20 ಇಲಾಖೆ ನಿರ್ದೇಶಕರ ಅವಿರೋಧ ಆಯ್ಕೆ
5 ಇಲಾಖೆಗಳಿಗೆ ಚುನಾವಣೆ-ಶೇ.90 ಮತದಾನ •ವಿಜೇತ ಅಭ್ಯರ್ಥಿಗಳಿಂದ ಸಂಭ್ರಮಾಚರಣೆ
Team Udayavani, Jun 14, 2019, 4:07 PM IST
ಭಾಲ್ಕಿ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ ಚಲಾಯಿಸಿದ ನೌಕರರು.
ಭಾಲ್ಕಿ: ಪಟ್ಟಣದ ವಿವಿಧ ಬೂತ್ ಗಳಲ್ಲಿ ಗುರುವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಿತು. ಶಿಕ್ಷಕರು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸಿದರು.
ಪಟ್ಟಣದಲ್ಲಿ ಸ್ಥಾಪಿಸಲಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2 ಬೂತ್‌ಗಳು, ಉರ್ದು ಪ್ರಾಥಮಿಕ ಶಾಲೆಯ ಎರಡು ಬೂತ್‌ಗಳು ಸೇರಿದಂತೆ ಎಲ್ಲಾ ಬೂತ್‌ಗಳ ಒಟ್ಟು ಮತದಾನ ಶೇ.90 ಆಯಿತು. ಸುಮಾರು 25 ಇಲಾಖೆಗಳ ನಿರ್ದೇಶಕರ ಸ್ಥಾನಗಳಿಗಾಗಿ ನಡೆಯಬೇಕಿದ್ದ ಚುನಾವಣೆಯಲ್ಲಿ 20 ಇಲಾಖೆಯ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಉಳಿದ 5 ಇಲಾಖೆಗಳಾದ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ, ಪ್ರೌಢಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗಳ ನಿರ್ದೇಶಕರ ಸ್ಥಾನಗಳು ಮತ್ತು ತೋಟಗಾರಿಕೆ ಇಲಾಖೆಯ ಒಬ್ಬ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಿತು.
ಚುನಾವಣೆ ನಂತರ ಮತ ಎಣಿಕೆ ಕಾರ್ಯ ನಡೆಸಿ, ಪ್ರೌಢಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಪದವಿಪೂರ್ವ ಶಿಕ್ಷಣ ಮತ್ತು ತೋಟಗಾರಿಕೆ ಇಲಾಖೆಯ ಒಬ್ಬೊಬ್ಬ ನಿರ್ದೇಶಕರ ಸ್ಥಾನಗಳ ಫಲಿತಾಂಶ ಪ್ರಕಟಿಸಲಾಯಿತು. ಪ್ರೌಢಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿ ಡಾ| ಕಾಶಿನಾಥ ಚಲವಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಷ್ಟಶೀಲ ಮಿತ್ರಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಸುಭಾಷ ಗೋಬರೆ, ತೋಟಗಾರಿಕೆ ಇಲಾಖೆಯ ರಾಜಕುಮಾರ ಮಾನಕಾರೆ ಅವರು ಆಯ್ಕೆಯಾಗಿದ್ದಾರೆ. ಇನ್ನು ಪ್ರಾಥಮಿಕ ಶಿಕ್ಷಣ ಇಲಾಖೆಯ ಮೂರು ನಿರ್ದೇಶಕರ ಸ್ಥಾನಗಳಿಗಾಗಿ ನಡೆದ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬೀಳುವ ಸಂಭವವಿದೆ ಎಂದು ಚುನಾವಣಾಧಿಕಾರಿ ಬಿ.ಎಸ್.ಪಾಟೀಲ ತಿಳಿಸಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಚುನಾಯಿತ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.