳಗೆ ಇಳಿಯುತ್ತಿದ್ದಂತೇ ನೆಲಕ್ಕೆ ಮುತ್ತಿಟ್ಟರು. ಈ ಸಂದರ್ಭದಲ್ಲಿ ಅವರ ಅಭಿಮಾನಿ ಹಾಗೂ ಬೆಂಬಲಿಗರು ಕುಂಬಳಕಾಯಿ ಒಡೆದು ಪೂಜೆ ಸಲ್ಲಿಸಿದರು. ಕಾರಿನ ಮುಂಭಾಗದಲ್ಲಿ ಕುಳಿತು ಹೊಸಪೇಟೆಯಿಂದ ಹಂಪಿವರೆಗೆ ವಿಜಯನಗರಬಾವುಟ ಪ್ರದರ್ಶನ ಮಾಡಿ ಸಂಭ್ರಮಿಸಿದರು.
ಹಂಪಿ ತುಂಗಭದ್ರಾ ನದಿಯಲ್ಲಿ ಸ್ನಾನಮಾಡಿದ ಆನಂದ ಸಿಂಗ್ ಅವರಿಗೆ ವಿರೂಪಾಕ್ಷ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ ಆರು ಬಾರಿ ಜಲಮಜ್ಜನ ಮಾಡುವ ಮೂಲಕ ಆಶೀರ್ವಾದ ಮಾಡಿತು. ನಂತರ ತಮ್ಮ ಅಭಿಮಾನಿ ಹಾಗೂ ಬೆಂಬಲಿಗರೊಂದಿಗೆ ವಿರೂಪಾಕ್ಷ ಹಾಗೂ ಪಂಪಾದೇವಿ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಗೆ ರಚನೆಯಿಂದ ಪಶ್ಚಿಮ ತಾಲೂಕುಗಳ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ.
ಇದನ್ನೂ ಓದಿ:118 ಅಬಕಾರಿ ಉಪ ನಿರೀಕ್ಷಕರು ಸೇವೆಗೆ ಅಣಿ
ಬಳ್ಳಾರಿ ಜಿಲ್ಲೆ ವಿಭಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಜಿಲ್ಲೆಗೆ ವಿರೋಧ ಮಾಡಿದವರು ಕೂಡ ನನ್ನ ಅಣ್ಣ-ತಮ್ಮಂದಿರು, ಗಡಿ ವಿಚಾರಕ್ಕೆ ಬಂದರೆ ನಾವೆಲ್ಲರೂ ಒಂದೇ. ಬೇರೆಯವರು ಬಳ್ಳಾರಿಗೆ ಬಂದು ಜಿಲ್ಲೆಕೊಡಿ ಎಂದರೆ ಬಿಟ್ಟುಕೊಡುತ್ತಿವಾ? ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಜಿಲ್ಲೆಗಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ತಮ್ಮ ಆಪ್ತ ಸಹಾಯಕ ಮುನಿರಾಜ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.