ವಿಜಯೇಂದ್ರ ಸೂಪರ್ ಸಿಎಂ ಅಲ್ಲ, ಎಲ್ಲವೂ ಊಹಾಪೋಹ; ಸಚಿವ ವಿ.ಸೋಮಣ್ಣ
Team Udayavani, Feb 25, 2020, 2:34 PM IST
ಬಳ್ಳಾರಿ: ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೂಪರ್ ಸಿಎಂ ತರಹ ವರ್ತಿಸುತ್ತಿದ್ದಾರೆ ಎಂಬ ಆರೋಪಗಳಿಗೆ ನಕಾರ ವ್ಯಕ್ತಪಡಿಸಿದ ವಸತಿ ಸಚಿವ ವಿ.ಸೋಮಣ್ಣ, ಇವೆಲ್ಲಾ ಬರೀ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ನಗರದ ಮುಂಡರಗಿ ಪ್ರದೇಶದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು 42 ವರ್ಷ ರಾಜಕೀಯದಲ್ಲಿದ್ದು, ಏಳು ಸಿಎಂಗಳನ್ನು ನೋಡಿದ್ದೀನಿ. ಸಾಕಷ್ಟು ರಂಪ ಮಾಡಿದ್ದೀನಿ. ಸಿಎಂ ಬದಲಾಗುವುದು ನೋಡಿದ್ದೀನಿ. ಈ ಆಧಾರದಲ್ಲಿ ಹೇಳುತ್ತೇನೆ ಯಡಿಯೂರಪ್ಪನವರಿಗೆ 78 ವರ್ಷ ವಯಸ್ಸಾದರೂ ಸಹ ಅವರು ಸಾಕಷ್ಟು ಚುರುಕಾಗಿದ್ದಾರೆ. ಅವರ ಮೆದುಳು ಸಾಕಷ್ಟು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅವರ ಉತ್ಸಾಹ ಇಂದಿಗೂ ಕುಗ್ಗಿಲ್ಲ. ಹೀಗಿರುವಾಗ ಅವರು ತಮ್ಮ ಆಡಳಿತಕ್ಕೆ ಇನ್ನೊಬ್ಬರ ನೆರವು ಪಡೆಯುವುದು ಕೇವಲ ಊಹಾಪೋಹ ಎಂದ ಅವರು ಯಡಿಯೂರಪ್ಪ ಗುಡುಗಿದ್ರೆ ವಿಧಾನ ಸೌಧ ನಡುಗುತ್ತೆ ಎಂಬುದು ಇಂದಿಗೂ ಸಹ ನಿಜವೇ ಎಂದು ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಪ್ರಶ್ನಾತೀತ ನಾಯಕ. ಅವರಿರುವಾಗ ಯಾರೂ ಸೂಪರ್ ಸಿಎಂ ಇಲ್ಲ ಹಸ್ತಕ್ಷೇಪದ ಪ್ರಶ್ನೆಯೇ ಇಲ್ಲ. ಇನ್ನು ಉತ್ತರಾಧಿಕಾರಿ, ಪತ್ತರಾಧಿಕಾರಿಯೂ ಇಲ್ಲವೇ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲವನ್ನೂ ರಾಷ್ಟ್ರ ನಾಯಕರು ನಿರ್ಧಾರ ಮಾಡ್ತಾರೆ ಎಂದರು.
ಇನ್ನು ತಮ್ಮ ಖಾತೆ ಕುರಿತು ಮಾತನಾಡಿದ ಅವರು, ನನ್ನ ರಾಜಕೀಯ ಅನುಭವಕ್ಕೆ ಸಣ್ಣ ವಸತಿ ಇಲಾಖೆ ನೀಡಿದ್ದು ಬೇಸರವಿತ್ತು. ಆದರೆ ಜನರ ಕೆಲಸ ಮಾಡುವ ಇಲಾಖೆ ಸಾಕು. ನನಗೆ ಮುಖ್ಯಮಂತ್ರಿಯಾಗುವ ಯಾವುದೇ ಉದ್ದೇಶವಿಲ್ಲ. ಯಡಿಯೂರಪ್ಪ ಅವರೇ ಮುಂದಿನ ಮೂರೂವರೆ ವರುಷ ಸಿಎಂ ಆಗಲಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.