ಉಜಳಂಬದಲ್ಲಿ 4 ಸಾವಿರ ಅರ್ಜಿ ಸಲ್ಲಿಕೆ
ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ •ಉಳಿದವುಗಳು ತಕ್ಷಣ ವಿಲೇವಾರಿಗೆ ಸೂಚನೆ
Team Udayavani, Jun 28, 2019, 3:08 PM IST
ಬಸವಕಲ್ಯಾಣ: ಉಜಳಂಬ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕ ಬಿ. ನಾರಾಯಣರಾವ್ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಂಬಳಿ ಹಾಕಿ ಸನ್ಮಾನಿಸಿದರು.
ಬೀದರ: ಉಜಳಂಬ ಗ್ರಾಮದಲ್ಲಿ ನಡೆಸಿದ ಗ್ರಾಮ ವಾಸ್ತವ್ಯದಲ್ಲಿ ಕಾರ್ಯಕದಲ್ಲಿ ಸುಮಾರು ನಾಲ್ಕು ಸಾವಿರ ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಉಜಳಂಬ ಗ್ರಾಮದಲ್ಲಿ ಗುರುವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗಿದೆ. ಇನ್ನುಳಿದ ಅರ್ಜಿಗಳ ಕುರಿತು ಆಯಾ ಇಲಾಖೆ ಅಧಿಕಾರಿಗಳು ತಕ್ಷಣವೇ ವಿಲೇವಾರಿಮಾಡಿ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿನ ವಾಸ್ತವ್ಯ ರದ್ದಾಗಿಲ್ಲ. ಬದಲಾಗಿ ಮುಂದಕ್ಕೆ ಹಾಕಲಾಗಿದೆ. ಜುಲೈ ಅಥವಾ ಆಗಸ್ಟ್‌ನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅನುಭ ಮಂಟಪ ನಿರ್ಮಾಣ ಹಿಂದಿನ ಸರ್ಕಾರ ಅವಧಿಯಲ್ಲಿ ಘೋಷಣೆಯಾಗಿದೆ. ಮುಂದಿನ ದಿನಗಳಲ್ಲಿ ಅನುದಾನ ನಿಡುವ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದರು.
ಉಜಳಂಬ ಗ್ರಾಮಕ್ಕೆ 32 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯಲಿವೆ. ಬೀದರ ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ ನೀಡಲಾಗುವುದು. ಅಲ್ಲದೆ, ನೆರೆ ರಾಜ್ಯ ಮಹಾರಾಷ್ಟ್ರದ ತುಳಜಾಪುರನಲ್ಲಿ ದೇವಿ ದರ್ಶನಕ್ಕೆ ತೆರಳುವ ಕನ್ನಡಿಗರಿಗಾಗಿ ಕರ್ನಾಟಕ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೀದರ ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಸ್ಪಂದಿಸಬೇಕು. ಮುಂದಿನ ದಿನಗಳಲ್ಲಿ ಮತ್ತೆ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಅರ್ಜಿಗಳ ಕುರಿತು ಸ್ಪಂದಿಸಿಲ್ಲ ಎಂಬ ದೂರುಗಳು ಬರಬಾರದು. ಅರ್ಜಿಗಳ ಇತ್ಯರ್ಥಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.
ಬಸವಕಲ್ಯಾಣ ಪ್ರಾಧಿಕಾರಕ್ಕೆ ಅನುದಾನ, ಕಾರಂಜಾ ಸಂತ್ರಸ್ತರ ಬೇಡಿಕೆ, ರೈತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಬೀದರ ಜಿಲ್ಲೆ ಅಭಿವೃದ್ಧಿಗಾಗಿ ಸರ್ಕಾರ ಸ್ಪಂದಿಸುತ್ತದೆ. ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿ ಎರಡು ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ಶೀಘ್ರದಲ್ಲಿ ಪ್ರಾರಂಭವಾಗಲಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಕುರಿತು ಶಾಸಕ ಬಿ. ನಾರಾಯಣರಾವ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅನುಭವ ಮಂಟಪಕ್ಕೆ ಎಷ್ಟಾದರೂ ಪರವಾಗಿಲ್ಲ ಅನುದಾನ ಘೊಷಣೆ ಮಾಡಿ ಎಂದು ಒತ್ತಾಯಿಸಿದರು. ಆದರೆ, ಮುಖ್ಯಮಂತ್ರಿಗಳು ಈ ಕುರಿತು ಯಾವುದೇ ಮಾತನಾಡದೇ ಸುದ್ದಿಗೋಷ್ಠಿ ಮುಕ್ತಾಯ ಮಾಡಿದರು.
ಸಹಕಾರ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ಕ್ರೀಡಾ ಖಾತೆ ಸಚಿವ ರಹೀಂಖಾನ್, ಶಾಸಕ ಬಿ. ನಾರಾಯಣರಾವ್, ವಿಧಾನ ಪರಿಷತ್ತ ಸದಸ್ಯರಾದ ವಿಜಯಸಿಂಗ್, ಡಾ| ಚಂದ್ರಶೇಖರ ಪಾಟೀಲ ಸೇರಿದಂತೆ ಅನೇಕ ರಾಜಕೀಯ ಧುರಿಣರು ಹಾಗೂ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.