ಎಸೆಸೆಲ್ಸಿ: ಬೆಳ್ತಂಗಡಿಗೆ ಶೇ. 91.64
ಜಿಲ್ಲೆಗೆ ಪ್ರಥಮ | 3,180 ವಿದ್ಯಾರ್ಥಿಗಳು ಉತ್ತೀರ್ಣ
Team Udayavani, May 1, 2019, 11:18 AM IST
ಬೆಳ್ತಂಗಡಿ: ಈ ಬಾರಿಯ ಎಸೆಸೆಲ್ಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಬೆಳ್ತಂಗಡಿ ತಾಲೂಕು ಶೇ. 91.64 ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. (ಖಾಸಗಿಯಾಗಿ ಪರೀಕ್ಷೆ ಬರೆದವರನ್ನು ಸೇರಿಸಿದರೆ ಜಿಲ್ಲೆಗೆ ದ್ವಿತೀಯ). ಪರೀಕ್ಷೆಗೆ ಹಾಜರಾದ ಒಟ್ಟು 3,470 ವಿದ್ಯಾರ್ಥಿ ಗಳಲ್ಲಿ 3,180 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 88.81 ಫಲಿತಾಂಶ ದಾಖಲಾಗಿತ್ತು.
ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜ್ಯೋತಿಕಾ ಎನ್. ಅವರು 622 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿಕ್ರಂ ಶೆಟ್ಟಿ ಹಾಗೂ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ನೀತು ಮೆರಿನ್ ಅವರು 621 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಕಳೆದ 7 ವರ್ಷಗಳಿಂದ ಸತತ ಶೇ. 100 ಫಲಿತಾಂಶ ಪಡೆಯುತ್ತಾ ಬಂದಿದ್ದ ಗುರುವಾಯನಕೆರೆ ಪ್ರೌಢಶಾಲೆಯು ಈ ಬಾರಿಯೂ ಶೇ. 100 ಫಲಿತಾಂಶ ಪಡೆದ ದಾಖಲೆ ನಿರ್ಮಿಸಿದೆ. ತಾಲೂಕಿನಲ್ಲಿ ಒಟ್ಟು 5 ಸರಕಾರಿ ಪ್ರೌಢಶಾಲೆಗಳು ಹಾಗೂ 16 ಖಾಸಗಿ ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿದೆ.
ಶೇ. 100 ದಾಖಲಿಸಿದ ಖಾಸಗಿ ಶಾಲೆಗಳು
ತಾಲೂಕಿನ ಖಾಸಗಿ ಶಾಲೆಗಳಾದ ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ವೇಣೂರು ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆ, ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಲಾೖಲ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ನೆರಿಯಾ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆ, ಕೊಕ್ಕಡ ಸಂತ ಫ್ರಾನ್ಸೀಸ್ ಆಂಗ್ಲಮಾಧ್ಯಮ ಶಾಲೆ, ಕಾಜೂರು ರಹ್ಮಾನಿಯಾ ಪ್ರೌಢಶಾಲೆ, ಕಕ್ಕಿಂಜೆ ಕಾರುಣ್ಯ ಆಂಗ್ಲ ಮಾಧ್ಯಮ ಶಾಲೆ, ಅಳದಂಗಡಿ ಪಿಲ್ಯ ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆ, ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆ, ತೋಟತ್ತಾಡಿ ಸಂತ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ, ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆ, ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿವೆ.
ಶೇ. 100 ದಾಖಲಿಸಿದ ಸರಕಾರಿ ಶಾಲೆಗಳು
ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸತತ ಒಂಬತ್ತನೇ ಬಾರಿಗೆ ಶೇ. 100 ಫಲಿತಾಂಶ ಪಡೆದುಕೊಂಡಿದೆ. ಗುರುವಾಯನಕೆರೆ ಸರಕಾರಿ ಪ್ರೌಢಶಾಲೆ ಸಹಿತ ಸರಕಾರಿ ಪ್ರೌಢಶಾಲೆ ನೇಲ್ಯಡ್ಕ, ಸರಕಾರಿ ಪ್ರೌಢಶಾಲೆ ಮಿತ್ತಬಾಗಿಲು, ಸರಳಿಕಟ್ಟೆ ಸರಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶವನ್ನು ದಾಖಲಿಸಿದೆ.
ಸಂಘಟಿತ ಪ್ರಯತ್ನ
ಹಿಂದಿನ ವರ್ಷಗಳಿಗೆ ಹೋಲಿಸಿದರೆ ತಾ|ನಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆದಿದ್ದೇವೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹೀಗೆ ಎಲ್ಲರ ಸಂಘಟಿತ ಪ್ರಯತ್ನದಿಂದ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ಸಾಮಾನ್ಯ ವಿದ್ಯಾರ್ಥಿಗಳ ಜತೆ ಖಾಸಗಿ ಪರೀಕ್ಷೆ ಬರೆದವರನ್ನೂ ಸೇರಿಸಿದರೆ ತಾ| ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆಯುತ್ತದೆ. ಖಾಸಗಿ ಶಾಲೆಗಳ ಜತೆಗೆ ಸರಕಾರಿ ಶಾಲೆಗಳೂ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದು, ಹೆಚ್ಚಿನ ಶಾಲೆಗಳು ಶೇ. 100 ಫಲಿತಾಂಶ ಪಡೆದಿವೆ.
– ಸತೀಶ್,
ಕ್ಷೇತ್ರ ಶಿಕ್ಷಣಾಧಿಕಾರಿ, ಬೆಳ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.