ಶಿಕ್ಷಣದಿಂದ ಸಂಸ್ಕಾರ ಸಿಗಲಿ: ಮಂಜುನಾಥ್
Team Udayavani, Dec 2, 2019, 2:50 PM IST
ಭದ್ರಾವತಿ: ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಾಯಿ ಬಾಬಾ ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಹೊಂದಿದ್ದ ಆಶಯವನ್ನು ಸಾಕಾರಗೊಳಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಎಚ್. ಮಂಜುನಾಥ್ ಹೇಳಿದರು.
ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ವಿವಿಧ ಬಿರುದುಗಳನ್ನೊಳಗೊಂಡ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.
ಶಿಕ್ಷಣ ಎಂದರೆ ಕೇವಲ ಪಠ್ಯ ಶಿಕ್ಷಣ ನೀಡವುದಷ್ಟೇ ಅಲ್ಲ. ಅದರ ಜೊತೆ, ಜೊತೆಗೆ ವಿದ್ಯಾರ್ಥಿಗಳಲ್ಲಿ ಸುಸಂಸ್ಕೃತವಾದ ನಡೆ, ನುಡಿ, ಉತ್ತಮ ವಿಚಾರಧಾರೆಗಳನ್ನು, ಚಿಂತನೆಗಳನ್ನು ಬೆಳೆಸುವ ಸಂಸ್ಕಾರವನ್ನು ಬೆಳೆಸುವ ಜವಾಬ್ದಾರಿಯನ್ನು ಶಿಕ್ಷಣ ಸಂಸ್ಥೆಗಳು ಹೊಂದಿರಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಮಾತನಾಡಿ, ಸತ್ಯಸಾಯಿ ಶಿಕ್ಷಣ ಸಂಸ್ಥೆ ಶೈಕ್ಷಣಿಕ ನಿಯಮಗಳನ್ನು ಪಾಲಿಸುವದರ ಜೊತೆಗೆ ಸಾಮಾಜಿಕ ಸೇವಾ ಕಾರ್ಯವನ್ನೂ ಪ್ರಾಯೋಗಿಕವಾಗಿ ನಡೆಸುತ್ತಾ ಮಕ್ಕಳಲ್ಲಿ ವಿದ್ಯಾರ್ಥಿ ಜೀವನದಿಂದಲೇ ಸಮಾಜಮುಖೀ ಸೇವಾಕಾರ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮನೋಭಾವವನ್ನು ಬೆಳೆಸುತ್ತಿರುವುದು ಹಾಗೂ ವಿದ್ಯಾರ್ಥಿಗಳಿಗೆ ಧಾರ್ಮಿಕ ತಳಹದಿಯ ಮೇಲೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಬಾಳುವ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.
ಶಿಕ್ಷಣ ಸಂಸ್ಥೆಯ ಆಡಳಿತಾಧಿ ಕಾರಿ ಡಿ. ಪ್ರಭಾಕರ ಬೀರಯ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಪೋಷಕರು ಕಾರ್ಯಕ್ರಮ ಉದ್ಘಾಟಿಸಿದರು. ರೈತ ದಂಪತಿಗಳನ್ನು ಸನ್ಮಾನಿಸಲಾಯಿತು. ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅವರು ಇಚ್ಛಿಸಿದ ವಸ್ತುಗಳನ್ನು ಬಹುಮಾನಗಳಾಗಿ ವಿತರಿಸಲಾಯಿತು.
ಇದೇ ಸಂಧರ್ಭದಲ್ಲಿ ಸುಮಾರು 30 ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದುತ್ತಿರುವ ಮುಖ್ಯೋಪಾಧ್ಯಾಯ ಜಿ.ಪಿ. ಪರಮೇಶ್ವರಪ್ಪ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ಸಂಸ್ಥೆಯ ಜಂಟಿ ಆಡಳಿತಾಧಿಕಾರಿ ಸೌಮ್ಯ ಪ್ರಭಾಕರ್, ಪ್ರಾಂಶುಪಾಲರಾದ ಶಾಮರಾಯ ಆಚಾರ್, ಮೃತ್ಯುಂಜಯ ಕಾನಿಟ್ಕರ್, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ಹಾಗೂ
ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ನಿರ್ದೇಶಕರು ಇನ್ನಿತರರು ಇದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.