ಫೆ.1ರಿಂದ ಕಾರ್ಮಿಕರ ಸಮ್ಮೇಳನ
Team Udayavani, Jan 28, 2020, 1:14 PM IST
ಬಳ್ಳಾರಿ: ಬೆಂಗಳೂರಿನಲ್ಲಿ ಫೆ. 1 ಮತ್ತು 2ರಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ರಾಜ್ಯಮಟ್ಟದ 3ನೇ ಕಾರ್ಮಿಕ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ವಿವಿಧಕ್ಷೇತ್ರಗಳ ಕಾರ್ಮಿಕರಿಗೆ ಸಂಬಂಧಿ ಸಿದ ಹಲವು ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಐಯುಟಿಯುಸಿ ರಾಜ್ಯ ಸಮಿತಿಯು ಸಂಘಟಿತ, ಅಸಂಘಟಿತ ವಲಯಗಳ ಕಾರ್ಮಿಕರ ಸಮಸ್ಯೆಗಳನ್ನು ಮತ್ತು ದುಡಿಯುವ ಜನರ ಜೀವನಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ 3ನೇ ರಾಜ್ಯಮಟ್ಟದ ಕಾರ್ಮಿಕರ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ ದುಡಿವ ಜನರ ಮೇಲೆ ಆಳುವ ವರ್ಗ, ಸರ್ಕಾರದ ಬಹುವಿಧದ ದಾಳಿ ಕುರಿತು, ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ, ಅವರ ಸೇವೆ ಕಾಯಂಗೊಳಿಸಲು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಆಶಾ, ಅಂಗನವಾಡಿ, ಬಿಸಿಯೂಟ ನೌಕರರಿಗೆ ಕಾರ್ಮಿಕ ಸ್ಥಾನಮಾನಕ್ಕಾಗಿ ಹೋರಾಟ ಬೆಳೆಸುವ ಬಗ್ಗೆ ಗ್ರಾಮೀಣ ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಅಂಗಡಿ-ಮನೆಗೆಲಸ ಇತ್ಯಾದಿ ಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಸಮ್ಮೇಳನದಲ್ಲಿ ಆಶಾ, ಅಂಗನವಾಡಿ, ಬಿಸಿಯೂಟ, ಸ್ಕೀಮ್ ಕಾರ್ಯಕರ್ತೆಯರಿಗೆ ಸರ್ಕಾರಿ ನೌಕರರ ಅಥವಾ ಕಾರ್ಮಿಕರ ಸ್ಥಾನಮಾನ ನೀಡಬೇಕು. ಗುತ್ತಿಗೆ ಕಾರ್ಮಿಕರು, ನೌಕರರನ್ನು ಕಾಯಂಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ 60 ವರ್ಷಗಳವರೆಗೆ ಸೇವಾ ಭದ್ರತೆ ಖಾತ್ರಿಪಡಿಸಬೇಕು. ಅದಕ್ಕಾಗಿ ವಿಶೇಷ ಕಾಯ್ದೆ ಜಾರಿಗೊಳಿಸಬೇಕು. ರಾಜ್ಯದ ಎಲ್ಲ ಸಣ್ಣ, ಮಧ್ಯಮ ಕೈಗಾರಿಕೆಗಳಪುನಶ್ಚೇತನಕ್ಕೆ ಕ್ರಮಕೈಗೊಳ್ಳಬೇಕು. ಎಲ್ಲ ಕಾರ್ಮಿಕರಿಗೆ ಕನಿಷ್ಠ ವೇತನ 21 ಸಾವಿರ ರೂ. ಗಳನ್ನು ನಿಗದಿಪಡಿಸಬೇಕು. ನಿವೃತ್ತ ಕಾರ್ಮಿಕರಿಗೆ 10 ಸಾವಿರ ರೂ. ಪಿಂಚಣಿ ಸೌಲಭ್ಯ ನಿಗದಿಪಡಿಸಬೇಕು. ಎಲ್ಲ ಜಿಲ್ಲೆಗಳಲ್ಲಿರುವ ಇಎಸ್‌ಐ ಡಿಸ್ಪೆನ್ಸರಿಗಳನ್ನು ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಸೇರಿದಂತೆ ಇನ್ನಿತರೆ ಹಕ್ಕುಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. ಇದೇ ವೇಳೆ ಕಾರ್ಮಿಕ ಸಮಾವೇಶ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಫೆ. 3ರಂದು ಅಖೀಲ ಭಾರತ ಕಾರ್ಮಿಕ ಸಮ್ಮೇಳನ ಜಾರ್ಖಂಡ್ ರಾಜ್ಯದ ಧನಬಾದ್ ನಗರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಆರ್. ಸೋಮಶೇಖರಗೌಡ, ಜಿಲ್ಲಾ ಕಾರ್ಯದರ್ಶಿ ಎ.ದೇವದಾಸ್, ಜಿಲ್ಲಾ ಉಪಾಧ್ಯಕ್ಷ ಪಿ.ಶರ್ಮಾಸ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.