ಆಹಾರಕ್ಕಾಗಿ ಅಲೆಮಾರಿ ಜನಾಂಗದ ಅಲೆದಾಟ
Team Udayavani, Mar 28, 2020, 2:16 PM IST
ಹರಪನಹಳ್ಳಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ದೇಶವೇ ಲಾಕ್‌ಡೌನ್ ಆಗಿರುವುದರಿಂದ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಶಿಂದೋಳ್ ಸಮುದಾಯದ ಸುಮಾರು 35 ಕುಟುಂಬಗಳು ಆಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.
ಕಳೆದ 30 ವರ್ಷಗಳಿಂದ ಹಲುವಾಗಲು ಗ್ರಾಮದ ಹೊರವಲಯದಲ್ಲಿ ಜೋಪಡಿ ಹಾಕಿಕೊಂಡು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿರುವ ಶಿಂದೋಳ್ ಸಮುದಾಯದವರು ಪ್ರತಿನಿತ್ಯದುರುಗಮ್ಮ, ಸುಂಕಲಮ್ಮ ಎಂಬ ದೇವರು ಹೊತ್ತು ಬರುವ ಪುಡಿಗಾಸಿನಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಕೋವಿಡ್ 19 ಅಟ್ಟಹಾಸ ಮೆರೆಯುತ್ತಿರುವುದರಿಂದ ಕಳೆದ ಒಂದು ವಾರದಿಂದ ಗ್ರಾಮದೊಳಗೆ ಇವರನ್ನು ಜನರು ಬಿಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಆಹಾರವಿಲ್ಲದೇ ಜೀವನ ನಡೆಸುವುದು ಕಷ್ಟವಾಗಿದೆ. ಜೋಪಡಿಗಳಿಂದ ಹೊರಬರುವಂತಿಲ್ಲ, ಗ್ರಾಮದಲ್ಲಿ ಕಾಲಿಡುವಂತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಹಾರ ಧಾನ್ಯ ಮತ್ತು ದಿನಬಳಕೆ ವಸ್ತುಗಳಿಲ್ಲದೇ ಹಸಿವಿನಿಂದ ನರಳುವಂತಾಗಿದೆ. ಚಿಕ್ಕ ಚಿಕ್ಕ ಮಕ್ಕಳು ಹಸಿವಿನಿಂದ ನರಳುವಂತಹ ಪರಿಸ್ಥಿತಿ ಎದುರಾಗಿದೆ.
ಹೀಗಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಅಂಗಲಾಚಿ ಬೇಡುತ್ತಿದ್ದಾರೆ. ಅಲೆಮಾರಿಗಳ ಕಷ್ಟ ಅರಿತು ಕೂಡಲೇ ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ದಿನಬಳಕೆ ವಸ್ತುಗಳು ಮತ್ತು ಆಹಾರ ಧಾನ್ಯ ವಿತರಿಸಬೇಕು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷ ವಿ. ಸಣ್ಣಅಜ್ಜಯ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅಲೆಮಾರಿಗಳು, ನಿರ್ಗತಿಕರು, ಭಿಕ್ಷುಕರು ಹಸಿವಿನಿಂದ ನರಳದಂತೆ ಅವರಿಗೆ ಆಹಾರ ಒದಗಿಸಲು ತಂಡ ರಚನೆ ಮಾಡಲಾಗಿದೆ. ತಂಡದಲ್ಲಿರುವಸಿಡಿಪಿಒ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇವೆ. ವರದಿ ಬಂದ ನಂತರ ಆಹಾರ ಸಾಮಗ್ರಿ ಪೂರೈಕೆ ಮಾಡಲಾಗುವುದು.-ಡಾ| ನಾಗವೇಣಿ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.