ಸಕಾಲ ವಿಳಂಬ ಮಾಡಿದ್ರೆ ನೋಟಿಸ್
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಎಚ್ಚರಿಕೆ
Team Udayavani, Sep 7, 2019, 4:58 PM IST
ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಕಾಲ ತಂತ್ರಾಂಶದ ತರಬೇತಿ ಕಾರ್ಯಾಗಾರದಲ್ಲಿ ಡಿಯುಡಿಸಿ ನಿರ್ದೇಶಕ ರಮೇಶ್ ಮಾತನಾಡಿದರು
ಬಳ್ಳಾರಿ: ಸಕಾಲ ಅಧಿನಿಯಮದಡಿ ಸೇವೆಗಳನ್ನು ವಿಳಂಬ ಮಾಡಿ ವಿಲೇವಾರಿ ಮಾಡುವ ಅಧಿಕಾರಿಗಳಿಗೆ ಸಕಾಲ ತಂತ್ರಾಂಶದ ಮುಖಾಂತರ ಆನ್‌ಲೈನ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯಡಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸೇವೆ ವಿಳಂಬ ವಿಲೇವಾರಿ ಮಾಡಿದ್ದಕ್ಕೆ ನೀಡಲಾದ ಕಾರಣ ಕೇಳಿ ನೋಟಿಸ್ ಜಾರಿಯಾದ ಅಧಿಕಾರಿಯೂ ಕೂಡ ಆನ್‌ಲೈನ್ ಮುಖಾಂತರ ಸಕ್ಷಮ ಪ್ರಾಧಿಕಾರಕ್ಕೆ ಉತ್ತರ ಸಲ್ಲಿಸಬೇಕು ಎಂದ ಅವರು, ಈ ತರಬೇತಿಯಲ್ಲಿ ನೀಡಲಾಗುವ ಪ್ರಾತ್ಯಕ್ಷಿಕೆಯನ್ನು ಗಮನದಲ್ಲಿಟ್ಟುಕೊಂಡು ಆಲಿಸಿ ಅದರಂತೆ ಕ್ರಮವಹಿಸಬೇಕು. ಸಕಾಲದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕು. ನಿಗದಿಪಡಿಸಿದ ಅವಧಿಯೊಳಗೆ ಸೇವೆ ಒದಗಿಸದಿದ್ದಲ್ಲಿ ಯಾವ ರೀತಿ ಸಮಸ್ಯೆಯಾಗುತ್ತದೆ. ಅದನ್ನು ಅಧಿಕಾರಿಯ ಎಚ್ಆರ್‌ಎಂಎಸ್‌ನೊಂದಿಗೆ ಅಟ್ಯಾಚ್ ಮಾಡಲಾಗುತ್ತಿದ್ದು, ಬಡ್ತಿ ಸಂದರ್ಭದಲ್ಲಿಯೂ ಸಮಸ್ಯೆ ಉಂಟಾಗುತ್ತದೆ ಎಂದು ವಿವರಿಸಿದರು.
ಇಡಿ ದೇಶದಲ್ಲಿಯೇ ಅತ್ಯಂತ ಮಾದರಿಯಾಗಿರುವ ಈ ಸಕಾಲ ಸೇವೆಯನ್ನು ಬಾಂಗ್ಲಾದೇಶ ಕೂಡ ಅಳವಡಿಸಿಕೊಂಡಿದೆ. ಆರಂಭದಲ್ಲಿ 278 ಸೇವೆಗಳಿದ್ದವು. ಈಗ 1091 ಸೇವೆಗಳು ಈ ಸಕಾಲದಡಿ ಲಭ್ಯವಿವೆ. ಈ ಮುಂಚೆ ಮ್ಯಾನ್ಯುವಲ್ ಆಗಿದ್ದ ಸೇವೆಗಳು ಈಗ ಆನ್‌ಲೈನ್ (ಸೇವಾಸಿಂಧು) ಮೂಲಕ ಲಭ್ಯವಿವೆ ಎಂದರು.
ಸಕಾಲ ನಾಮಫಲಕ ಅಳವಡಿಸಿ
ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ತಮ್ಮ ಇಲಾಖೆಯು ಸಕಾಲ ಸೇವೆ ಅಡಿ ಒದಗಿಸುತ್ತಿರುವ ಸೇವೆಗಳನ್ನು ನಾಮಫಲಕದಲ್ಲಿ ಬರೆದು ಮತ್ತು ಅದರೊಂದಿಗೆ ಸಹಾಯವಾಣಿ ಸಂಖ್ಯೆ ಕೆಳಗಡೆ ನಮೂದಿಸಿ ಕಡ್ಡಾಯವಾಗಿ ಅಳವಡಿಸುವ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಕಚೇರಿ ತಹಶೀಲ್ದಾರ್ ವಿಶ್ವಜೀತ್ ಮೆಹತಾ ಅವರು ಸೂಚನೆ ನೀಡಿದರು.
ನಾಮಫಲಕದಲ್ಲಿ ಸಕಾಲ ಸೇವೆಗೆ ಸಂಬಂಧಿಸಿದಂತೆ ಲೋಗೋ ಮಾದರಿ ನೀಡಲಾಗಿದ್ದು, ಅದನ್ನು ಬಳಸಿಕೊಂಡು ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು. ಸಕಾಲದಲ್ಲಿ ಬಂದ ಅರ್ಜಿಗಳನ್ನು ಪಡೆದು ಕಡ್ಡಾಯವಾಗಿ ಸ್ವೀಕೃತಿ ನೀಡಿ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಸೇವೆ ಒದಗಿಸಿದ ಕಾರಣ 91 ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಪ್ರಶಂಸಾ ಪತ್ರ ನೀಡಿದ್ದಾರೆ ಎಂದರು.
ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕ ಸೈಯದ್ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.