100ಕ್ಕೂ ಹೆಚ್ಚು ಆಟೋ ವಶಕ್ಕೆ

ಚಾಲಕರಿಗೆ ದಂಡ •ಇಂದು ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ

Team Udayavani, Jul 4, 2019, 11:08 AM IST

04-July-13

ಬಳ್ಳಾರಿ: ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹೊತ್ತು ನಿಯಮ ಉಲ್ಲಂಘಿಸಿದ ಆಟೋಗಳನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿರುವುದು

ಬಳ್ಳಾರಿ: ಅಗತ್ಯಕ್ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿರುವ ಆಟೋಗಳನ್ನು ಹೈಕೋರ್ಟ್‌ ಆದೇಶದ ಮೇರೆಗೆ ವಶಕ್ಕೆ ಪಡೆದು ಸೀಜ್‌ ಮಾಡಿರುವ ಪೊಲೀಸರು ಚಾಲಕರ ವಿರುದ್ಧ ಬುಧವಾರ ಪ್ರಕರಣ ದಾಖಲಿಸಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ಯಾಚರಣೆಗಿಳಿದ ವಿವಿಧ ಠಾಣೆಗಳ ಪೊಲೀಸರು ಸುಮಾರು 100 ಆಟೋಗಳನ್ನು ಸೀಜ್‌ ಮಾಡಿದ್ದಾರೆ. ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ.

ಹೈಕೋರ್ಟ್‌ ಆದೇಶ: ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುವ ಆಟೋಗಳು ಈ ಮೊದಲು ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹತ್ತಿಕೊಂಡು ಸಂಚರಿಸಿ, ಸಂಚಾರಿ ನಿಯಮವನ್ನು ಉಲ್ಲಂಘಿಸುತ್ತಿದ್ದವು. ಇದರಿಂದ ಅಪಘಾತಗಳೂ ನಡೆಯುವ ಸಂಭವವಿತ್ತು. ಪೊಲೀಸರು ಸಹ ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಸಂಚರಿಸುತ್ತಿದ್ದ ಆಟೋಗಳನ್ನು ಹಿಡಿದು ದಂಡ ವಿಧಿಸಿ ಕಳುಹಿಸುತ್ತಿದ್ದರು. ವಿಧಿಸುವ ದಂಡ ಹೆಚ್ಚಿನ ಪ್ರಮಾಣದ್ದಾಗಿರದ ಕಾರಣ ಆಟೋ ಚಾಲಕರ ಈ ತಪ್ಪುಗಳು ಪದೇ ಪದೇ ಮರುಕಳಿಸುತ್ತಿದ್ದವು.

ಆದರೆ, ಇತ್ತೀಚೆಗೆ ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಿಸಬಾರದು. ಆಟೋಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಸಾಗಿಸಬಾರದು ಎಂದು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಣಮಿಸಿದೆ. ಹೈಕೋರ್ಟ್‌ ಆದೇಶದಂತೆ ಪ್ರತಿ ಆಟೋಗಳು ಕೇವಲ 5 ವಿದ್ಯಾರ್ಥಿಗಳನ್ನಷ್ಟೇ ಸಾಗಿಸಬೇಕು. ಕೋರ್ಟ್‌ ಆದೇಶವನ್ನು ಧಿಕ್ಕರಿಸಿ, ನಿಯಮ ಉಲ್ಲಂಘಿಸುತ್ತಿರುವ ಆಟೋಗಳನ್ನು ಸೀಜ್‌ ಮಾಡಲಾಗುತ್ತಿದೆ. ಅಲ್ಲದೇ, ಆಟೋಗಳನ್ನು ಸೀಜ್‌ ಮಾಡುವುದಕ್ಕೆ ಮೂರು ತಿಂಗಳ ಮುಂಚಿನಿಂದಲೇ ಇಲಾಖೆಯಿಂದ ಹಲವೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಟೋ ಚಾಲಕರಿಗೆ ಜಾಗೃತಿ ಮೂಡಿಸಲಾಗಿದೆ. ಆದರೂ, ನಿಯಮಗಳನ್ನು ಉಲ್ಲಂಘಿಸಿದ ಆಟೋಗಳನ್ನು ಕಳೆದ ಜುಲೈ 1ರಿಂದ ಸೀಜ್‌ ಮಾಡಲಾಗುತ್ತಿದ್ದು, ಚಾಲಕರಿಗೆ ದಂಡ ವಿಧಿಸುವುದರ ಜತೆಗೆ ಪ್ರಕರಣವನ್ನು ದಾಖಲಿಸಿ, ಪರವಾನಗಿಯನ್ನೂ ರದ್ದುಗೊಳಿಸಲು ಶಿಫಾರಸ್ಸು ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿನಿಂದ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ: ಆಟೋಗಳಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುವುದರಲ್ಲಿ ಒಂದಷ್ಟು ಸಡಿಲಿಕೆ ನೀಡಬೇಕು ಎಂದು ಒತ್ತಾಯಿಸಿ ಆಟೋ ಚಾಲಕರ ಸಂಘದಿಂದ ಜು. 4ರಿಂದ ಎರಡು ದಿನಗಳ ಕಾಲ ಆಟೋ ಸಂಚಾರ ಸ್ಥಗಿತಗೊಳಿಸಿ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಆಟೋಗಳಲ್ಲಿ ಕೇವಲ ಐದು ವಿದ್ಯಾರ್ಥಿಗಳನ್ನು ಸಾಗಿಸಿದರೆ ಚಾಲಕರಿಗೆ ನಷ್ಟವಾಗಲಿದೆ. ಹಾಗಾಗಿ 8 ವಿದ್ಯಾರ್ಥಿಗಳನ್ನು ಹತ್ತಿಕೊಳ್ಳಲು ಅವಕಾಶ ಕಲ್ಪಿಸಬೇಕು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎರಡು ದಿನಗಳ ಕಾಲ ವಿದ್ಯಾರ್ಥಿಗಳನ್ನು ಶಾಲಾ-ಕಾಲೇಜುಗಳಿಗೆ ಕರೆದೊಯ್ಯುವುದನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ರಾಜೇಶ್‌ ಹುಂಡೇಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.