ನಗರಸಭೆ ಅಧಿಕಾರಿಗಳಿಂದ ಅಕ್ರಮ ಕಟ್ಟಡ ನೆಲಸಮ
ವಾಹನ ಮಾಲೀಕರು- ಚಾಲಕರ ಸಂಘದಿಂದ ಪ್ರತಿಭಟನೆ
Team Udayavani, Dec 4, 2019, 4:59 PM IST
ಭದ್ರಾವತಿ: ನಗರಸಭೆಯ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ ಎಂದು ನಗರಸಭೆಯ ಅಧಿಕಾರಿಗಳು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಪಕ್ಕದಲ್ಲಿನ ಕುವೆಂಪು ಪ್ರವಾಸಿ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಕಚೇರಿ ಕಟ್ಟಡವನ್ನು ಸೋಮವಾರ ರಾತ್ರಿ ನೆಲಸಮಗೊಳಿಸಿದರು.
ಬೆಳಗ್ಗೆ ಕಟ್ಟಡ ಧ್ವಂಸಗೊಂಡಿರುವುದನ್ನು ವಿರೋಧಿಸಿ ಕುವೆಂಪು ಪ್ರವಾಸಿ ವಾಹನ ಮಾಲೀಕರ ಹಾಗೂ ಚಾಲಕರ ಸಂಘದವರು ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಪ್ರತಿಭಟನಾಕಾರರು, ಈ ಜಾಗಕ್ಕೆ ನಗರಸಭೆಯಿಂದ ಎನ್‌ಒಸಿ ಪಡೆದು ಅನಂತರ ಸಂಘದ ಕಟ್ಟಡದ ಅಭಿವೃದ್ಧಿಗಾಗಿ ಶಾಸಕರ ಅನುಧಾನದಲ್ಲಿ 10 ಲಕ್ಷ ರೂ. ನೆರವಿನಿಂದ ನಿರ್ಮಿತಿ ಕೇಂದ್ರವನ್ನು ಮಾಡಿಕೊಟ್ಟಿದೆ. ಆದರೂ ಇದಾವುದನ್ನೂ ಸರಿಯಾಗಿ ಪರಿಗಣಿಸದೆ ನಗರಸಭೆಯ ಪೌರಾಯುಕ್ತರು ಮತ್ತು ಅಧಿಕಾರಿಗಳು ರಾತೋರಾತ್ರಿ ಕಟ್ಟಡ ನೆಲಸಮ ಮಾಡಿರುವುದು ಖಂಡನೀಯ. ಕೂಡಲೇ ಆ ಜಾಗದಲ್ಲಿ ನಗರಸಭೆಯವರು ನಮಗೆ ವ್ಯವಸ್ಥಿತವಾಗಿ ಕಚೇರಿ ನಿರ್ಮಾಣ ಮಾಡಿಕೊಡಬೇಕು ಹಾಗೂ ಸಂಘಕ್ಕೆ ಈಗಾಗಿರುವ ನಷ್ಟ ತುಂಬಿಕೊಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ರಾಜು, ಉಪಾಧ್ಯಕ್ಷ ಶಿವಕುಮಾರ್, ಖಜಾಂಚಿ ಗಣೇಶ್, ಲೋಕೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.