ಸ್ಥಳೀಯ ನ್ಯಾಯಾಲಯಗಳ ಕಾರ್ಯ ಶ್ಲಾಘನೀಯ

ಹೊಸ ಕಟ್ಟಡದಿಂದ ಜವಾಬ್ದಾರಿ ಹೆಚ್ಚಳ: ನ್ಯಾಯಮೂರ್ತಿಅಭಯ ಶ್ರೀನಿವಾಸ ಓಕಾ

Team Udayavani, Sep 22, 2019, 4:52 PM IST

22-Sepectember-21

ಭಾಲ್ಕಿ: ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ತಾಲೂಕು ಮತ್ತು ಜಿಲ್ಲಾ ಕೋರ್ಟ್ಅ ವುಗಳನ್ನು ಹೆಚ್ಚೆಚ್ಚು ಬಲಗೊಳಿಸುವುದು ಹೈಕೋರ್ಟ್‌ನ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ಹೈಕೋಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನೂತನ ನ್ಯಾಯಾಲಯದ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. 10 ವರ್ಷ ಹಳೆಯ ಎಲ್ಲ ಪ್ರಕರಣಗಳನ್ನು 2019ರ ನವೆಂಬರ್‌ ಒಳಗಾಗಿ ಮುಗಿಸಲು ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೆ ಸೂಚಿಸಲಾಗಿದೆ. ತುಂಬಾ ಹಳೆಯದಾಗಿರುವ ಪ್ರಕರಣಗಳನ್ನು ಮುಕ್ತಾಯಗೊಳಿಸಲು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ನಡೆಸಲಾಗುತ್ತಿದೆ ಎಂದರು.

ಜುಲೈ ತಿಂಗಳಿನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಬಾಕಿಯಿದ್ದ 70 ಸಾವಿರ ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಸೆಪ್ಟೆಂಬರ್‌ ತಿಂಗಳಲ್ಲಿ 60 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಿ ರಾಷ್ಟ್ರಮಟ್ಟದಲ್ಲಿ 3ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಐದು ವರ್ಷ ಮೇಲ್ಪಟ್ಟ ಪ್ರಕರಣಗಳು ಇರಬಾರದು ಎಂಬ ಉದ್ದೇಶ ಹೈಕೋರ್ಟ್‌ ದಾಗಿದ್ದು, ಅದಕ್ಕೆ ವಕೀಲ ಸಂಘದ ಹಿರಿಯ, ಕಿರಿಯ ಪದಾ ಧಿಕಾರಿಗಳು ಸಹಕರಿಸಬೇಕು ಎಂದು ಹೇಳಿದರು.

ನೂತನ ನ್ಯಾಯಾಲಯದ ಕಟ್ಟಡದಿಂದ ಇಲ್ಲಿ ಕೆಲಸ ಮಾಡುವವರ ಜವಾಬ್ದಾರಿ ಹೆಚ್ಚಲಿದೆ. ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡ ರಾಜ್ಯದ ಮಾದರಿ ಕೋರ್ಟ್‌ಗಳಲ್ಲಿ ಒಂದಾಗಲಿದೆ ಎಂದರು.

ನೂತನ ಕಟ್ಟಡದ ನಿರ್ಮಾಣದೊಂದಿಗೆ ವಕೀಲರ ಸಂಘದ ಪದಾಧಿಕಾರಿಗಳ ಜವಾಬ್ದಾರಿ ಕೂಡ ಹೆಚ್ಚಲಿದೆ. ಅವರು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಮೂಲಕ ಸಾಮಾನ್ಯ ಜನರಿಗೆ ವೇಗವಾಗಿ ಪ್ರಾಮಾಣಿಕ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕಾಗುತ್ತದೆ ಎಂದರು.

ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಶಂಕರ ಗಣಪತಿ ಪಂಡಿತ ಮಾತನಾಡಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮಾವತಿ ಮನಗೂಳಿ, ಹಿರಿಯ ಶ್ರೇಣಿ ನ್ಯಾಯಾಧೀಶ ಎಂ.ಮಲ್ಲಪ್ಪ, ಕಿರಿಯ ಶ್ರೇಣಿ ನ್ಯಾಯಾ ಧೀಶ ಈಶ್ವರ, ನ್ಯಾಯಮೂರ್ತಿ ಟಿ.ಪಿ. ಸಿದ್ರಾಮ, ನ್ಯಾಯಮೂರ್ತಿ ಶೇಷಾನಂದ, ನ್ಯಾಯಮೂರ್ತಿ ಶಿವಾನಂದ, ನ್ಯಾಯಮೂರ್ತಿ ಯಮುನಪ್ಪ, ಮಾಜಿ ಸಚಿವ ಭೀಮಣ್ಣ ಖಂಡ್ರೆ, ಕೇಶವರಾವ್‌ ನಿಟ್ಟೂರಕರ, ರಾಜಶೇಖರ ಅಷ್ಟೂರೆ, ವಕೀಲ ಸಂಘದ ಉಪಾಧ್ಯಕ್ಷ ರಾಹುಲ್‌ ಸಾವಳೆ, ಉಮಾಕಾಂತ ವಾರದ, ಸುರೇಶ ಬಿರಾದಾರ, ನ್ಯಾಯವಾದಿ ಶಿವಪುತ್ರ ದಾಬಶೆಟ್ಟಿ, ಓಂಕಾರ ಪಾಟೀಲ ಇದ್ದರು.

ವಕೀಲರ ಸಂಘದ ಅಧ್ಯಕ್ಷ ಎನ್‌.ಬಿ. ಪಾಟೀಲ ಸ್ವಾಗತಿಸಿದರು. ಬಾಬುರಾವ್‌ ಗಾಮಾ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಮಹೇಶ ರಾಚೋಟೆ ವಂದಿಸಿದರು.

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.