ಆರೋಗ್ಯ ಕಾರ್ಯಕ್ರಮ ಜನಜಾಗೃತಿ ವಸ್ತು ಪ್ರದರ್ಶನ
Team Udayavani, Sep 4, 2019, 11:40 AM IST
ಬೀದರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು, ಕುಡಿಯುವ ನೀರು, ನೈರ್ಮಲ್ಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜನಜಾಗೃತಿ ವಸ್ತು ಪ್ರದರ್ಶನ ನಡೆಯಿತು.
ಬೀದರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು, ಕುಡಿಯುವ ನೀರು, ನೈರ್ಮಲ್ಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜನಜಾಗೃತಿ ವಸ್ತು ಪ್ರದರ್ಶನ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಎಂ.ಎ.ಜಬ್ಟಾರ ಜನಜಾಗೃತಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಳೆಗಾಲದಲ್ಲಿ ಸಹಜವಾಗಿ ಕೆಲವು ಖಾಯಿಲೆಗಳು ಬರುತ್ತವೆ. ಆದ್ದರಿಂದ ಡೆಂಘೀ, ಚಿಕೂನ್ ಗುನ್ಯದಂತಹ ಖಾಯಿಲೆಗಳು ಬಾರದಂತೆ ಜನರು ಜಾಗೃತಿ ವಹಿಸಬೇಕು. ಈ ಜನಜಾಗೃತಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ಹೆಚ್ಚು ರೀತಿಯಲ್ಲಿ ಮಾಹಿತಿ ಲಭ್ಯವಿದೆ. ಈ ಮಳಿಗೆಗೆ ಜನರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡಿ, ವಿವಿಧ ಆರೋಗ್ಯ ಯೋಜನೆ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಪ್ರಭಾರಿ ನಿಯಂತ್ರಣಾಧಿಕಾರಿ ಬಸವಂತಪ್ಪ, ಪ್ರಭಾರಿ ವಿಭಾಗೀಯ ಸಂಚಾರ ಅಧಿಕಾರಿ ಕೆ.ಎಲ್.ಚಂದ್ರಶೇಖರ, ಆಪ್ತ ಸಹಾಯಕ ಪ್ರಭುಲಿಂಗ ಸ್ವಾಮಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಅನೀಲ ಚಿಂತಾಮಣಿ, ಡಾ| ರವೀಂದ್ರ ಸಿರಸಗೆ, ಡಾ| ರಾಜಶೇಖರ ಪಾಟೀಲ, ಡಾ| ಕೃಷ್ಣಾ ರೆಡ್ಡಿ, ಡಾ| ಶಿವಕುಮಾರ,ಡಾ| ಶಿವಶಂಕರ, ಡಾ| ಅಶೋಕ ಮೈಲಾರೆ, ಡಾ| ಶರಣಪ್ಪ ಮುಡಬಿ, ಡಾ| ಅನಿಲ ಚತುರೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುದಾಳೆ, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ವಿಜಯಕೃಷ್ಣ ಸೊಲಪುರ, ತನ್ವೀರ್ ಇಖ್ಬಾಲ್, ನರೇಶಕುಮಾರ, ಬಿಂದುಸಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.