ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿ

ಶಾಲೆಯನ್ನು ಹೆಣ್ಣು ಮಗುವಿನ ಬಳಿ ಕರೆದೊಯ್ಯುವ ಜಾಥಾಕ್ಕೆ ಚಾಲನೆ

Team Udayavani, Mar 14, 2022, 1:54 PM IST

4

ಬಳ್ಳಾರಿ: ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ವ್ಯವಹಾರಗಳನ್ನೂ ಸಮಾನವಾಗಿ ನಿರ್ವಹಣೆ ಮಾಡಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಸತ್ಯ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಎಚ್‌.ಎಸ್‌. ಪುಷ್ಪಾಂಜಲಿ ದೇವಿ ಅಭಿಪ್ರಾಯಪಟ್ಟರು.

ನಗರದ ಗಾಂಧಿ ಭವನದಲ್ಲಿ ಫ್ಯಾಮಿಲಿ ಪ್ಲಾನಿಂಗ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಫರ್ಟ್‌ ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಷನ್‌, , ಶ್ರೀರಕ್ಷಾ ಫೌಂಢೇಷನ್‌, ಇನ್ನರ್‌ವೀಲ್‌ ಕ್ಲಬ್‌, ಬಳ್ಳಾರಿ ಮಿಕ್ಸಿಂಗ್‌ ಲೇಡಿಸ್‌ ಆಂಡ್‌ ರೌಂಡ್‌ ಟೇಬಲ್‌, ಜೀತೋ ಲೇಡೀಸ್‌ ವಿಂಗ್‌ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಇಂಫ್ಯಾಕ್ಟ್ ವಾಕೊಥಾನ್‌-ಶಾಲೆಯನ್ನು ಹೆಣ್ಣು ಮಗುವಿನ ಬಳಿಗೆ ಕರೆದೊಯ್ಯುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡಾ| ಮೋಹನ ಪವನ್‌ಕುಮಾರ್‌ ಮಾಲಪಾಟಿ ಮಾತನಾಡಿ, ಒಂದು ಹೆಣ್ಣು ಮಗುವಿನ ಸರ್ವಾಂಗೀಣ ಅಭಿವೃದ್ಧಿ ಆಗಬೇಕೆಂದರೆ ಅವಳ ಹದಿಹರೆಯ ವಯಸ್ಸಿನಲ್ಲಿಯೇ ಅವಳ ಆರೋಗ್ಯ ಮತ್ತು ಮಾನಸಿಕ ಸದೃಢತೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಅವಳ ಎಲ್ಲ ಜವಾಬ್ದಾರಿಯನ್ನು ಪೋಷಕರು ತೆಗೆದುಕೊಳ್ಳುವುದು ಅತ್ಯವಶ್ಯಕ. ಅದರ ಜೊತೆ ದೇಶದ ಎಲ್ಲ ಸಂಘಸಂಸ್ಥೆಗಳು ಕೈಜೋಡಿಸಬೇಕು ಎಂದು ಕೋರಿದರು.

ಮಕ್ಕಳ ತಜ್ಞ ಡಾ| ಬಿ.ಕೆ. ಶ್ರೀಕಾಂತ್‌ ಮಾತನಾಡಿ, ಆರೋಗ್ಯವಂತ ಕುಟುಂಬ ಎಂದರೆ ಅಲ್ಲಿಯ ಹೆಣ್ಣು ಮಗು ಮತ್ತು ಮಹಿಳೆಯರು ಶಿಕ್ಷಿತರಾಗಿರುವುದು. ಇದರಿಂದ ದೇಶವು ಸುಶಿಕ್ಷಿತವಾಗುತ್ತದೆ ಎಂದು ಹೇಳಿದರು.

ಫ್ಯಾಮಿಲಿ ಪ್ಲಾನಿಂಗ್‌ನ ಅಧ್ಯಕ್ಷ ಟಿ.ಜಿ. ವಿಠ್ಠಲ್ ಮಾತನಾಡಿ, ನಮ್ಮ ಸಂಸ್ಥೆಯು ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ, ಹಕ್ಕು ಮತ್ತು ಕೌಶಲ್ಯಾಭಿವೃದ್ಧಿಗೆ ರಾಷ್ಟ್ರಮಟ್ಟದ ವಾಕೋಥಾನ್‌ ಮೂಲಕ ದೇಣಿಗೆ ಸಂಗ್ರಹಿಸಿ, ಅನೇಕ ಕಾರ್ಯಕ್ರಮ ರೂಪಿಸುವ ಮೂಲಕ ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಪ್ರಯತ್ನಿಸುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅತ್ಯವಶ್ಯಕ ಎಂದರು. ‌

ಈ ಕಾರ್ಯಕ್ರಮದಲ್ಲಿ ಎಸ್‌. ವಿಜಯಸಿಂಹ, ಡಾಕ್ಟರ್‌ ಚಂದನ, ಸುಚರಿತ, ಭಾಗ್ಯ ಉಪಸ್ಥಿತರಿದ್ದರು. ವಾಕೊಥಾನ್‌ನಲ್ಲಿ ಇನ್ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಶಾಖಾ ವ್ಯವಸ್ಥಾಪಕಿ ಎಸ್‌. ವಿಜಯಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇನ್ನರ್‌ವೀಲ್‌ ಸಂಸ್ಥೆ ಅಧ್ಯಕ್ಷೆ ರೂಪಶ್ರೀ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.