ಹೃದಯ ವೈಶಾಲ್ಯತೆಗೆ ಪ್ರಾಮುಖ್ಯತೆ ಇರಲಿ: ಬಸವಲಿಂಗ ಶ್ರೀ

ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ಚಾಂಪ್ಸ್‌-2019

Team Udayavani, Apr 10, 2019, 2:57 PM IST

10-April-20

ಭಾಲ್ಕಿ: ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಜಾಂಪ್ಸ್‌-2019 ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನಾಸಮಾರಂಭದಲ್ಲಿ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.

ಭಾಲ್ಕಿ: ನಮ್ಮ ಬುದ್ಧಿ ಸಾಕಷ್ಟು ಬೆಳೆಯುತ್ತಲಿದೆ. ಆದರೆ ಈ ಬುದ್ಧಿಯ ಜೊತೆಗೆ ಹೃದಯವೂ ವಿಶಾಲವಾಗಬೇಕು ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು. ಪಟ್ಟಣದ ದಿವ್ಯಜ್ಯೋತಿ ಪ್ರೌಢಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಆಯೋಜಿಸಿದ್ದ ಚಾಂಪ್ಸ್‌ 2019, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳ ಮನಸ್ಸು ಹೂವಿನಂತೆ ಮೃದುವಾಗಿರುತ್ತದೆ. ನಾವು ನೂರು ಜನ ಮುದಕರಿಗೆ ಹೇಳುವ ಪ್ರವಚನ ಅವರ ಮುಂದಿನ ಜನ್ಮಕ್ಕೆ ಸಾರ್ಥಕವಾಗುವುದು. ಆದರೆ ಮೂರೇ ಜನ ವಿದ್ಯಾರ್ಥಿಗಳಿಗೆ ಹೇಳುವ ಮಾತು ಈ ಜನ್ಮದಲ್ಲಿಯೇ ಸಾರ್ಥಕ ಪಡೆಯುತ್ತದೆ. ಹೀಗಾಗಿ ವಿದ್ಯಾರ್ಥಿಗಳೊಂದಿಗೆ ನಡೆಸುವ ಸಂವಾದ ಸಾರ್ಥವಾಗುವುದು ಎಂದರು.

ವಿದ್ಯಾರ್ಥಿಗಳು ಒಳ್ಳೆಯ ವಿಚಾರ ತಮ್ಮ ನಡೆಯಲ್ಲಿ ಆಚರಣೆಗೆ ತರುವಂತಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ತಾವು ನಿರ್ಧರಿಸಿದ ಅಂಶದಲ್ಲಿ ಸಾರ್ಥಕವಾಗುವ ಶಕ್ತಿ ಇರುತ್ತದೆ. ಅದಕ್ಕೆ ಆತ್ಮವಿಶ್ವಾಸವಿರಬೇಕು. ಆತ್ಮ ವಿಸ್ವಾಸದ ಕೊರತೆ ಇರುವ
ವ್ಯಕ್ತಿ ಏನೂ ಸಾ ಧಿಸಲಾರ. ನಮ್ಮ ಅಂತರಂಗದಲ್ಲಿ ದೇವರು ಅದ್ಭುತ ಶಕ್ತಿ ಇಟ್ಟಿದ್ದಾನೆ. ನಾವು ಅದರ ಸದುಪಯೋಗ ಪಡೆದುಕೊಳ್ಳಬೇಕು. ನಮ್ಮ ಏಳ್ಗೆಗೆ ನಾವೇ ಶಿಲ್ಪಿಗಳಾಗಿದ್ದೇವೆ.
ನಮ್ಮಲ್ಲಿ ಮಾನವೀಯ ಮೌಲ್ಯ ಬೆಳೆಯಬೇಕು. ದಯೆ ಕರುಣೆ, ಪ್ರೀತಿ ಈ ಶಿಬಿರದಿಂದ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನೀವು ಈ ಶಿಬಿರದಲ್ಲಿ ಪಾಲ್ಗೊಂಡಿದ್ದಕ್ಕೂ ಸಾರ್ಥಕವಾಗುವುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿ, ದೇವರು ಇರುವುದು ಮಕ್ಕಳ ಮನಸ್ಸಿನಲ್ಲಿ. ಬೀದರ ಜಿಲ್ಲೆಯ ಮಕ್ಕಳು ವೈಶಿಷ್ಟ್ಯ ಪೂರ್ಣ ವ್ಯಕ್ತಿತ್ವ ಹೊಂದಿದ್ದಾರೆ. ದೇಶದ ಭವಿಷ್ಯ ವಿದ್ಯಾರ್ಥಿಗಳ ಹತ್ತಿರವಿದೆ. ಕಾರಣ ವಿದ್ಯಾರ್ಥಿಗಳು ಉತ್ತಮವಾಗಿದ್ದರೆ ದೇಶದ ಭವಿಷ್ಯ ಉಜ್ವಲವಾಗುವುದು.
ಎಂಟು ದಿವಸಗಳ ಕಾಲ ನಡೆಯುವ ಈ ಶಿಬಿರದಲ್ಲಿ ಪಡೆದ ಉತ್ತಮ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ಯೇಸು ನಿಲಯ ಸಂಚಾಲಕ ಫಾದರ್‌ ಕ್ಲೇರಿ ಡಿಸೋಜಾ ನೇತೃತ್ವ ವಹಿಸಿ ಮಾತನಾಡಿದರು. ಫಾದರ್‌ ಜೋಸೆಫ್‌ ಪ್ರವೀಣ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಹುಮನಾಬಾದ ಅಧ್ಯಕ್ಷ ಪಂಡಿತ ಬಾಳೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ವ್ಯಕ್ತಿಗಳನ್ನು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಪತ್ರಿಕಾ ಕ್ಷೇತ್ರದ ಸಾಧನೆಗೆ ಅಶೋಕ ರಾಜೋಳೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗೆ ಜಯರಾಜ ದಾಬಶೆಟ್ಟಿ ಅವರನ್ನು ಸತ್ಕರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿ ಕಾರಿ ಸಿದ್ದವೀರಯ್ನಾ ರುದನೂರ, ಸೋಮನಾಥಪ್ಪ ಅಸ್ಟೂರೆ, ತಾಪಂ ಸಹಾಯಕ ನಿರ್ದೇಶಕಿ ಶಿವಲೀಲಾ ತಳಗಾವೆ, ಆನಂದ ಸರ್ನಾಡ, ಗುಣವಾನ ವೈರಾಗೆ, ನಾಗನಾಥ ಪಾಟೀಲ, ರಾಮಶೆಟ್ಟಿ ಕೆಂಚಾ, ಶಿವಕುಮಾರ ಘಂಟೆ, ಸುಭಾಷಚಂದ್ರ ದಾಡಗೆ, ಮಂಜುಳಾ ಸುಭಾಷ, ಸಂಗಮೇಶ ಜವಾದಿ, ಪಾರ್ವತಿ ಚಂದ್ರಕಾಂತ, ಮಲ್ಲಮ್ಮಾ ಪಾಟೀಲ, ರಮೇಶ ಸಲಗರ್‌ ಉಪಸ್ಥಿತರಿದ್ದರು.
ಕ.ಕ.ಪ್ರ. ತಾಲೂಕು ಅಧ್ಯಕ್ಷ ಶಿವಾಜಿರಾವ್‌ ಮಾನೆ ಸ್ವಾಗತಿಸಿದರು. ಹಣಮಂತ ಕಾರಾಮುಂಗೆ ನಿರೂಪಿಸಿದರು. ಮಂಜುನಾಥ ಬೆಳಕೇರೆ ವಂದಿಸಿದರು.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.