ಜಿಲ್ಲೆ ನೀಲನಕ್ಷೆ ತಯಾರಿಸಲು ಮಾಹಿತಿ ನೀಡಿ

ವಿಜಯನಗರದಲ್ಲಿ ಜಿಲ್ಲಾಮಟ್ಟದ ಕಚೇರಿ ಕಾರ್ಯನಿರ್ವಹಣೆ ಕುರಿತು ಸಭೆ

Team Udayavani, Mar 3, 2021, 6:57 PM IST

Shravan

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಹೊಸದಾಗಿ ಆಸ್ತಿತ್ವಕ್ಕೆ ಬಂದಿದ್ದು, ಈ ಜಿಲ್ಲೆಗೆ ಮೂಲಸೌಕರ್ಯಗಳ ಕಲ್ಪಿಸುವಿಕೆ, ಇಲಾಖೆಗಳ ಆಸ್ತಿ ಹಂಚುವಿಕೆ ಮತ್ತು ಜಿಲ್ಲಾಮಟ್ಟದ ಕಚೇರಿಗಳ ಸ್ಥಾಪನೆ ಸೇರಿದಂತೆ ಸಮಗ್ರವಾಗಿ ವಿಜಯನಗರ ಜಿಲ್ಲೆ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ನೀಲನಕ್ಷೆ ತಯಾರಿಕೆಗೆ ಅಗತ್ಯ ಮಾಹಿತಿ ನೀಡಬೇಕು ಎಂದು ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಜಯನಗರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆಯಲ್ಲಿ ಈಗಾಗಲೇ ಕೆಲ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಸಮಸ್ಯೆ ಇಲ್ಲ. ಆದರೆ ಹೊಸದಾಗಿ ಕಚೇರಿಗಳು ಆರಂಭಿಸಲು ನಮೂನೆಗಳನ್ನು ಸಿದ್ಧಪಡಿಸಲಾಗಿದ್ದು ಅವುಗಳನ್ನು ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಿ ನೀಡುವಂತೆ ಸೂಚಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ತಮ್ಮ ತಮ್ಮ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಮತ್ತು ನೂತನ ಜಿಲ್ಲೆಗೆ ಎಷ್ಟು ಜನ ಸಿಬ್ಬಂದಿ ನಿಯೋಜಿಸುತ್ತಿದ್ದೀರಿ, ನೂತನ ಜಿಲ್ಲೆಯಲ್ಲಿ ಇಲಾಖೆಯ ಜಿಲ್ಲಾ ಕಚೇರಿ ತಾತ್ಕಾಲಿಕವಾಗಿ ಆರಂಭಿಸುವುದಕ್ಕೆ ನಿಗದಿಮಾಡಿರುವ ಸ್ಥಳ ಯಾವುದು ಮತ್ತು ಮತ್ತು ಹೊಸಪೇಟೆಯಲ್ಲಿಯೇ ಇರುವ ತಮ್ಮ ತಮ್ಮ ತಾಲೂಕು ಕಚೇರಿಯನ್ನೇ ವಿಸ್ತರಣೆ ಮಾಡುವಿರಾ? ನೂತನ ಜಿಲ್ಲೆಯಲ್ಲಿರುವ ತಮ್ಮ ತಮ್ಮ ಇಲಾಖೆಗಳಲ್ಲಿರುವ ಆಸ್ತಿಗಳ ಪ್ರಮಾಣ (ಚರ ಮತ್ತು ಸ್ಥಿರಾಸ್ತಿ ಸೇರಿದಂತೆ), ತಮ್ಮ ಇಲಾಖೆಗಳ ವ್ಯಾಪ್ತಿಯ ಮರುಹಂಚಿಕೆಗಳ ವಿವರ ಹಾಗೂ ಇತರೇ ವಿವರಗಳನ್ನು ಕೂಡಲೇ ಸಲ್ಲಿಸಬೇಕು. ಈ ಎಲ್ಲ ವಿವರಗಳನ್ನು ಪಡೆದುಕೊಂಡು ಸರ್ಕಾರದ ಮಟ್ಟದಲ್ಲಿ ಪರಿಶೀಲನೆ ನಡೆಸಿ ನೋಟಿಫಿಕೇಶನ್‌ ಹೊರಡಿಸಲಾಗುವುದು ಎಂದರು.

