ನೀರಿನ ಸಮಸ್ಯೆ ನಿವಾರಣೆಗೆ ಆದೇಶ
ಕಾರಂಜಾ ಜಲಾಶಯದಿಂದ ಪೈಪ್‌ಲೈನ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿ
Team Udayavani, Jun 5, 2019, 10:27 AM IST
ಭಾಲ್ಕಿ: ಕೆಡಿಪಿ ಸಭೆಯಲ್ಲಿ ಶಾಸಕ ಈಶ್ವರ ಖಂಡ್ರೆ ಮಾತನಾಡಿದರು.
ಭಾಲ್ಕಿ: ಪಟ್ಟಣ ಸೇರಿದಂತೆ ತಾಲೂಕಿನ ಸುಮಾರು 23 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಯೋಜನೆ ಮೂಲಕ ಪರಿಹಾರ ಕಂಡುಕೊಳ್ಳಲು ಶಾಸಕ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಸಾಕಷ್ಟು ಹಣ ವ್ಯಯ ಮಾಡುತ್ತಲಿದೆ. ಕೊಳವೆ ಬಾವಿ ಕೊರೆಸುವುದು, ಟ್ಯಾಂಕ್ ಮೂಲಕ ನೀರು ಸರಬರಾಜು ಮಾಡುವುದು ಹೀಗೆ ಹತ್ತು ಹಲವಾರು ರೀತಿಯಲ್ಲಿ ಹಣ ವ್ಯಯ ಮಾಡಲಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ, ಕಾರಂಜಾ ಜಲಾಶಯದಿಂದ ಭಾಲ್ಕಿ ಪಟ್ಟಣದ ವರಗೆ ಪೈಪ್‌ಲೈನ್ ಅಳವಡಿಸಿ ನೇರವಾಗಿ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಆಗುವಂತೆ 140 ಕೋಟಿ ರೂ. ಹಣ ಮಂಜೂರು ಮಾಡಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ತಾಲೂಕಿನ ಸುಮಾರು 23 ಗ್ರಾಮಗಳು ಮತ್ತು ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಅಲ್ಲದೇ ಮಾರ್ಗ ಮಧ್ಯದ 23 ಗ್ರಾಮಗಳಲ್ಲದೇ ಪಟ್ಟಣದ ಹೊರ ವಲಯದ ಕೆಲವು ಗ್ರಾಮಗಳಿಗೆ ಪಟ್ಟಣದಿಂದ ನೀರು ಒದಗಿಸುವ ಬಗ್ಗೆ ಮಾಹಿತಿ ಪಡೆದರು.
ಕೃಷಿ ಅಧಿಕಾರಿಗಳಿಂದ ರೈತರ ಆತ್ಮೆ ಹತ್ಯೆ ಪ್ರಕರಣ, ಬೆಳೆಹಾನಿ ಪರಿಹಾರ, ಬೆಳೆ ವಿಮೆ ಹಣ ವಿಲೇವಾರಿ ಸೇರಿದಂತೆ ರೈತರಿಗೆ ಸರ್ಕಾರದಿಂದ ಸೇರಬೇಕಾದ ಹಣದ ಬಗ್ಗೆ ಮಾಹಿತಿ ಪಡೆದರು. ಇದರಲ್ಲಿ ಬೆಳೆವಿಮೆ ರೈತರಿಗೆ ಇನ್ನೂ ಜಮೆ ಆಗದಿರುವ ಬಗ್ಗೆ ಬೇಸರ ವ್ಯಕ್ತ ಪಡೆಸಿದರು. ಕಂದಾಯ ಮತ್ತು ಕೃಷಿ ಅಧಿಕಾರಿಗಳು ರೈತರ ಸಾಲಮನ್ನಾ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಯಾವ ರೈತರಿಗೂ ಅನ್ಯಾಯವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿಯಲ್ಲಿ ಉತ್ತಮ ಮರ ನೆಡುವುದು ಮತ್ತು ನೈಜ ಫಲಾನುಭವಿಗಳಿಗೆ ಸಾಗವಾನಿ ಮರ ನೆಡುವ ಬಗ್ಗೆ ಮಾಹಿತಿ ನೀಡಿದರು. ಲೋಕೊಪಯೋಗಿ ಇಲಾಖೆ, ಪುರಸಭೆ ಮತ್ತು ಅರಣ್ಯ ಇಲಾಖೆಯವರು ಸೇರಿ ಪಟ್ಟಣದ ಮುಖ್ಯ ರಸ್ತೆಗಳ ಹತ್ತಿರ ಸೂಕ್ತ ಸ್ಥಳಾವಕಾಶ ಕಲ್ಪಿಸಿ ಮರಗಳನ್ನು ನೆಡಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಸ್ತ್ರೀ ರೋಗ ತಜ್ಞೆ ಮತ್ತು ಅರವಳಿಕೆ ತಜ್ಞರಿಲ್ಲದ ಕಾರಣ ಸಿಜರಿಂಗ್ ಹೆರಿಗೆ ನಡೆಸಲಾಗುತ್ತಿಲ್ಲ. ಇಂತಹ ರೋಗಿಗಳನ್ನು ಬೇರೆ ಕಡೆಗೆ ಕಳುಹಿಸಲಾಗುತ್ತಿದೆ. ತಾಲೂಕಿನಲ್ಲಿಯ ಸುಮಾರು 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಅಕ್ಷರ ದಾಸೋಹ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಪೂರ್ಣ ಮಾಹಿತಿ ನೀಡಿದರು.
ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಪಶುಸಂಗೋಪನಾ ಇಲಾಖೆ, ಪಂಚಾಯತರಾಜ ಇಂಜಿನಿಯರಿಂಗ್ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಕೈಗಾರಿಕೆ ಇಲಾಖೆ, ಆಹಾರ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಆಯಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ತಾಪಂ ಅಧ್ಯಕ್ಷೆ ರೇಖಾ ವಿಲಾಸ ಪಾಟೀಲ, ಉಪಾಧ್ಯಕ್ಷ ಮಾರುತಿ ಮಗರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.