ರಾಜಕೀಯದಿಂದ ಮಹಿಳಾ ಸಬಲೀಕರಣ


Team Udayavani, Mar 9, 2019, 9:07 AM IST

bell-1.jpg

ಹೊಸಪೇಟೆ: ರಾಜಕೀಯ ಪ್ರಾತಿನಿಧ್ಯದಿಂದ ಮಹಿಳೆಯರ ಸಬಲೀಕ ರಣ ಸಾಧ್ಯವಾಗಲಿದೆ ಎಂದು ಬೆಂಗಳೂರಿನ ಲೇಖಕಿ ಹಾಗೂ ಸಾಮಾಜಿಕ ಚಿಂತಕಿ ಡಾ| ಲೀಲಾ ಸಂಪಿಗೆ ಅಭಿಪ್ರಾಯ ಪಟ್ಟರು.

ಹಂಪಿ ಕನ್ನಡ ವಿಶ್ವವಿದ್ಯಾಲಯ ಮಹಿಳಾ ಅಧ್ಯಯನ ವಿಭಾಗದ ವತಿ ಯಿಂದ ಅಲ್ಲಂ ಸುಮಂಗಲಮ್ಮ ಮತ್ತು ಶ್ರೀಅಲ್ಲಂ ಕರಿಬಸಪ್ಪ ದತ್ತಿನಿಧಿಯ ಆಶ್ರಯದಲ್ಲಿ 110ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚಣೆಯ ಪ್ರಯುಕ್ತ ಶುಕ್ರ ವಾರ ಆಯೋಜಿಸಿದ್ದ ಲಿಂಗ ಸಮಾನತೆಯ ಪ್ರಸ್ತುತ ಸವಾಲುಗಳು ಎಂಬ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು. 

1000 ಪುರುಷರಿಗೆ 914 ಮಹಿಳೆಯರಿದ್ದು, ಲಿಂಗಾನುಪಾತದಲ್ಲಿ ಅಸಮಾನತೆ ಉಂಟಾಗಿದೆ. ಶೇ.78ರಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂದು ಶಿಕ್ಷಣವು ಹೂಡಿಕೆಯಾಗಿದ್ದು, ವ್ಯಕ್ತಿತ್ವವನ್ನು ರೂಪಿಸುತ್ತಿಲ್ಲ. ಉದ್ಯೋಗ, ಬಂಡವಾಳ, ಲಾಭ ಆಧಾರಿತ ಶಿಕ್ಷಣ ವ್ಯವಸ್ಥೆಯಲ್ಲಿದೆ. ಶೇ.80ರಷ್ಟು ಮಹಿಳೆಯರು ದಿನಕ್ಕೆ 20 ರೂ.ಗಾಗಿ ಬದುಕುತ್ತಿದ್ದಾರೆ. ಶೇ.78ರಷ್ಟು ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾಳೆ. ಆದರೆ ಆಸ್ತಿಯ ಮಾಲೀಕತ್ವ ಶೇ.86ರಷ್ಟು ಪುರುಷರಿಗಿದ್ದರೆ ಶೇ.14ರಷ್ಟು ಮಹಿಳೆಯರಿಗಿದೆ. ಉದ್ಯಮ ಕ್ಷೇತ್ರದಲ್ಲಿ ಕೇವಲ ಶೇ.5ರಷ್ಟು ಮಹಿಳೆಯರು ಇದ್ದಾರೆ ಎಂದು ಮಾಹಿತಿ ನೀಡಿದರು.

