ಕೋವಿಡ್ ಆಸ್ಪತ್ರೆಯಲ್ಲೊಬ್ಬ ಯೋಗಗುರು
Team Udayavani, Jul 17, 2020, 10:41 AM IST
ಬಳ್ಳಾರಿ: ಕೋವಿಡ್ ಸೋಂಕಿತರಾಗಿ ಬಳ್ಳಾರಿಯ ವಿಮ್ಸ್ ಸರ್ಕಾರಿ ದಂತ ಮಹಾವಿದ್ಯಾಲಯದಲ್ಲಿ 8 ದಿನಗಳ ಹಿಂದೆ ದಾಖಲಾಗಿರುವ ಕಂಪ್ಲಿ ಪುರಸಭೆಯ ಸದಸ್ಯ ಚಾಂದಪಾಶಾ ಅವರು ಸೋಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳು ಹಾಗೂ ಸೂರ್ಯ ನಮಸ್ಕಾರಗಳನ್ನು ಕಲಿಸುವುದರ ಜತೆಗೆ ನೈತಿಕ ಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನಸೆಳೆಯುತ್ತಿದ್ದಾರೆ.
ತಾವು ಅಲ್ಪಸಂಖ್ಯಾತ ಸಮುದಾಯದವರಲ್ಲವೇ ಎಂದು ಸೋಂಕಿತ ವ್ಯಕ್ತಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಚಾಂದ್‌ಪಾಶಾ ಅವರು, ಮೊದಲು ನಾನು ಭಾರತೀಯ. ನನಗೆ ಯಾವುದೇ ಧರ್ಮವಿಲ್ಲ ಎಂದು ಹೇಳುವ ಮೂಲಕ ತನ್ನಲ್ಲಿನ ದೇಶಭಕ್ತಿಯನ್ನು ಹೊರಹಾಕಿದ್ದಾರೆ. ಕಳೆದ 8 ದಿನಗಳಿಂದಲೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಯೋಗ ಹಾಗೂ ಸೂರ್ಯನಮಸ್ಕಾರ ಕಲಿಸುವುದರ ಜತೆಗೆ ತನ್ನೊಂದಿಗೆ ಚಿಕಿತ್ಸೆಗೆ ದಾಖಲಾಗಿರುವವರಿಗೆ ಸ್ವತಃ ತನ್ನದೇ ಖರ್ಚಿನಲ್ಲಿ ಕಷಾಯಕ್ಕೆ ಸಂಬಂಧಿ ಸಿದ ಸಾಮಗ್ರಿಗಳನ್ನು ಖರೀದಿಸಿ ತನ್ನ ಕೈಯಾರೆ ಪ್ರತಿನಿತ್ಯ ಕಷಾಯ ಸಿದ್ಧಪಡಿಸಿ 50 ಜನರಿಗೆ ಕುಡಿಸುತ್ತಿದ್ದಾರೆ.
14 ವರ್ಷಗಳಿಂದಲೂ ಈ ರೀತಿಯ ಯೋಗಾಸನ ಮತ್ತು ಸೂರ್ಯನಮಸ್ಕಾರ ಹಾಗೂ ವಿವಿಧ ರೀತಿಯ ಸಂಸ್ಕೃತ ಶ್ಲೋಕಗಳನ್ನು ಪಠಿಸುತ್ತಿದ್ದೇನೆ. ಈ ಕೊರೊನಾವೇನು ದೊಡ್ಡ ರೋಗವಲ್ಲ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೇವೆ ಎಂದು ತಿಳಿಸುವ ಚಾಂದಪಾಶಾ ಇನ್ನೂ ಮೂರ್‍ನಾಲ್ಕು ದಿನಗಳಲ್ಲಿ ಕೊರೊನಾ ಮಾರಿಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸಾcರ್ಜ್ ಆಗಲಿದ್ದಾರೆ. ನಿಜಕ್ಕೂ ಈ ವ್ಯಕ್ತಿ ಅದ್ಭುತ ಸ್ಪೂರ್ತಿ ನಮಗೆಲ್ಲರಿಗೂ ಎಂದು ವಿಮ್ಸ್ ಸರ್ಕಾರಿ ದಂತ ಕಾಲೇಜಿನ ಕೋವಿಡ್ ನೋಡಲ್ ಅಧಿಕಾರಿ ಡಾ.ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸುತ್ತಾರೆ. ಚಾಂದಪಾಶಾ ಅವರು ವಿವಿಧ ಯೋಗಾಸನದ ಆಸನಗಳ ವಿಡಿಯೋ ಗಮನಿಸಿದ್ದೇನೆ. ಅವರು ಹೇಳುವ ಸ್ಫೂರ್ತಿಯುತ ಮಾತುಗಳನ್ನ ಆಲಿಸಿದೆ ತುಂಬಾ ಸಂತೋಷವಾಯ್ತು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ಅವರು ಸಹ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.