ವಿರೋಧ ಪಕ್ಷದ ನಾಯಕರು ಹೊಗಳುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವಿಲ್ಲ: ಸಿಸಿ ಪಾಟೀಲ್
Team Udayavani, Nov 2, 2019, 2:37 PM IST
ಬಳ್ಳಾರಿ: ರಾಜ್ಯ ಬಿಜೆಪಿಯಲ್ಲಿನ ಗೊಂದಲವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಜಿಲ್ಲೆಯ ಹೊಸಪೇಟೆ ತಾಲೂಕು ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಉದ್ಘಾಟಿಸಿ ಮಾತನಾಡಿದರು. ಉಪಚುನಾವಣೆ ನಡೆಯಲಿರುವ 17 ಕ್ಷೇತ್ರಗಳಲ್ಲಿ 10 ರಿಂದ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಸಂತ್ರಸ್ಥರಿಗೆ ಹೊಸ ಬದುಕು ಕಟ್ಟಿಕೊಡುತ್ತೇವೆ. ಸಂತ್ರಸ್ಥರಿಗೆ ಐದು ಲಕ್ಷ ರೂ. ಪರಿಹಾರ ಕೊಟ್ಟ ಏಕೈಕ ಸಿಎಂ ಯಡಿಯೂರಪ್ಪ ಆಗಿದ್ದಾರೆ. ಇದರಿಂದ ವಿರೋಧ ಪಕ್ಷದ ನಾಯಕರು ಹೊಗಳುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವಿಲ್ಲ ಎಂದರು.
ಅನರ್ಹ ಶಾಸಕರಿಗೆ ಹೆಚ್ಚುವರಿ ಅನುದಾನ ನೀಡಲಾಗಿದೆ. ಅವರ ಕ್ಷೇತ್ರಗಳು ಸಹ ರಾಜ್ಯದಲ್ಲೇ ಇವೆ. ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಕ್ಕೂ ಅನುದಾನ ನೀಡಲಾಗುತ್ತದೆ ಎಂದರು.
ಜ್ಯುಲಾಜಿಕಲ್ ಪಾರ್ಕ್ ಬಗ್ಗೆ ಮಾತಣಾಡಿದ ಅವರು ಕಲ್ಯಾಣ ಕರ್ನಾಟಕದ ಮೊದಲ ಸಫಾರಿ ಇದಾಗಿದೆ. ಹುಲಿ ಮತ್ತು ಸಿಂಹಕ್ಕೆ ಮುಕ್ತ ಸಂಚಾರ ವ್ಯವಸ್ಥೆ ಮಾಡಿದ್ದೇವೆ. ಯೂರೋಪ್ ರಾಷ್ಟ್ರದಿಂದ ಪ್ರಾಣಿ ವಿನಿಮಯ ಮಾಡುವ ಯೋಚನೆ ಇದೆ. ರಾಜ್ಯದಲ್ಲಿ ಖನಿಜನಿಧಿ ಬಳಕೆಗೆ ಒಂದಷ್ಟು ಸಮಸ್ಯೆ ಇದೆ. ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿ ಇದೆ. ಕೋರ್ಟಿನಲ್ಲಿ ವಕೀಲರು ವಾದ ಮಾಡಿದ್ದಾರೆ ಎಂದು ತಿಳಿಸಿದರು.
ಜೂಲಾಜಿಕಲ್ ಪಾರ್ಕ್ 141.49 ಹೆಕ್ಟೆರ್ ವಿಸ್ತೀರ್ಣ ಹೊಂದಿದೆ. ಇದರಲ್ಲಿ 11.8 ಹೆಕ್ಟೆರ್ ಮೃಗಾಲಯದ ವಿಸ್ತೀರ್ಣದಲ್ಲಿ ಮೃಗಾಲಯ ನಿರ್ಮಿಸಲಾಗಿದೆ. 10 ಆವರಣಗಳು ನಿರ್ಮಾಣ ಮಾಡಲಾಗಿದೆ. ನಾಲ್ಕು ಸಸ್ತನಿ ಪ್ರಾಣಿಗಳ ಆವರಣಗಳು, 5 ಮಾಂಸಹಾರಿ ಪ್ರಾಣಿಗಳ ಆವರಣಗಳು, 1 ಸರಿಸೃಪಗಳ ಆವರಣ, ಚಿರತೆ, ಕರಡಿ, ಪಟ್ಟೆ ಕತ್ತೆಕಿರುಬ, ಗುಳ್ಳೆ ನರಿ, ಬೂದುತೋಳ, ಮೊಸಳೆ, ಕೆಂಪುಮೂತಿ ಮಂಗ, ಕಪ್ಪುಹಂಸ ಇದೆ, 3.67 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.