ರಾಜ್ಯದಿಂದ ಕಾಫಿ ಬೆಳೆಗಾರರಿಗೆ ತಾರತಮ್ಯ

ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಆರೋಪ

Team Udayavani, Jun 13, 2019, 4:24 PM IST

Udayavani Kannada Newspaper

ಬೇಲೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ನಡೆದ ಕಾಫಿ ಬೆಳೆಗಾರರ ಸಮಾವೇಶ ದಲ್ಲಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿದರು.

ಬೇಲೂರು: ಕೇಂದ್ರ ಸರ್ಕಾರ ಪ್ರಕೃತಿ ವಿಕೋಪದಡಿ ಕೊಡಗು ಜಿಲ್ಲೆಗೆ 157 ಕೋಟಿ ಅನುದಾನ ಬಿಡುಗಡೆ ಗೊಳಿಸಿದ್ದು, ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಫಿ ಬೆಳಗಾರರಿಗೆ ಪರಿಹಾರ ನೀಡದೇ ತಾರತಮ್ಯ ಎಸಗಿದ್ದಾರೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಆರೋಪಿಸಿದರು.

ಬೇಲೂರು ಪಟ್ಟಣದ ಸಮೀಪದ ಪ್ಲಾಂಟರ್ ಕ್ಲಬ್‌ನಲ್ಲಿ ಕರ್ನಾಟಕರರ ಒಕ್ಕೂಟದ ವತಿಯಿಂದ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತ ನಾಡಿದ ಅವರು, ಕಾಫಿ ನಾಡು ಎಂದೇ ಖ್ಯಾತಿ ಪಡೆದ ಕೊಡಗು ಅತಿವೃಷ್ಟಿಯಿಂದ ನಲುಗಿದೆ. ಆದರೆ ರಾಜ್ಯ ಸರ್ಕಾರ ಕೇಂದ್ರದಿಂದ ಬಂದ 157 ಕೋಟಿ ಅನು ದಾನದಲ್ಲಿ 100 ಕೋಟಿ ರೂ. ವೆಚ್ಚ ಮಾಡಿ ಇನ್ನು 57 ಕೋಟಿ ಬಾಕಿ ಉಳಿಸಿದ್ದು ಕೂಡಲೇ ಉಳಿದಿರುವ ಅನುದಾನವನ್ನು ಕಾಫಿ ಬೆಳೆಗಾರರಿಗೆ ನೀಡುವಂತೆ ಒತ್ತಾಯಿಸಿದರು.

ಕಾಫಿ ಬೆಳೆಗಾರರ ಸಮಸ್ಯೆಗೆ ಪರಿಹಾರ: 2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ದೇಶದಲ್ಲಿ ಸಾಲವೇ ಇತ್ತು, ದೇಶದ ಅಭಿವೃದ್ಧಿ ದೃಷ್ಟಿಯಿದ ಕೇಂದ್ರ ಸರ್ಕಾರ ಜಿಎಸ್‌ಟಿ ಜಾರಿ ಮಾಡಿ, ತೆರಿಗೆ ವಂಚಿತರಿಗೆ ಬಿಸಿ ಮುಟ್ಟಿಸಿದೆ. ಇನ್ನು ಐದು ವರ್ಷಗಳ ಮೋದಿ ಸರ್ಕಾರದಲ್ಲಿ ಕಾಫಿ ಬೆಳೆಗಾರರ ಸಂಪೂರ್ಣ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಈಗಾಗಲೇ ಮೋದಿ ಸರ್ಕಾರ ಕಿಸಾನ್‌ ಸನ್ಮಾನ್‌ ಯೋಜನೆ ಸುಮಾರು 15 ಕೋಟಿ ರೈತರಿಗೆ ವಿಸ್ತರಿಸಿದೆ ಕರ್ನಾಟಕ ಬೆಳೆಗಾರರ ಒಕ್ಕೂಟ ಹತ್ತಾರು ಬೇಡಿಕೆ ಗಳನ್ನು ಮುಂದಿಟ್ಟಿದೆ. ಅದರಲ್ಲಿ ಪ್ರಮುಖ ಸಮಸ್ಯೆ ಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಿದ್ದೇವೆ ಎಂದು ಹೇಳಿದರು.

ಕಾಫಿ ಬೆಳೆ ನಾಶದಿಂದ ಸಂಕಷ್ಟ: ಕಾಫಿ ಬೆಳೆಗಾರರ ಸಂಕಷ್ಟ ಅರ್ಥಿಕ ಸ್ಥಿತಿ ಬಗ್ಗೆ ಮಾತ್ರ ಚಿಂತನೆ ಮಾಡಬೇಕೆ ಹೊರತು ರಾಜಕೀಯ ಲೆಕ್ಕಚಾರ ಹಾಕಬಾರದು. ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ತಾಲೂಕುಗಳ ಕೆಲ ಭಾಗಗಳಲ್ಲಿ ಕಾಫಿ ಬೆಳೆಯುತ್ತಿದ್ದು, ಕಳೆದ ಸಾಲಿನಲ್ಲಿ ನಡೆದ ಅತಿವೃಷ್ಟಿ ಯಲ್ಲಿ ಬೇಲೂರು ತಾಲೂಕಿನಲ್ಲಿ ಸುಮಾರು 86 ಹೆಕ್ಟೇರ್‌ ಪ್ರದೇಶದಲ್ಲಿ ಕಾಫಿ ನಾಶವಾಗಿದ್ದು ಬೆಳೆಗಾರರು ಸಂಕಷ್ಟ ಅನುಭವಿಸಿದ್ದಾರೆ ಎಂದು ಹೇಳಿದರು.

ಸಾಲ ಮನ್ನಾ ಮಾಡಿ: ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ತೀರ್ಥಮಲ್ಲೇಶ್‌ ಮಾತನಾಡಿ ಕಾಫಿ ಬೆಳೆಗಾರರು ಇತ್ತೀಚಿನ ದಿನದಲ್ಲಿ ನೂರಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದು ಆನೆ ಹಾವಳಿ, ಎತ್ತಿನಹೊಳೆ ಯೋಜನೆಯಿಂದ ಸುಮಾರು 2 ಲಕ್ಷ ಮರಗಳ ಮರಣ ಹೋಮ, ಚಿಕ್ಕಮಗಳೂರು ಸಕಲೇಶಪುರ ರೈಲ್ವೆ ಯೋಜನೆ, ಕಾಫಿ ಮೆಣಸು ಅಮದು ಇನ್ನು ಮುಂತಾದ ಸಮಸ್ಯೆಗಳಲ್ಲಿರುವ ಕಾಫಿ ಬೆಳೆಗಾರರ ಸಂಪೂರ್ಣ ಸಾಲಮನ್ನಾ ಮಾಡ ಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸಿದ ಅವರು ಈ ನಿಟ್ಟಿನಲ್ಲಿ ನೂತನ ಸಂಸದರು ಬೆಳೆ ಗಾರರ ಹಿತ ಕಾಪಾಡಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಬೇಲೂರು ಶಾಸಕ ಕೆ.ಎಸ್‌.ಲಿಂಗೇಶ್‌, ಮೂಡಿಗೆರೆ ಶಾಸಕ ಕುಮಾರಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಪ್ರಾಣೇಶ್‌, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್‌, ಕಾಫಿ ಬೋರ್ಡ್‌ ಅಧ್ಯಕ್ಷ ಭೋಜೇಗೌಡ, ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಮಾಜಿ ಅಧ್ಯಕ್ಷ ಜಗನಾಥ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.