ಮಹಿಳೆಯ ಅಸಮಾನತೆಯ ಬೇರುಗಳು ಇರುವುದೇ ರಾಜಕೀಯ ಕ್ಷೇತ್ರದಲ್ಲಿ. ಶೇ.33ರಷ್ಟು ಮೀಸಲಾತಿ ನೆನಗುದ್ದಿಗೆ ಬಿದ್ದಿದೆ. 3 ಹಂತಗಳ ಪಂಚಾಯತ್‌ನಲ್ಲಿ ಶೇ.50ರಷ್ಟು ಮೀಸಲಾತಿ ಮಹಿಳೆಯರಿಗೆ ಇರುವುದು ವಿಶೇಷವಾಗಿದೆ. 144 ರಾಷ್ಟ್ರಗಳ ಸಮೀಕ್ಷೆಯಿಂದ ಶಿಕ್ಷಣ, ಉದ್ಯೋಗದಲ್ಲಿ ಅವಕಾಶ, ಆರೋಗ್ಯ, ತೀರ್ಮಾನ ತೆಗೆದುಕೊಳ್ಳುವ ಹಕ್ಕು, ವೇತನ ತಾರತಮ್ಯ ಇವುಗಳಲ್ಲಿ ಮಹಿಳೆ ಹಿಂದುಳಿದಿರುವ ರಾಷ್ಟ್ರಗಳಲ್ಲಿ ಭಾರತ 108ನೇ
ಸ್ಥಾನದಲ್ಲಿದೆ. ಇದು ಭಾರತಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಎಚ್ಚರಿಸಿದರು.

ಲಲಿತ ಕಲೆಗಳ ನಿಕಾಯದ ಡೀನ್‌ ಡಾ| ಡಿ.ಪಾಂಡುರಂಗಬಾಬು ಮಾತನಾಡಿದರು. ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ಶಿವಾನಂದ ಎಸ್‌. ವಿರಕ್ತಮಠ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿನಿ ಬಿ.ಎಂ. ಸುಮಲತಾ ನಿರೂಪಿಸಿದರು. ಎನ್‌. ತಾಯಶ್ರೀ ವಂದಿಸಿದರು. ಸಂಗೀತ ಮತ್ತು ನೃತ್ಯ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.
 
ಭಾರತದಲ್ಲಿ ಅತ್ಯಂತ ಹೆಚ್ಚು ಶೋಷಿತ ಮಹಿಳೆ ಎಂದರೆ ಲೈಂಗಿಕ ವೃತ್ತಿಯ ಮಹಿಳೆಯಾಗಿದ್ದಾಳೆ. ತೃತೀಯ ಲಿಂಗಿಗಳು, ಲೈಂಗಿಕ ಅಲ್ಪಸಂಖ್ಯಾತರು, ಮಹಿಳೆಯರ ಮಾರಾಟ, ಎಳೆವಯಸ್ಸಿನ ಹೆಣ್ಣುಮಕ್ಕಳ ಸಾಗಾಣಿಕೆ, ಜಾಗತಿಕ ಮಟ್ಟದ ಸಮಸ್ಯೆಯಾಗಿದೆ. ಕಾಡುವ ರೌಡಿಗಳು, ಬಾಡಿಗೆ ಗಂಡಂದಿರು, ಮಧ್ಯವರ್ತಿಗಳ ದೌರ್ಜನ್ಯ, ಬಡತನ, ಅಪೌಷ್ಟಿಕತೆ, ರಕ್ತಹೀನತೆ, ನಿರುದ್ಯೋಗ, ಮೌಡ್ಯತೆಗಳಿಂದ ಕೆಳವರ್ಗದ ಈ ಲೈಂಗಿಕ ವೃತ್ತಿಯ ಮಹಿಳೆಯರಿಗೆ ಮಾನಸಿಕ ಧೈರ್ಯ ನೀಡಿ ವೈಜ್ಞಾನಿಕ ಪುನರ್‌ವಸತಿ ಸೌಕರ್ಯ ಕಲ್ಪಿಸುವ ಅತ್ಯಂತ ದೊಡ್ಡ ಸವಾಲು ನಮ್ಮ ಮುಂದಿದೆ.
 ಡಾ| ಲೀಲಾ ಸಂಪಿಗೆ, ಲೇಖಕಿ ಹಾಗೂ ಸಾಮಾಜಿಕ ಚಿಂತಕಿ

ಟಾಪ್ ನ್ಯೂಸ್

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.