ಬಸ್ ಪಾಸ್‌ಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಎಲ್ಲ ವರ್ಗದ ಬಡ-ಪ್ರತಿಭಾವಂತರಿಗೆ ಪಾಸ್ ಕೊಡಿ •10 ತಿಂಗಳ ಬದಲಿಗೆ 1 ವರ್ಷ ಅವಧಿ ಇರಲಿ
Team Udayavani, Jul 5, 2019, 10:09 AM IST
ಬೀದರ: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವಂತೆ ಒತ್ತಾಯಿಸಿ ನಗರದ ಬಿವಿಬಿ ಕಾಲೇಜು ಮುಖ್ಯರಸ್ತೆಯಲ್ಲಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಬೀದರ: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ನಗರದ ಬಿವಿಬಿ ಕಾಲೇಜು ಮುಖ್ಯರಸ್ತೆಯಲ್ಲಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ರಾಜ್ಯದ ಎಲ್ಲ ವರ್ಗದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕಾರ್ಯ ಆರಂಭಿಸಬೇಕು. ಅಲ್ಲದೆ, ಕೇವಲ 10 ತಿಂಗಳ ಪಾಸ್ ಬದಲಿಗೆ ಒಂದು ವರ್ಷ ಅವಧಿಯ ಪಾಸ್ ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಬೇಕು. ಜಿಲ್ಲೆಯ ವಿವಿಧೆಡೆ ವಿದ್ಯಾರ್ಥಿಗಳ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದ್ದು, ಕೂಡಲೇ ಸಾರಿಗೆ ಅಧಿಕಾರಿಗಳು ಎಲ್ಲಕಡೆಗಳ ವಿದ್ಯಾರ್ಥಿಗಳ ಸಮಯಕ್ಕೆ ಅನುಸಾರ ಬಸ್ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ವಿಭಾಗಿಯ ನಿಯಂತ್ರನಾಧಿಕಾರಿಗಳಿಗೆ ಸಲ್ಲಿಸಲಾಯಿತು. ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ, ಅರವಿಂದ ಸುಂದಳಕರ, ಚನ್ನಬಸವ ಬಿರಾದಾರ, ಸಾಯಿ ಮೂಲಗೆ, ಸಚಿನ ಗುನ್ನಾಳೆ, ಸಾಯಿ ನಾಸಿಗರ, ಸಂತೋಷ ಹಾಲಿಪುರಗೆ, ನೌನಾಥ ಜಾಗರ, ಅಕಾಶ ಇಮ್ರಾನ, ಸೂರ್ಯಕಾಂತ, ಸಂತೋಷ, ಕಾರ್ತಿಕ, ಪ್ರೊ| ನಾಗೇಶ ಬಿರಾದಾರ, ಪ್ರೊ| ಧನರಾಜ ಪಾಟಿಲ್, ಪ್ರೊ| ಯುನುಸ್, ಮಹೇಶ ಸಜ್ಜನ, ವಿರೇಂದ್ರ, ಶಿವಾನಿ, ವೈಷ್ಣವಿ, ವಿಜಯಕ್ಷ್ಮೀ, ಆಶಾ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.