ಯಡಿಯೂರಪ್ಪ-ಈಶ್ವರಪ್ಪ ರಾಜೀನಾಮೆ ನೀಡಲಿ
Team Udayavani, Apr 7, 2021, 7:36 PM IST
ಬಳ್ಳಾರಿ: ಸಿಎಂ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರ ನಡುವೆ ಸಾಮರಸ್ಯವಿಲ್ಲ. ರಾಜ್ಯಪಾಲರಿಗೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಶ್ವರಪ್ಪ ನೀಡಿರುವ ದೂರು ನಿಜವೇ ಆಗಿದ್ದರೆ ಸಿಎಂ ಯಡಿಯೂಪ್ಪ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಸಂವಿಧಾನದ ರೀತಿಯಲ್ಲಿ ನಡೆಯುತ್ತಿಲ್ಲ. ಸಚಿವ ಈಶ್ವರಪ್ಪ ಅವರ ಗಮನಕ್ಕೆ ಇಲ್ಲದೇ, ಅವರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ 1299 ಕೋಟಿ ರೂ. ಕಾನೂನು ಬಾಹಿರವಾಗಿ ದುರ್ಬಳಕೆಯಾಗುತ್ತಿದ್ದುದನ್ನು ತಡಹಿಡಿಯಲು ಕ್ರಮಕೈಗೊಂಡು ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ರಾಜ್ಯಪಾಲರು, ಕೇಂದ್ರದ ಗೃಹಸಚಿವ ಅಮಿತ್‌ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಕಾರ್ಯದರ್ಶಿ ಸಂತೋಷ್ ಅವರಿಗೆ ದೂರು ನೀಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಈಶ್ವರಪ್ಪರ ನಿಲುವು ಸ್ಪಷ್ಟವಾಗಿದ್ದಲ್ಲಿ ಸಿಎಂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ.
ಅದೇ ರೀತಿ ಸಿಎಂ ಯಡಿಯೂರಪ್ಪರ ನಿಲುವು ಸ್ಪಷ್ಪವಾಗಿದ್ದಲ್ಲಿ ಸಚಿವ ಈಶ್ವರಪ್ಪನವರು ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಇಬ್ಬರೂ ಕೂಡಲೇ ರಾಜೀನಾಮೆ ನೀಡಬೇಕು ಎಂದವರು ಒತ್ತಾಯಿಸಿದರು. ಬಿಜೆಪಿಗೆ ಪಕ್ಷಕ್ಕೆ ಸಂವಿಧಾನದ ಮೇಲೆ ಬದ್ಧತೆ ಇದ್ದಿದ್ದರೆ ಅಕ್ರಮ, ಭ್ರಷ್ಟಾಚಾರವೆಸಗಿದವರ ಮೇಲೆ ಕ್ರಮಕೈಗೊಂಡಿಲ್ಲವೇಕೆ? ಎಂದು ಪ್ರಶ್ನಿಸಿದ ಉಗ್ರಪ್ಪ, ಇವರದು ಕಮೀಷನ್ ರಾಜಕಾರಣನಾ, ಅಡ್ಜಸ್‌ಮೆಂಟ್ ರಾಜಕಾರಣನಾ ಅಥವಾ ಕಿಕ್ ಬ್ಯಾಕ್ ರಾಜಕಾರಣನಾ…? ವ್ಯಂಗ್ಯವಾಡಿದರು.
ಹಿಂದಿನ ಕಾಂಗ್ರೆಸ್ ಸರ್ಕಾರವನ್ನು ಕಮೀಷನ್ ಸರ್ಕಾರ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಸರ್ಕಾರ ಎಷ್ಟು ಪರ್ಸೆಂಟ್ ಕಮೀಷನ್ ಸರ್ಕಾರ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದವರು ಆಪಾದಿಸಿದರು. ಬಿಜೆಪಿಯವರು ಭ್ರಷ್ಟಾಚಾರವನ್ನು ಒಪ್ಪುವುದಾದರೆ ಸಿಎಂ ಯಡಿಯೂರಪ್ಪರನ್ನು ಮುಂದುವರೆಸಿ. ಅಥವಾ ಭ್ರಷ್ಟಾಚಾರ ವಿಷಯದಲ್ಲಿ ರಾಜೀಯಾಗಲ್ಲ ಎನ್ನುವುದಾದರೆ ಮುಖ್ಯಮಂತ್ರಿಗಳು ಯಾವ ಕಾರಣದಿಂದ ಮುಂದುವರೆಯುತ್ತೀರಿ ಎಂಬುದಕ್ಕೆ ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರೇ ಉತ್ತರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.