ವಿಕಲಚೇತನರು ಗುರಿ ಸಾಧಿಸಿ ಮಾದರಿಯಾಗಿ
ಸರ್ಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಿ ವಿಶ್ವ ವಿಕಲಚೇತನರ ದಿನಾಚರಣೆ
Team Udayavani, Dec 4, 2019, 4:09 PM IST
ಬಳ್ಳಾರಿ: ವಿಕಲಚೇತನರು ಯಾವುದೇ ರೀತಿಯಲ್ಲಿ ನೊಂದುಕೊಳ್ಳದೇ ತಾವು ಅತ್ಯಂತ ಆತ್ಮಸ್ಥೈರ್ಯದಿಂದ ತಾವಂದುಕೊಂಡ ಗುರಿಯನ್ನು ಸಾಧಿ ಸಬೇಕು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ವಿಕಲಚೇತನರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಹೇಳಿದರು.
ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂಗವಿಕಲರು ತಾವು ಅಂದುಕೊಂಡಿರುವ ಗುರಿಯನ್ನು ಛಲದಿಂದ ಸಾಧಿಸಬೇಕು. ನಿಮ್ಮ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ ಅವರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಿ.ಎಸ್. ಮಂಜುನಾಥ್ ಮಾತನಾಡಿ, ವಿಕಲಚೇತನರಿಗೆ ಅನುಕಂಪದ ಅವಶ್ಯಕತೆ ಇಲ್ಲ. ಅವರಿಗೆ ಸೂಕ್ತ ಅವಕಾಶ, ವೇದಿಕೆ ನಿರ್ಮಾಣ ಮಾಡಬೇಕು. ಡಿಎಂಎಫ್ ಯೋಜನೆಯಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ, ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಲು ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ. ಸ್ಮಾರ್ಟ್ ಕ್ಲಾಸ್ ಎಂಬ ಯೋಜನೆಯು ಸಹ ಕಲ್ಪಿಸಲಾಗಿದೆ.
ಡಿಎಂಎಫ್ ಯೋಜನೆಯಡಿ ವಿಕಲಚೇತನರಿಗೆ ಸಲಕರಣೆಗಳನ್ನು ನೀಡಲಾಗುತ್ತದೆ ಎಂದ ಅವರು, ದೃಷ್ಟಿದೋಶವಿರುವ ಕೆಂಪಯ್ಯ ಎಂಬುವವರು ಇಂದು ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಉದಾಹರಣೆ ಸಮೇತ ವಿವರಿಸಿದರು.
ಅಂಗವಿಕಲರಲ್ಲಿ ಆತ್ಮಸ್ಥೈರ್ಯದಿಂದ ತಮ್ಮ ಗುರಿಯನ್ನು ತಲುಪಬೇಕು. ಜಿಲ್ಲೆಯಲ್ಲಿನ ಅಂಗವಿಕಲತೆ ಹೊಂದಿರುವ ವಿಕಲಚೇತನರು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಗುರುತಿಸಿಕೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್. ಮಲ್ಲೂರ್ ಮಾತನಾಡಿ, ಸರ್ಕಾರವು ವಿಕಲಚೇತನರಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಣ್ಯರಿಂದ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿ ಕಾರಿ ಕೆ. ಮಹಾಂತೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಉಷಾ. ಎಸ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎಚ್.ಎಂ. ಅಂಕಲಯ್ಯ ಸೇರಿದಂತೆ ಗೋಪಾಲಕೃಷ್ಣ, ಉಮಾಪತಿ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.