ಕೆಆರ್‌ಡಿಐಎಲ್ ಕಾಮಗಾರಿ ಅಪೂರ್ಣಕ್ಕೆ ಆಕ್ಷೇಪ
ತಾಪಂ ಸಾಮಾನ್ಯ ಸಭೆ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆಗೆ ತಾಪಂ ಸದಸ್ಯರ ಅಸಮಾಧಾನ
Team Udayavani, Dec 6, 2019, 3:27 PM IST
ಭಾಲ್ಕಿ: ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನ ಕಣಜೆ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು.
ಸಭೆ ಆರಂಭವಾಗುತ್ತಲೇ ಸದಸ್ಯರು ಕೆಆರ್‌ಡಿಐಎಲ್ ಇಲಾಖೆಯ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದರು. ಕೆಆರ್‌ಡಿಐಎಲ್‌ನಿಂದ ಮೇಹಕರ್, ಖಟಕ್ ಚಿಂಚೋಳಿಯಲ್ಲಿ ನಿರ್ಮಾಣಗೊಂಡ ವಸತಿ ನಿಲಯದ ಕಟ್ಟಡಗಳನ್ನು ಹಸ್ತಾಂತರ ಮಾಡದಿರುವುದು, ತಾಲೂಕಿನ ನಾನಾ ಕಡೆಗಳಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿರುವುದು, ಇನ್ನೂ ಕೆಲವು ಕಡೆಗಳಲ್ಲಿ ಕಟ್ಟಡ ಕಳಪೆಯಾಗಿ ನಿರ್ಮಾಣವಾಗುತ್ತಿರುವ ಬಗ್ಗೆ ಸದಸ್ಯರು ಪ್ರಶ್ನಿಸಿದರು.
ಈ ವೇಳೆ ಕೆಆರ್‌ಡಿಐಎಲ್‌ನ ಅಧಿಕಾರಿ ಸಮಜಾಯಿಸಿ, ಉತ್ತರ ನೀಡುವ ಪ್ರಯತ್ನ ಮಾಡಿದರು. ಇದರಿಂದ ಗರಂ ಆದ ಹಲಬರ್ಗಾ,
ಜ್ಯಾಂತಿ, ಖಟಕ್ ಚಿಂಚೋಳಿ, ಮದಕಟ್ಟಿ ಕ್ಷೇತ್ರ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿ, ಕೆಆರ್‌ಡಿಐಎಲ್‌ನ ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಪ್ರತಿಸಲ ನಡೆಯುವ ಸಭೆಗೆ ಸರಿಯಾದ ಮಾಹಿತಿ ನೀಡುವುದಿಲ್ಲ.
ಸಭೆಯಲ್ಲಿ ಹೆಚ್ಚಾಗಿ ಗೈರಾಗಿರುವುದು ಕಂಡು ಬರುತ್ತಿದೆ. ತಾಲೂಕಿನ ನಾನಾ ಕಡೆಗಳಲ್ಲಿ ಕೆಆರ್ ಡಿಐಎಲ್‌ನಿಂದ ನಡೆಯುತ್ತಿರುವ ಕಾಮಗಾರಿ ತೃಪ್ತಿ ತಂದಿಲ್ಲ. ಕೆಆರ್‌ಡಿಐಎಲ್ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಖಟಕ್ ಚಿಂಚೋಳಿ ಕ್ಷೇತ್ರದ ಸದಸ್ಯ ವಿಜಯಕುಮಾರ ಗಡಗಂಚಿ ಮಾತನಾಡಿ, ಖಟಕ್ ಚಿಂಚೋಳಿ ಗ್ರಾಮದಲ್ಲಿ ವಸತಿ ನಿಲಯದ ಹೆಚ್ಚುವರಿ ಕೋಣೆಯನ್ನು ಕೆಆರ್‌ಡಿಐಎಲ್‌ನಿಂದ ನಿರ್ಮಿಸಿ ಮೂರು ವರ್ಷ ಕಳೆಯುತ್ತ ಬಂದರೂ ಇದುವರೆಗೂ ಹಸ್ತಾಂತರವಾಗದಿರುವ ಬಗ್ಗೆ ಪ್ರಶ್ನಿಸಿದರು. ಹಲಬರ್ಗಾ ಕ್ಷೇತ್ರದ ಸದಸ್ಯ ಸುಧಾಕರ ಮಾತನಾಡಿ, ಕೋಸಂ ಗ್ರಾಮದಲ್ಲಿ ಕೆಆರ್ ಡಿಐಎಲ್‌ನಿಂದ ನಿರ್ಮಿಸಿರುವ ಸಮುದಾಯ ಭವನ ಅರ್ಧಕ್ಕೆ ನಿಂತಿದೆ. ಹಾಲಹಿಪ್ಪರ್ಗಾದಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿವೆ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷ ಮಾರುತಿರಾವ್ ಮಗರ್, ಕಾರ್ಯನಿರ್ವಾಹಕ ಅಧಿಕಾರ ಬಸವರಾಜ ನಾಯ್ಕರ್ ಸೇರಿದಂತೆ ತಾಲೂಕು ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.