ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
Team Udayavani, Jul 10, 2019, 10:32 AM IST
ಬೀದರ್: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೀದರ್: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಮಂಗಳವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯದ ಜನ ಬಹುಮತ ನೀಡದಿದ್ದರೂ ಬಿಜೆಪಿ ಅಧಿಕಾರಕ್ಕಾಗಿ ವಾಮಮಾರ್ಗ ಅನುಸರಿಸುತ್ತಿದೆ. ಪ್ರಜಾಪ್ರಭುತ್ವದ ವಿರುದ್ಧ ನಡೆದುಕೊಳ್ಳುತ್ತಿದೆ ಎಂದು ದೂರಿದರು. ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾಂಗ್ರೆಸ್ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಿದ್ದಾರೆ. ಅನೇಕ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಕೈಬಿಡಬೇಕು. ಜನ ನೀಡಿರುವ ತೀರ್ಪನ್ನು ಗೌರವಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಕಾರ್ಯದರ್ಶಿಗಳಾದ ಅಮೃತರಾವ್ ಚಿಮಕೋಡೆ, ಇರ್ಷಾದ್ ಅಲಿ ಪೈಲ್ವಾನ್, ಮುಖಂಡರಾದ ಶಂಕರ ದೊಡ್ಡಿ, ರಾಜಶೇಖರ ಪಾಟೀಲ ಅಷ್ಟೂರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಕಾರ್ಯದರ್ಶಿ ಪರ್ವೇಜ್ ಕಮಲ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ್, ನಾಗನಾಥ ಪಾಟೀಲ, ನಯೀಮ್ ಕಿರ್ಮಾನಿ, ಸುನೀಲ ಬಚ್ಚನ್, ಎಂ.ಡಿ. ಬಾಬಾ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.