ಮೇಕೆದಾಟು ನಿಲುವಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ
Team Udayavani, Oct 3, 2021, 11:15 PM IST
ಬಳ್ಳಾರಿ: ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆಯುವ ತಮಿಳುನಾಡು ನಿಲುವು ಗೊತ್ತಿರುವ ವಿಚಾರ. ಮೇಕೆದಾಟು ಯೋಜನೆ ನಮ್ಮ ಕೈಯಲ್ಲಿದ್ದು ನಮ್ಮ ನಿಲುವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಭಾನುವಾರ ಎಸ್.ಕೆ. ಮೋದಿ ನ್ಯಾಷನಲ್ ಸ್ಕೂಲ್‌ನ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆಗೆ ತಮಿಳುನಾಡಿನವರು ರಾಜಕಾರಣವನ್ನು ಬೆರೆಸುತ್ತಾರೆ. ಆ ಯೋಜನೆ ಮಾಡುವುದು ತಮಿಳುನಾಡು ಕೈಯಲ್ಲಿಲ್ಲ. ನಮ್ಮ ಕೈಯಲ್ಲಿದೆ. ಆದ್ದರಿಂದ ಅದರ ಬಗ್ಗೆ ವೃಥಾ ಚರ್ಚೆ ಅನಗತ್ಯ ಎಂದರು.
ಸಾಮಾನ್ಯವಾಗಿ ಸಾರ್ವತ್ರಿಕ, ಉಪಚುನಾವಣೆಗಳನ್ನು ವಿಶ್ಲೇಷಣೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೆ ಕಾಂಗ್ರೆಸ್ ಗೆದ್ದಿತ್ತು. ಕಳೆದ ಸಲ ಬಿಜೆಪಿ ಜಯ ಗಳಿಸಿದೆ. ಹಾಗಾಗಿ ಬಿಜೆಪಿಯ ಹಾನಗಲ್, ಜೆಡಿಎಸ್‌ನ ಸಿಂದಗಿ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.
ಇದನ್ನೂ ಓದಿ:ಜಮ್ಮು – ಕಾಶ್ಮೀರ ಉರಿಯಲ್ಲಿ ಡ್ರಗ್ಸ್ ಸಾಗಾಟ?
ಹಲವು ಕಾರ್ಪೊರೇಟ್ ಸಂಸ್ಥೆಗಳು ಬಳ್ಳಾರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಎಕರೆ ಜಮೀನು ಪಡೆದು ಹತ್ತು ವರ್ಷಗಳಿಂದ ಉದ್ದೇಶ ಈಡೇರಿಸಿಲ್ಲ. ಕೈಗಾರಿಕೆ ಸ್ಥಾಪಿಸಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ. ಏನೇನು ಕಾರಣಗಳು ಇವೆ ಎಂಬುದನ್ನು ನೋಡಿ ಈ ಕುರಿತು ಮರು ಪರಿಶೀಲಿಸಲಾಗುವುದು. ತುಂಗಾಭದ್ರಾ ಜಲಾಶಯದ ನೀರು ವ್ಯರ್ಥವಾಗಿ ಸಮುದ್ರ ಸೇರದಂತೆ ಸಮಾನಂತರ ಜಲಾಶಯ ನಿರ್ಮಾಣ ಕಾರ್ಯ ಮಾಡಲಾಗುವುದು. ಬಳ್ಳಾರಿ ನಗರದ ನಿರಂತರ ಕುಡಿಯುವ ನೀರು ಯೋಜನೆಯ ದೋಷಗಳ ಬಗ್ಗೆ ತಿಳಿದುಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸಿಎಂ ಆಗುತ್ತೇನೆಂದು ನಿರೀಕ್ಷಿಸಿರಲಿಲ್ಲ
ಬಳ್ಳಾರಿ: ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ನಾನು ಸಿಎಂ ಆಗಿರುವುದು ದೈವಿಚ್ಛೆ, ನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ನಮ್ಮ ಹೈಕಮಾಂಡ್ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವೀರಶೈವ ವಿದ್ಯಾವರ್ಧಕ ಸಂಘದ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಪಕ್ಷ ಹಾಗೂ ಜನತೆ ನೀಡಿದ ಜವಾಬ್ದಾರಿ ದೊಡ್ಡದಿದೆ ಎಂಬ ಅರಿವು ನನಗಿದೆ. ನಾಯಕರು ನನ್ನ ಮೇಲೆ ಹಾಕಿರುವ ಶಾಲು-ಮಾಲೆ ನನಗೆ ಶ್ರೀರಕ್ಷೆ ಎಂದು ಭಾವಿಸಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿ ಸಿದಂತೆ ನನ್ನ ಮೇಲಿಟ್ಟುಕೊಂಡಿರುವ ನಿರೀಕ್ಷೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.