ಬಾವನಸೌಂದತ್ತಿಗೆ ಬಾಯಾರಿಕೆ  ! 

Team Udayavani, Mar 30, 2019, 4:21 PM IST

30-March-9

ರಾಯಬಾಗ: ಬಾವನ ಸೌಂದತ್ತಿ ಗ್ರಾಮದ ಜಾಕ್‌ವೆಲ್‌ ಹತ್ತಿರ ಖಾಲಿಯಾದ ನದಿ.

ರಾಯಬಾಗ: ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಸಂಪೂರ್ಣ ತಳ ಮುಟ್ಟಿದ್ದು, ಗ್ರಾಮದಲ್ಲಿ ಜನ-ಜಾನುವಾರುಗಳು ನೀರಿಗಾಗಿ ಸಂಕಷ್ಟ ಪಡುವ ಪರಿಸ್ಥಿತಿ ಉದ್ಭವಿಸಿದೆ. ಗ್ರಾಮದಲ್ಲಿ 12 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ದಿನನಿತ್ಯ ಕನಿಷ್ಠ 1 ಲಕ್ಷಕ್ಕೂ ಅಧಿಕ ಲೀಟರ್‌ಗಳಷ್ಟು ನೀರಿನ ಅವಶ್ಯಕತೆ ಇದೆ. ಗ್ರಾಮಕ್ಕೆ ನೀರನ್ನು ಜಾಕ್‌ವೆಲ್‌ ಮೂಲಕ ನೀರನ್ನು ಒದಗಿಸಲಾಗುತ್ತಿತ್ತು. ಆದರೆ ನದಿಯಲ್ಲಿ ನೀರಿನ ಅಭಾವ ಉಂಟಾಗಿ ಜಾಕ್‌ವೆಲ್‌ ನೀರನ್ನು ಪೂರೈಸಲು ಸಾಧ್ಯವಾಗದೇ ಇರುವುದರಿಂದ ಗ್ರಾಮಸ್ಥರಿಗೆ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಅಂತರ್ಜಲಮಟ್ಟವೂ ಕುಸಿದಿದ್ದರಿಂದ ಕೊಳವೆ ಬಾವಿಗಳೂ ಉಪಯೋಗಕ್ಕೆ ಬರುತ್ತಿಲ್ಲ. ಶುದ್ಧ ನೀರಿನ ಘಟಕಗಳಲ್ಲೂ ನೀರಿನ ಅಭಾವ ಅಭಾವವಾಗಿ ಶುದ್ಧ ನೀರು ಮರಿಚಿಕೆಯಾಗುತ್ತಿದೆ.
ಬೆಳೆಗಳಿಗೆ, ಜಾನುವಾರುಗಳಿಗೂ ನೀರಿನ ಕೊರತೆ ಬಾಧಿಸುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ರೈತರು ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬಾರದಂತಾಗುತ್ತದೆ. ನದಿ ತೀರದ ಜನರು ಕೃಷ್ಣಾ ನದಿ ನೀರನ್ನೇ ನೆಚ್ಚಿಕೊಂಡಿದ್ದಾರೆ. ನದಿಯಲ್ಲಿ ನೀರಿದ್ದರೆ ನದಿ ತೀರದ ಕೊಳವೆ ಬಾವಿ ಮತ್ತು ತೆರೆದ ಬಾವಿಗಳ ಅಂರ್ಜಲಮಟ್ಟ ಕೂಡ ಸುಸ್ಥಿರದಲ್ಲಿದ್ದು, ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಹಾರಾಷ್ಟ್ರದಿಂದ ನೀರು ತರುವುದೇ ಆಗಿದೆ.
ನೀರಿನ ಸಮಸ್ಯೆ ಪರಿಹರಿಸಲು ಕೂಡಲೇ ಮಹಾರಾಷ್ಟ್ರದ ಕೊಯ್ನಾ ಅಥವಾ ಕಾಳಮ್ಮವಾಡಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಜನಪ್ರತಿನಿಧಿಗಳು ಪ್ರಯತ್ನಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಬಾವನ ಸೌಂದತ್ತಿ ಗ್ರಾಪಂ ಅಧ್ಯಕ್ಷ ಅಜಿತ ಖೆಮಲಾಪೂರೆ, ಕೃಷ್ಣಾ ನದಿಯಲ್ಲಿ ನೀರು ಖಾಲಿಯಾಗಿದ್ದರಿಂದ ಗ್ರಾಮದ ಜನ-ಜಾನುವಾರುಗಳಿಗೆ ತೊಂದರೆ ಆಗಿದೆ. ಗ್ರಾಮದಲ್ಲಿ 20 ಕೊಳವೆಬಾವಿ ಹಾಗೂ 30 ಜಲಕುಂಭಗಳು ಮತ್ತು ಶುದ್ಧ ನೀರಿನ ಘಟಕಗಳಿದ್ದು, ಅವುಗಳ ಮೂಲಕ ತಾತ್ಕಾಲಿಕವಾಗಿ ನೀರಿನ ಅಭಾವ ಉಂಟಾಗದಂತೆ ನೀರಿನ ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು. ಜಲಕುಂಭಗಳಿಂದ ನೇರವಾಗಿ ಯಾರು ಕೂಡ ಪೈಪ್‌ ಗಳನ್ನು ಹಾಕಿಕೊಳ್ಳಬಾರದು. ಇದರಿಂದ ಸಾರ್ವಜನಿಕರಿಗೆ ನೀರಿನ ತೊಂದರೆ ಆಗುತ್ತದೆಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.