ಯುವಕರು ದುಶ್ಚಟಗಳಿಗೆ ದಾಸರಾಗಬೇಡಿ
Team Udayavani, Jun 27, 2018, 11:24 AM IST
ಬಳ್ಳಾರಿ: ಯುವಕರು ಮಾದಕ ವಸ್ತುಗಳಿಂದ ದೂರವಿರಬೇಕು. ಪಾಲಕ -ಪೋಷಕರು ಸಹ ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿ ಮತ್ತು ಮಕ್ಕಳು ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ದಾಸರಾಗದಂತೆ ನೋಡಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಬಿ.ಹಂದ್ರಾಳ್ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ದುರ್ಬಳಕೆ ಹಾಗೂ ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮದ್ಯಪಾನ, ತಂಬಾಕು, ಗಾಂಜಾ ಇತ್ಯಾದಿಗಳು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವಂತಹ ವ್ಯಸನದ ವಸ್ತುಗಳು. ಆದರೆ ಇತ್ತೀಚಿನ ದಿನಗಳಲ್ಲಿ ದ್ರಾವಕ ವ್ಯಸನ ವೈಟನರ್, ಪೆಟ್ರೋಲ್, ಉಗುರಿಗೆ ಹಚ್ಚುವ ಬಣ್ಣವನ್ನು ತೆಗೆಯಲು ಬಳಸುವ ದ್ರವ ಇನ್ನೂ ಮುಂತಾದ ದ್ರಾವಕಗಳನ್ನು ಮಕ್ಕಳು ಹಾಗೂ ಹದಿಹರೆಯದವರು ವ್ಯಸನಕ್ಕಾಗಿ ಬಳಸುತ್ತಿದ್ದಾರೆ.
ಈ ದುಶ್ಚಟ ವಸ್ತುಗಳಿಂದ ಅವರ ದೈಹಿಕ, ಮಾನಸಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಜೀವನ ಕಳೆದುಕೊಳ್ಳುತ್ತಿದ್ದಾರೆ. ಪಾಲಕರು ತಮ್ಮ ಮಕ್ಕಳ ದಿನನಿತ್ಯದ ಚಟುವಟಿಕೆ, ಆಟ-ಪಾಠಗಳ ಮೇಲೆ ಸೂಕ್ಷ್ಮ ನಿಗಾವಹಿಸಬೇಕು. ಅವರ ವರ್ತನೆಯಲ್ಲಿ ಏನಾದರೂ ಬದಲಾವಣೆ ಕಂಡು ಬಂದಲ್ಲಿ, ಕೂಡಲೇ ಅವರೊಂದಿಗೆ ವಿಶ್ವಾಸದಿಂದ ಮಾತನಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಮಾತನಾಡಿ, ದುಶ್ಚಟಗಳಿಗೆ ಯುವಕರು ದಾಸರಾಗದೆ ತಾವಿಟ್ಟುಕೊಂಡಿರುವ ಗುರಿ ತಲುಪುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಡಿಎಚ್‌ಒ ಡಾ| ಜಿ.ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಎನ್.ಬಸರೆಡ್ಡಿ, ಜಿಲ್ಲಾ ಮಾನಸಿಕ ಆರೋಗ್ಯ ಹಾಗೂ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ|ರಾಜಶೇಖರರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ| ಎಂ.ಎಚ್. ರವೀಂದ್ರನಾಥ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ|ನಿಜಾಮುದ್ದೀನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ವಿಜಯಲಕ್ಷ್ಮೀ , ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ| ಅನಿಲ್ ಕುಮಾರ್, ಮಾನಸಿಕ ತಜ್ಞ ಡಾ| ಸಲೀಮ್, ಡಾ| ಸಂತೋಷ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್‌ದಾಸಪ್ಪನವರ ಹಾಗೂ ಇತರೆ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.
ನಂತರ ಜಾಥಾವು ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭವಾಗಿ, ಡಾ|ರಾಜ್ ಕುಮಾರ್ ರಸ್ತೆ ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು. ಜಾಥಾದಲ್ಲಿ ನಗರ ಆರೋಗ್ಯ ಕೇಂದ್ರಗಳ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ಮುನ್ಸಿಪಲ್ ಕಾಲೇಜಿನ ಎನ್ ಎಸ್‌ಎಸ್ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.