ಮತದಾನ ಮಾಡುವವರೇ ಮಹಾಪ್ರಭುಗಳು
Team Udayavani, Mar 31, 2018, 5:00 PM IST
ಹೊಸಪೇಟೆ: ಮತದಾನದ ಹಕ್ಕು ಹೊಂದಿರುವ ಮತದಾರರು ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸುವುದರಿಂದ ಉತ್ತಮ ಸರ್ಕಾರವನ್ನು ರಚಿಸಬಹುದಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಸೆಕ್ಟರ್ ಅಧಿಕಾರಿ ಕಿಶೋರ್ ಹೇಳಿದರು.
ನಗರದ ಕೊಂಡನಾಯಕನಹಳ್ಳಿಯಲ್ಲಿ ಶುಕ್ರವಾರ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ವ್ಯಾಪ್ತಿಯೊಳಗಿನ ಮತದಾನದ ಬೂತ್‌ಗಳಿಗೆ ತಪ್ಪದೇ ತೆರಳಿ ಮತದಾನ ಮಾಡಬೇಕು. ಚುನಾವಣೆಯಲ್ಲಿ ಮತ ಹಾಕುವುದು ಮತದಾರರ ಹಕ್ಕಾಗಿದೆ ಎಂದರು.
ತಮ್ಮ ಮತದಾನದ ಅಧಿಕಾರಿವನ್ನು ಚುನಾವಣೆಯಲ್ಲಿ ಬಳಸಿಕೊಳ್ಳಬೇಕು. ಮತದಾರರು ತಮ್ಮ ಅಧಿಕಾರವನ್ನು
ಬಳಸಿಕೊಳ್ಳುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಮತದಾನಕ್ಕೆ ತಾತ್ಸಾರ ತೋರದೆ ತಾವು ಹಾಗೂ ತಮ್ಮೊಂದಿಗೆ ಇರುವ ಮತದಾರರನ್ನು ಬೂತ್‌ಗಳಿಗೆ ಕರೆದೊಯ್ದು ಮತ ಚಲಾಯಿಸಲು ಮನವೊಲಿಸಬೇಕು. ಪ್ರತಿಯೊಬ್ಬರ ಮತದಾನವು ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಸಹಕಾರಿಯಾಗಲಿದೆ.
ಪ್ರತಿಯೊಬ್ಬರು ವಿವೇಚನೆಯಿಂದ ಹಾಕಿದ ಮತ, ದೇಶ, ಜನರಿಗೆ ಎಂದೆಂದಿಗೂ ಹಿತವಾಗಿರುತ್ತದೆ. ಮತದಾನದ ದಿನದಂದು ತಮ್ಮೆಲ್ಲಾ ಕೆಲಸಗಳನ್ನು ಬದಿಗಿಟ್ಟು ತಪ್ಪದೇ ಮತದಾನ ಮಾಡಿ. ಮತದಾನ ಮಾಡುವುದು ಕರ್ತವ್ಯವಾಗಿದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತರಿಪಡಿಸಿಕೊಂಡು, ಮತ ಹಾಕಲು ಹೋಗುವಾಗ ತಮ್ಮ ಮತದಾರರ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕು. ಜನರಲ್ಲಿ ಮತದಾನದದ ಬಗ್ಗೆ ಜಾಗೃತಿ ಮೂಡಿಸುವಂತ ಕಾರ್ಯಕ್ರಮವನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಂಡನಾಯಕನಹಳ್ಳಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ್ ನಗರ, ಸಿದ್ದಲಿಂಗಪ್ಪ ಚೌಕಿ, ಬಸ್‌ಡಿಪೋ ಮುಂಭಾಗದ ಪ್ರದೇಶದ ಜನಸಂದಣಿ ಇರುವಂತಹ ಪ್ರದೇಶದಲ್ಲಿ ಮತದಾರರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಮತದಾನದ ಜಾಗೃತಿಯ ಜೊತೆಗೆ ಚುನಾವಣಾ ಆಯೋಗದ ಘೋಷಣೆಗಳನ್ನು ಪ್ರಚಾರ ಮಾಡುವ ಮೂಲಕ ಮತ್ತು ಕಲಾವಿದ ಯಲ್ಲಪ್ಪ ಭಂಡಾರದಾರ್ ಅವರಿಂದ ಮತದಾರರ ಜಾಗೃತಿ ಹಾಡುಗಳ ಮೂಲಕ ಮತದಾರರಿಗೆ ಮತದಾನದ ಬಗ್ಗೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಾಯಿತು. ಭೂ ಸೇನೆ ಇಲಾಖೆಯ ಅಧಿಕಾರಿ ವೈಕುಂಠಪತಿ, ನಗರಸಭೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಸಿಬ್ಬಂದಿಗಳು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಅಣಕು ಪ್ರದರ್ಶನ
ನಗರದ ಪಾಂಡುರಂಗ ಕಾಲೋನಿಯಲ್ಲಿ ಅಣಕು ಮತದಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಮತದಾರರು ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತ ಚಲಾಯಿಸುವುದು ಹೇಗೆ, ಮತ ಚಲಾಯಿಸಿರುವುದು ಖಾತ್ರಿ ಪಡಿಸಿಕೊಳ್ಳುವುದನ್ನು ಮತದಾನ ಖಾತ್ರಿ ಯಂತ್ರದಲ್ಲಿ (ವಿವಿ ಪ್ಯಾಟ್) ನೋಡುವುದು ಹೇಗೆ ಎನ್ನುವುದನ್ನು ತಿಳಿಸಿಕೊಡಲಾಯಿತು.
ಪಾಂಡುರಂಗ ಕಾಲೋನಿಯ ಜನ ಕುತೂಹಲದಿಂದ ಆಲಿಸಿದರು. ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಮತದಾನದ ಮಹತ್ವ ಸಾರುವ ಬೀದಿ ನಾಟಕ ಪ್ರಸ್ತುತಪಡಿಸಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಸೆಕ್ಟರ್ ಅಧಿಕಾರಿ ಕಿಶೋರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಸ್. ಸಿ.ಬಂಕಾಪುರಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಯರ್ರಿಸ್ವಾಮಿ, ಭೂಸೇನೆ ಇಲಾಖೆಯ ಅಧಿಕಾರಿ ವೈಕುಂಠಪತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಕಾಂತ, ಬೂತ್‌ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.