ಸಂಚಾರಿ ನಿಯಮ ಉಲ್ಲಂಘನೆಯಾಗದಂತೆ ನಿಗಾ ವಹಿಸಿ

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

Team Udayavani, Aug 30, 2019, 3:56 PM IST

30-Agust-30

ಬೀದರ: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ|ಎಚ್.ಆರ್‌. ಮಹಾದೇವ ಮಾತನಾಡಿದರು.

ಬೀದರ: ಸಂಚಾರಿ ನಿಯಮಗಳ ಉಲ್ಲಂಘನೆ ಮತ್ತು ಅದಕ್ಕೆ ಸಂಬಂಧಪಟ್ಟ ದಂಡಗಳ ವಿವರ ಪಟ್ಟಿಯನ್ನು ತಯಾರಿಸಿ ಸರ್ಕಾರಿ ಬಸ್‌ಗಳ ಮೇಲೆ ಮತ್ತು ಕೆಲವು ಮುಖ್ಯ ರಸ್ತೆಗಳ ಬದಿಯಲ್ಲಿ ಪ್ರದರ್ಶಿಸಬೇಕು. ರಸ್ತೆ ಸುರಕ್ಷತೆ ಕುರಿತು ಕರಪತ್ರಗಳನ್ನು ಮುದ್ರಿಸಿ ಹಂಚುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ|ಎಚ್.ಆರ್‌. ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಸಭೆಯಲ್ಲಿ ಮಾತನಾಡಿದ ಅವರು, ಸಂಚಾರಿ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಅಪಘಾತಗಳ ಕುರಿತು ಚಲನಚಿತ್ರ ಮಂದಿರಗಳಲ್ಲಿ ಸ್ಲೈಡ್‌ಗಳನ್ನು ಪ್ರದರ್ಶಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ರಸ್ತೆಗಳ ಮೇಲೆ ಅಗತ್ಯವಿರುವ ಕಡೆ ರೇಖಾ ಗುರುತುಗಳನ್ನು ಹಾಗೂ ಸುರಕ್ಷತಾ ಗುರುತುಗಳನ್ನು ಮಾಡಬೇಕಿದೆ. ಅಗೋಚರ ರಸ್ತೆ ತಿರುವುಗಳನ್ನು ಗುರುತಿಸಬೇಕಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಭೆಗೆ ತಿಳಿಸಿದರು. ರಸ್ತೆಯ ಮೇಲೆ ಕ್ಯಾಟ್ ಐಸ್‌, ಎಡ್ಜ್ ಮಾರ್ಕಿಂಗ್‌, ಝಿಬ್ರಾ ಕ್ರಾಸಿಂಗ್‌ ಅಳವಡಿಸಲು ಕ್ರಮ ವಹಿಸಬೇಕು. ಅವೈಜ್ಞಾನಿಕ ರಸ್ತೆ ತಡೆಗಳನ್ನು ಗುರುತಿಸಿ ಅವುಗಳನ್ನು ವೈಜ್ಞಾನಿಕವಾಗಿ ಪರಿವರ್ತಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ರಸ್ತೆ ಗುಂಡಿಗಳು, ಅಗೆದಿರುವ ರಸ್ತೆಗಳನ್ನು ಸರಿಪಡಿಸುವುದು, ಮ್ಯಾನ್‌ ಹೋಲ್ಸ್ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಈ ವೇಳೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಮಾತನಾಡಿ, ಜಿಲ್ಲೆಯಲ್ಲಿ ವಿಶಾಲವಾದ ರಸ್ತೆಗಳಿವೆ. ಆದರೆ ಕೆಲವು ಬೀದಿ ವ್ಯಾಪಾರಸ್ಥರು ರಸ್ತೆಯ ಎರಡೂ ಬದಿಗಳನ್ನು ಆವರಿಸಿ ಸುಗಮ ರಸ್ತೆ ಸಂಚಾರಕ್ಕೆ ಸಮಸ್ಯೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಗರದ ಯಾವ ಯಾವ ಕಡೆಗಳಲ್ಲಿ ರಸ್ತೆಗಳನ್ನು ಅತಿಕ್ರಮಿಸಿರುವುದು ಕಂಡುಬರುತ್ತದೋ ಅಲ್ಲಿ ಅಂತಹ ಅಂಗಡಿಗಳ ತೆರವಿಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಮತ್ತು ಬೀದರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಟಿ.ವಿಶ್ವನಾಥ ಮಾತನಾಡಿ, ಜಿಲ್ಲಾದ್ಯಂತ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಈಗಾಗಲೇ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಪೌರಾಯುಕ್ತ ಬಸಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಎಚ್.ಸಿ. ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.