ವಿಜಯನಗರ ಹೆಸರು ನಮೂದಿಸಿ:ವಿಜಯನಗರ ಜಿಲ್ಲೆಗಳಲ್ಲಿರುವ 6 ತಾಲೂಕುಗಳಲ್ಲಿ ಸರ್ಕಾರಿ ಸಂಬಂಧಿಸಿದ ಯಾವುದೇ ರೀತಿಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ವಿಜಯನಗರ ಜಿಲ್ಲೆ ಹೆಸರನ್ನು ನಮೂದಿಸಬೇಕು. ಆ ಭಾಗದ ಜನರು ಈಗಾಗಲೇ ಜಿಲ್ಲೆ ಘೋಷಣೆಯಾದರೂ ಅ ಧಿಕಾರಿಗಳು ವಿಜಯನಗರ ಜಿಲ್ಲೆ ಹೆಸರು ನಮೂದಿಸುತ್ತಿಲ್ಲ ಎಂದು ತಿಳಿದುಕೊಳ್ಳಲಿದ್ದಾರೆ ಎಂದು ಡಿಸಿ ಪವನಕುಮಾರ್‌ ಮಾಲಪಾಟಿ ಮತ್ತು ವಿಜಯನಗರ ಜಿಲ್ಲೆ ವಿಶೇಷಾಧಿ ಕಾರಿ ಅನಿರುದ್ಧ ಶ್ರವಣ್‌ ಅವರು ಹೇಳಿದರು.

ವಿಜಯನಗರಕ್ಕೂ ಬಳ್ಳಾರಿ ಡಿಸಿ: ಫೆ. 8ರಿಂದ ವಿಜಯನಗರ ಜಿಲ್ಲೆಗೂ ಬಳ್ಳಾರಿ ಜಿಲ್ಲಾಧಿಕಾರಿಗಳೇ ಪ್ರಭಾರಿ ಅ ಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವುದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಅದರಂತೆ ಎಲ್ಲರೂ ಕಾರ್ಯನಿರ್ವಹಿಸಬೇಕು. ಆ ಭಾಗದ ಸರ್ಕಾರಿ ಕಡತಗಳಲ್ಲಿಯೂ ಕಡ್ಡಾಯವಾಗಿ ವಿಜಯನಗರ ಜಿಲ್ಲೆ ಅಂತ ನಮೂದು ಮಾಡಬೇಕು ಎಂದು ಸೂಚಿಸಿದರು.

ದೊಡ್ಡ ಕಾಂಪ್ಲೆಕ್ಸ್‌ಗಳನ್ನು ಗುರುತಿಸಿ: ಜಿಲ್ಲಾಮಟ್ಟದ ಕಚೇರಿಗಳನ್ನು ಆರಂಭಿಸಲು ಹೊಸಪೇಟೆಯಲ್ಲಿ ದೊಡ್ಡ ದೊಡ್ಡ ಕಾಂಪ್ಲೆಕ್ಸ್‌ಗಳನ್ನು ಗುರುತಿಸಿ ವರದಿ ನೀಡುವಂತೆ ವಿಶೇಷಾ ಧಿಕಾರಿ ಅನಿರುದ್ಧ ಶ್ರವಣ್‌

ಅವರು ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರಿಗೆ ಸೂಚಿಸಿದರು. ಜೊತೆಗೆ ತಮ್ಮ ತಮ್ಮ ಇಲಾಖೆಗಳ ಕಚೇರಿಯು ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಆರಂಭಿಸುವುದಕ್ಕೆ ಸಂಬಂಧಿ ಸಿದಂತೆ ಇನ್ನಿತರೆ ಮಾಹಿತಿಗಳು ಅಗತ್ಯವಿದ್ದಲ್ಲಿ ಅದರ ಮಾಹಿತಿಯನ್ನೂ ಸಹ ತಾವು ನೀಡಬಹುದಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್‌. ನಂದಿನಿ, ಎಸ್‌ಪಿ ಸೈದುಲು ಅಡಾವತ್‌, ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ, ಹೆಚ್ಚುವರಿ ಎಸ್‌ಪಿ ಬಿ.ಎನ್‌. ಲಾವಣ್ಯ, ಡಿಎಫ್‌ಒ ಸಿದ್ದರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.